ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ

ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ

ರಿಯಾದ್: ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿರುವ ಕಿಂಗ್ ಫಹದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬುಧವಾರ ತಡರಾತ್ರಿ ಭೀಕರ ದಾಳಿ ನಡೆದಿದೆ. ಘಟನೆಯಲ್ಲಿ ಓರ್ವ ಭಾರತೀಯ ನಾಗರಿಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಭಾರತೀಯರು ಸೇರಿ ಎಂಟು ಜನರು ತೀವ್ರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಬುಧವಾರ ತಡರಾತ್ರಿ ವಿಮಾನ ನಿಲ್ದಾಣವನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ದಾಳಿಯ ತೀವ್ರತೆಗೆ ವಿಮಾನ ನಿಲ್ದಾಣದ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ತಕ್ಷಣವೇ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಿ, ಬೇರೆಡೆಗೆ ತಿರುಗಿಸಲಾಗಿತ್ತು. ದಾಳಿಯಲ್ಲಿ ಓರ್ವ ಸೌದಿ ಪ್ರಜೆ ಹಾಗೂ ಓರ್ವ ಭಾರತೀಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸೌದಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತವಾಗಿ ಖಚಿತಪಡಿಸಿದೆ.ಈ ನಡುವೆ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜೊತೆಗೆ, ಸಂತ್ರಸ್ತರ ಕುಟುಂಬಗಳನ್ನು ಸಂಪರ್ಕಿಸಲಾಗುತ್ತಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಇರಾನ್ ಬೆಂಬಲಿತ ಯೆಮನ್‌ನ ಹೌತಿ ಬಂಡುಕೋರರು ಸೌದಿ ಅರೇಬಿಯಾದ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ತೀವ್ರಗೊಳಿಸಿದ್ದಾರೆ.

https://platform.twitter.com/embed/Tweet.html?creatorScreenName=manjulaujwal&dnt=false&embedId=twitter-widget-0&features=eyJ0ZndfdGltZWxpbmVfbGlzdCI6eyJidWNrZXQiOltdLCJ2ZXJzaW9uIjpudWxsfSwidGZ3X2ZvbGxvd2VyX2NvdW50X3N1bnNldCI6eyJidWNrZXQiOnRydWUsInZlcnNpb24iOm51bGx9LCJ0ZndfdHdlZXRfZWRpdF9iYWNrZW5kIjp7ImJ1Y2tldCI6Im9uIiwidmVyc2lvbiI6bnVsbH0sInRmd19yZWZzcmNfc2Vzc2lvbiI6eyJidWNrZXQiOiJvbiIsInZlcnNpb24iOm51bGx9LCJ0ZndfZm9zbnJfc29mdF9pbnRlcnZlbnRpb25zX2VuYWJsZWQiOnsiYnVja2V0Ijoib24iLCJ2ZXJzaW9uIjpudWxsfSwidGZ3X21peGVkX21lZGlhXzE1ODk3Ijp7ImJ1Y2tldCI6InRyZWF0bWVudCIsInZlcnNpb24iOm51bGx9LCJ0ZndfZXhwZXJpbWVudHNfY29va2llX2V4cGlyYXRpb24iOnsiYnVja2V0IjoxMjA5NjAwLCJ2ZXJzaW9uIjpudWxsfSwidGZ3X3Nob3dfYmlyZHdhdGNoX3Bpdm90c19lbmFibGVkIjp7ImJ1Y2tldCI6Im9uIiwidmVyc2lvbiI6bnVsbH0sInRmd19kdXBsaWNhdGVfc2NyaWJlc190b19zZXR0aW5ncyI6eyJidWNrZXQiOiJvbiIsInZlcnNpb24iOm51bGx9LCJ0ZndfdXNlX3Byb2ZpbGVfaW1hZ2Vfc2hhcGVfZW5hYmxlZCI6eyJidWNrZXQiOiJvbiIsInZlcnNpb24iOm51bGx9LCJ0ZndfdmlkZW9faGxzX2R5bmFtaWNfbWFuaWZlc3RzXzE1MDgyIjp7ImJ1Y2tldCI6InRydWVfYml0cmF0ZSIsInZlcnNpb24iOm51bGx9LCJ0ZndfbGVnYWN5X3RpbWVsaW5lX3N1bnNldCI6eyJidWNrZXQiOnRydWUsInZlcnNpb24iOm51bGx9LCJ0ZndfdHdlZXRfZWRpdF9mcm9udGVuZCI6eyJidWNrZXQiOiJvbiIsInZlcnNpb24iOm51bGx9fQ%3D%3D&frame=false&hideCard=false&hideThread=false&id=2113166886003220569&lang=kn&origin=https%3A%2F%2Fwww.kannadaprabha.com%2Fworld%2F2026%2FOct%2F22%2Fone-indian-national-killed-two-injured-in-attack-on-king-fahd-airport-in-saudi-arabia&sessionId=f0532cd02053488239ae8cbd430b2bd470502181&siteScreenName=KannadaPrabha&theme=light&widgetsVersion=6a3ad42b224df%3A1778106238597&width=550px

ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ದಾಳಿಯಲ್ಲಿ ಮೃತಪಟ್ಟ ಮತ್ತೊಬ್ಬರು ಸೌದಿ ಅರೇಬಿಯಾದ ಪ್ರಜೆಯಾಗಿದ್ದಾರೆ. ಬುಧವಾರ ತಡರಾತ್ರಿ ನಡೆದ ದಾಳಿಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ವಿಮಾನ ನಿಲ್ದಾಣದ ಕೆಲವು ಭಾಗಗಳಿಗೆ ಹಾನಿಯಾಗಿದೆ ಎಂದು ತಿಳಿಸಿದೆ.

ಜಾಗತಿಕ ವಿಮಾನಗಳ ಸಂಚಾರದ ಮಾಹಿತಿ ನೀಡುವ ಫ್ಲೈಟ್‌ರಾಡಾರ್24, ವಿಮಾನಗಳನ್ನು ಬೇರೆ ಮಾರ್ಗಗಳಿಗೆ ತಿರುಗಿಸಲಾಗಿದೆ ಎಂದು ಎಕ್ಸ್‌ನಲ್ಲಿ ತಿಳಿಸಿದೆ.

ಇದೇ ವೇಳೆ, ಸೌದಿ ಅರೇಬಿಯಾದ ಶೈಬಾ ತೈಲಕ್ಷೇತ್ರದ ಮೇಲೆ ನಡೆದ ಡ್ರೋನ್ ದಾಳಿಯಲ್ಲಿ ಮತ್ತೊಬ್ಬ ಭಾರತೀಯ ಪ್ರಜೆ ಗಾಯಗೊಂಡಿದ್ದು, ಅವರಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸಲಾಗುವುದು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಸೌದಿ ಅರೇಬಿಯಾದ ಇಂಧನ ಸಚಿವಾಲಯದ ಪ್ರಕಾರ, ಬುಧವಾರ ಬೆಳಿಗ್ಗೆ ಸೌದಿ ಅರಾಮ್ಕೊದ ಶೈಬಾ ತೈಲಕ್ಷೇತ್ರದಲ್ಲಿರುವ ಒಂದು ಸೌಲಭ್ಯವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲು ಯತ್ನಿಸಲಾಗಿದೆ. ಈ ವೇಳೆ ವಾಯು ರಕ್ಷಣಾ ವ್ಯವಸ್ಥೆಯು ಡ್ರೋನ್ ಅನ್ನು ತಡೆದಿದೆ ಎಂದು ತಿಳಿಸಿದೆ.

ವಿಷಯಗಳು: #india #news
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version