ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇಶದಲ್ಲಿ ಶೀಘ್ರವೇ 10 ಮತ್ತು 20 ರೂಗಳ ಪ್ಲಾಸ್ಟಿಕ್ ನೋಟುಗಳ – ಪ್ರಾಯೋಗಿಕ ಪರೀಕ್ಷೆ

ದೇಶದಲ್ಲಿ ಶೀಘ್ರವೇ 10 ಮತ್ತು 20 ರೂಗಳ ಪ್ಲಾಸ್ಟಿಕ್ ನೋಟುಗಳ – ಪ್ರಾಯೋಗಿಕ ಪರೀಕ್ಷೆ

ನವದೆಹಲಿ : ದೇಶದಲ್ಲಿ ಪ್ಲಾಸ್ಟಿಕ್ ನೋಟು (Plastic Notes)ಗಳನ್ನು ಚಲಾವಣೆಗೆ ತರುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸಾಮಾನ್ಯ ಕಾಗದದ ನೋಟುಗಳಿಗಿಂತ ದೀರ್ಘಕಾಲ ಬಾಳಿಕೆ ಬರುವ ₹10 ಹಾಗೂ ₹20 ಮುಖಬೆಲೆಯ ಪ್ಲಾಸ್ಟಿಕ್ ನೋಟುಗಳ ಪ್ರಾಯೋಗಿಕ ಪರೀಕ್ಷೆಯನ್ನು  ಆರಂಭಿಸಲು ಆರ್‌ಬಿಐ ಸಿದ್ಧತೆ ನಡೆಸಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಹಸಿರು ನಿಶಾನೆ ತೋರಿದೆ.

ಈ ಹಿನ್ನೆಲೆಯಲ್ಲಿ ನೋಟುಗಳ ತಯಾರಿಕೆಗೆ ಅಗತ್ಯವಿರುವ ವಿಶೇಷ ಕಚ್ಚಾವಸ್ತುಗಳ ಪೂರೈಕೆಗಾಗಿ ಜಾಗತಿಕ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಆರ್‌ಬಿಐನ ಅಂಗಸಂಸ್ಥೆಯಾದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್ (ಬಿಆರ್‌ಬಿಎನ್‌ಎಂಪಿಎಲ್) ಈ ಮಹತ್ವಾಕಾಂಕ್ಷಿ ಯೋಜನೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಪ್ಲಾಸ್ಟಿಕ್ ನೋಟುಗಳ ಮೇಲೆ ಮುದ್ರಣ ಮತ್ತು ಶಾಯಿ ಸಮರ್ಪಕವಾಗಿ ಕೂರಲು ‘ಬಿಒಪಿಪಿ’ (ಬೈಆಕ್ಸಿಯಲಿ ಓರಿಯೆಂಟೆಡ್ ಪಾಲಿಪ್ರೊಪಿಲೀನ್) ಎಂಬ ವಿಶೇಷ ಪಾಲಿಮರ್ ಸಬ್‌ಸ್ಟ್ರೇಟ್ ವಸ್ತುವಿನ ಅಗತ್ಯವಿದೆ. ಇದಕ್ಕಾಗಿ ಒಟ್ಟು 68,000 ರೀಮ್‌ಗಳಷ್ಟು ಕಚ್ಚಾವಸ್ತು ಬೇಕಾಗಿದ್ದು, ₹10 ನೋಟುಗಳಿಗೆ 34,000 ರೀಮ್ ಹಾಗೂ ₹20 ನೋಟುಗಳಿಗೆ 34,000 ರೀಮ್‌ಗಳನ್ನು ಸಂಗ್ರಹಿಸಲು ಸಿದ್ಧತೆಗಳು ನಡೆದಿವೆ.

ಜಂಟಿ ಬಿಡ್ ಸಲ್ಲಿಸಿದ ಭಾರತ ಮತ್ತು ಅಮೆರಿಕದ ಸಂಸ್ಥೆಗಳು

ಈ ವಿಶೇಷ ಕಚ್ಚಾವಸ್ತುವನ್ನು ಪೂರೈಸಲು ಭಾರತದ ಯುಫ್ಲೆಕ್ಸ್ (UFlex) ಹಾಗೂ ಅಮೆರಿಕ ಮೂಲದ ಸ್ಪೆಕ್ಟ್ರಾ ಸಿಸ್ಟಮ್ಸ್ (Spectra Systems) ಸಂಸ್ಥೆಗಳು ಜಂಟಿಯಾಗಿ ಬಿಡ್ ಸಲ್ಲಿಸಿವೆ ಎಂದು ತಿಳಿದುಬಂದಿದೆ. ಈ ಸಹಭಾಗಿತ್ವದಲ್ಲಿ ಯುಫ್ಲೆಕ್ಸ್ ಸಂಸ್ಥೆಯು ನೋಟುಗಳ ಮೂಲ ತಯಾರಿಕೆಯನ್ನು ನೋಡಿಕೊಂಡರೆ, ಸ್ಪೆಕ್ಟ್ರಾ ಸಿಸ್ಟಮ್ಸ್ ಸಂಸ್ಥೆಯು ಅತ್ಯಾಧುನಿಕ ಭದ್ರತಾ ವೈಶಿಷ್ಟ್ಯಗಳನ್ನು ಅಳವಡಿಸುವ ಕಾರ್ಯವನ್ನು ನಿರ್ವಹಿಸಲಿದೆ. ಆದಾಗ್ಯೂ, ಈ ಕುರಿತು ಕಂಪನಿಗಳಿಂದ ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

ಹಳೆಯ ಯೋಜನೆಗೆ ಮರುಜೀವ ನೀಡಿದ ಆಧುನಿಕ ತಂತ್ರಜ್ಞಾನ

ಪ್ಲಾಸ್ಟಿಕ್ ನೋಟುಗಳನ್ನು ತರುವ ಪ್ರಸ್ತಾಪ ಹೊಸದೇನಲ್ಲ. ಕೇಂದ್ರ ಸರ್ಕಾರವು 2012ರಲ್ಲೇ ಕೊಚ್ಚಿ, ಮೈಸೂರು, ಜೈಪುರ, ಭುವನೇಶ್ವರ ಮತ್ತು ಶಿಮ್ಲಾ ನಗರಗಳಲ್ಲಿ ಪ್ರಾಯೋಗಿಕವಾಗಿ ₹10 ಪ್ಲಾಸ್ಟಿಕ್ ನೋಟುಗಳನ್ನು ಪರಿಚಯಿಸಲು ಯತ್ನಿಸಿತ್ತು. ಆದರೆ, ಅಂದಿನ ಎಟಿಎಂಗಳು ಮತ್ತು ನಗದು ಯಂತ್ರಗಳಲ್ಲಿ ಎದುರಾದ ತಾಂತ್ರಿಕ ಅಡಚಣೆಗಳಿಂದಾಗಿ ಆ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ಅತ್ಯಾಧುನಿಕ ತಂತ್ರಜ್ಞಾನಗಳು ಲಭ್ಯವಿರುವುದರಿಂದ, ಈ ಪ್ರಕ್ರಿಯೆಯನ್ನು ಮತ್ತೆ ಚುರುಕುಗೊಳಿಸಲಾಗಿದ್ದು ಶೀಘ್ರದಲ್ಲೇ ಸಾರ್ವಜನಿಕರ ಕೈಗೆ ಪ್ಲಾಸ್ಟಿಕ್ ನೋಟುಗಳು ಸಿಗುವ ಸಾಧ್ಯತೆಯಿದೆ.

ವಿಷಯಗಳು: #india #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು