ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಳಗಾವಿಯಲ್ಲಿ ಫ್ರಿಡ್ಜ್ ಸ್ಫೋಟ ಚಿಕಿತ್ಸೆ ಫಲಿಸದೆ ತಂದೆ-ಮಗ ದುರಂತ ಅಂತ್ಯ

ಬೆಳಗಾವಿಯಲ್ಲಿ ಫ್ರಿಡ್ಜ್ ಸ್ಫೋಟ ಚಿಕಿತ್ಸೆ ಫಲಿಸದೆ ತಂದೆ-ಮಗ ದುರಂತ ಅಂತ್ಯ

ಬೆಳಗಾವಿ: ನಗರದಲ್ಲಿ ಗಣೇಶ ಚತುರ್ಥಿ ಹಬ್ಬದ (Belagavi) ಸಂಭ್ರಮದ ನಡುವೆಯೇ ಸಂಭವಿಸಿದ್ದ ಭೀಕರ ಫ್ರಿಡ್ಜ್ ಸ್ಫೋಟ (Fire Mishap) ಹಾಗೂ ಅಗ್ನಿ ಅವಘಡ ಪ್ರಕರಣದಲ್ಲಿ, ಸಾವು-ಬದುಕಿನ (Tragedy) ನಡುವೆ ಹೋರಾಡುತ್ತಿದ್ದ ತಂದೆ ಮತ್ತು ಮಗ ಇಬ್ಬರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಂದೇ ಕುಟುಂಬದ ಆರೂ ಜನರು ಈ ಕ್ರೂರ ದುರಂತಕ್ಕೆ ಬಲಿಯಾಗಿದ್ದು, ಇಡೀ ಕುಟುಂಬವೇ ಇಲ್ಲದಂತಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಗಜಾನನ ದಮೋನೆ (61) ಮತ್ತು ಅವರ ಪುತ್ರ ರೋಷನ್ ದಮೋನೆ (21) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ದುರ್ದೈವಿಗಳಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಫಲಿಸದ ಪ್ರಾರ್ಥನೆ: ಆಸ್ಪತ್ರೆಯಲ್ಲಿ ಕೊನೆಗೊಂಡ ಹೋರಾಟ

ಸೆಪ್ಟೆಂಬರ್ 14ರ ಸೋಮವಾರ ರಾತ್ರಿ ನಗರದ ಚವ್ಹಾಟ ಗಲ್ಲಿಯಲ್ಲಿರುವ ಶೆಡ್‌ ಮಾದರಿಯ ಮನೆಯಲ್ಲಿ ಈ ದುರಂತ ಸಂಭವಿಸಿತ್ತು. ಘಟನೆ ನಡೆದಾಗ ಸ್ಥಳೀಯರು ತಕ್ಷಣವೇ ಧಾವಿಸಿ ಬಂದು ಬೆಂಕಿಯ ಕೆನ್ನಾಲೆಯಲ್ಲಿದ್ದ ಗಜಾನನ ಮತ್ತು ರೋಷನ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು. ಇಬ್ಬರೂ ಜೀವ ಉಳಿಸಿಕೊಂಡು ಬರಲಿ ಎಂದು ನೆರೆಹೊರೆಯವರು ಹಾಗೂ ಸಂಬಂಧಿಕರು ಕಣ್ಣೀರಿಡುತ್ತಾ ಪ್ರಾರ್ಥಿಸುತ್ತಿದ್ದರು. ಆದರೆ, ವೈದ್ಯರ ಸತತ ಪ್ರಯತ್ನ ಮತ್ತು ಸಾರ್ವಜನಿಕರ ಪ್ರಾರ್ಥನೆ ಫಲಿಸದೆ, ಬುಧವಾರ ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರೂ ಮೃತಪಟ್ಟಿದ್ದಾರೆ.

ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಕಾದಿತ್ತು ಕರಾಳ ರಾತ್ರಿ

ಗಣೇಶ ಚತುರ್ಥಿಯ ದಿನದಂದು ಕುಟುಂಬಸ್ಥರು ಶ್ರದ್ಧಾ ಭಕ್ತಿಯಿಂದ ಮನೆಯಲ್ಲಿ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿದ್ದರು. ರಾತ್ರಿ ಕುಟುಂಬದವರೆಲ್ಲರೂ ಒಟ್ಟಾಗಿ ಊಟ ಮಾಡಿ ಸಂಭ್ರಮದಿಂದ ನಿದ್ರೆಗೆ ಜಾರಿದ್ದರು. ಆದರೆ, ಮಧ್ಯರಾತ್ರಿ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಸ್ಫೋಟಗೊಂಡಿತ್ತು. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿಕೊಂಡಿದ್ದರಿಂದ, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈ ಬಡ ಕುಟುಂಬಕ್ಕೆ ತಪ್ಪಿಸಿಕೊಳ್ಳಲು ಅವಕಾಶವೇ ಸಿಗಲಿಲ್ಲ.

ಘಟನಾ ಸ್ಥಳದಲ್ಲೇ ಶಾರದಾ ದಮೋನೆ, ಪ್ರಿಯಾ ದಮೋನೆ, ಗಂಗಾ ದಮೋನೆ ಹಾಗೂ ಭಾರತಿ ದಮೋನೆ ಉಸಿರುಗಟ್ಟಿ ಹಾಗೂ ಸುಟ್ಟು ಕರಕಲಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದರು. ಕಿರುಚಾಟ ಕೇಳಿ ಓಡಿಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸುವಷ್ಟರಲ್ಲಿ ಬಹುತೇಕ ಹಾನಿಯಾಗಿತ್ತು. ಹಬ್ಬದ ನೆಪದಲ್ಲಿ ಖುಷಿಯಾಗಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದ್ದು, ಬೆಳಗಾವಿ ಜನತೆಯನ್ನು ತೀವ್ರ ಶೋಕದಲ್ಲಿ ಮುಳುಗಿಸಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು