ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಂಬೇಡ್ಕರ್ ವಾದಿ, ಜನಪರ ಹೋರಾಟಗಾರ, ಕ್ರಾಂತಿಕಾರಿ ಮೈಸೂರು ಮಂಟೆ ಲಿಂಗಯ್ಯ ನಿಧನ

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಅಂಬೇಡ್ಕರ್ ವಾದಿ, ಜನಪರ ಹೋರಾಟಗಾರ, ಕ್ರಾಂತಿಕಾರಿ ಮೈಸೂರು ಮಂಟೆ ಲಿಂಗಯ್ಯ ನಿಧನ

ಮೈಸೂರು :- ಜನಪರ ಹೋರಾಟಗಾರ, ಅಂಬೇಡ್ಕರ್ ವಾದಿ, ವೈಚಾರಿಕ ಚಿಂತಕ, ವಿಚಾರವಾದಿ, ಕ್ರಾಂತಿಕಾರಿ ಮಂಟೇ ಲಿಂಗಯ್ಯ ರವರು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ಸಂಜೆ ನಿಧನರಾಗಿರುತ್ತಾರೆ.

ಹಠಾತ್ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಮಂಟೇ ಲಿಂಗಯ್ಯ ರವರು ಇಹಲೋಕ ತ್ಯಜಿಸಿದ್ದು, ಕೆಸರೆ ಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೃತರ ಅಂತ್ಯ ಕ್ರಿಯೆ ಮಂಗಳವಾರ ನಡೆಯಲಿದೆ.

ಬಡ ಜನರ ಪರ ಕಾಳಜಿ ಹೊಂದಿದ್ದ ಮಂಟೇ ಲಿಂಗಯ್ಯ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟ ಮಾಡಿದವರಲ್ಲಿ ಮುಂಚೂಣಿಗರು. ಅಧಿಕಾರಸ್ತರು, ಜನಪ್ರತಿನಿಧಿಗಳು ಮತ್ತು ಆಳುವ ಸರ್ಕಾರಕ್ಕೆ ಸಿಂಹ ಸ್ವಪ್ನ ರಾಗಿದ್ದ ಅವರು ಹೋರಾಟದ ಮೂಲಕವೇ ಸಮಾಜವನ್ನು ಎಚ್ಚರಿಸಿದ್ದರು.

ಸದಾ ಕಾಲ ನೊಂದ ಜನರ ಸಂಕಷ್ಟಕ್ಕೆ ಮಿಡಿಯುತ್ತಿದ್ದ ಅವರು ಎಜೆಎಂಎಸ್ ಸಂಘಟನೆ ಹುಟ್ಟು ಹಾಕಿ ಜನಪರ ಚಳವಳಿಯಲ್ಲಿ ಸಕ್ರಿಯರಾಗಿದ್ದರು.
ಬಡ ಜನರ ಬಗ್ಗೆ ಅವರಿಗಿದ್ದ ಕಾಳಜಿ ಎಷ್ಟಿತ್ತೆಂದರೆ ರಾಜ ವೈಭವವನ್ನು ಬಿಂಬಿಸುವ ಮೈಸೂರು ದಸರಾಕ್ಕೆ ಪ್ರತಿಯಾಗಿ ಬಡವರ ದಸರಾವನ್ನು ಅದ್ದೂರಿಯಾಗಿ ಆಚರಿಸಿ ರಾಜ್ಯದ ಗಮನ ಸೆಳೆದಿದ್ದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತವನ್ನು ಮೈಗೂಡಿಸಿಕೊಂಡಿದ್ದ ಅವರು ಅಂಬೇಡ್ಕರ್ ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಸದಾ ಕಾಲ ತಲುಪಿಸುತ್ತಿದ್ದರು, ಅಂಬೇಡ್ಕರ್ ವಿಚಾರವಾಗಿ ಗಂಟೆಗಟ್ಟಲೆ ಭಾಷಣ ಮಾಡುತ್ತಿದ್ದರು. ರಾಜ್ಯದ ಹಲವಾರು ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಅಂಬೇಡ್ಕರ್ ವಿಚಾರಧಾರೆ ಜೊತೆಗೆ ಪ್ರಗತಿಪರ ಚಿಂತನೆಯ ಕಿಚ್ಚು ಹಚ್ಚಿದ್ದರು.

ವೈಜ್ಞಾನಿಕ ಮನೋಭಾವನೆಯಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು ಹಿಂದೂ ಧರ್ಮದಲ್ಲಿನ ಮೌಡ್ಯದ ವಿರುದ್ಧ ಸಮರವನ್ನೇ ಸಾರಿದ್ದರು, ಯಾವಾಗಲೂ ಮೌಢ್ಯದ ವಿರುದ್ಧ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುತ್ತಿದ್ದ ಅವರು ಮೌಡ್ಯ ತೊರೆದು ಅಂಬೇಡ್ಕರ್ ಚಿಂತನೆಯ ಹಾದಿಯಲ್ಲಿ ಮುನ್ನಡೆಯುವಂತೆ ಜನಸಮೂಹವನ್ನು ಪ್ರೇರಣೆ ಮಾಡುತ್ತಿದ್ದರು. ಬಹುಜನ ಚಳುವಳಿಯನ್ನು ಕನ್ನಡ ನಾಡಿಗೆ ಪರಿಚಯಿಸಿದ್ದ ಅವರು ಬಹುಜನ ಸಮಾಜ ಪಕ್ಷವನ್ನು ಕರ್ನಾಟಕಕ್ಕೆ ತಂದಿದ್ದರು, ರಾಜಕಾರಣ ಆಷಾಢ ಭೂತಿತನ ಅವರಿಗೆ ಇಷ್ಟವಿಲ್ಲದ ಹಿನ್ನೆಲೆಯಲ್ಲಿ ಅವರು ರಾಜಕಾರಣದಿಂದ ಹಿಂದೆ ಸರಿದಿದ್ದರು.

ಪುಸ್ತಕ ಓದುವ ಪ್ರಿಯರಾಗಿದ್ದ ಅವರು ಜ್ಞಾನಕ್ಕೆ ಹಸಿವಿಲ್ಲ ಎಂಬುದು ಇವರಿಗೆ ಸಲ್ಲುತ್ತಿತ್ತು, ಇಳಿ ವಯಸ್ಸಿನಲ್ಲಿ ಅವರ ಹೋರಾಟದ ಹುಮ್ಮಸ್ಸು ಕಡಿಮೆಯಾಗಿರಲಿಲ್ಲ. ಕ್ರಾಂತಿಕಾರಿ ಮನೋಭಾವದ ಹುಟ್ಟು ಹೋರಾಟಗಾರ ಮಂಟೇ ಲಿಂಗಯ್ಯರವರ ಅಗಲಿಕೆ ಕನ್ನಡ ನಾಡಿಗೆ ದೊಡ್ಡ ನಷ್ಟವನ್ನುಂಟು ಮಾಡಿದೆ.

ವಿಷಯಗಳು: #news #peepal #peepalmedia
P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version