ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನಿವೇಶನ ಒತ್ತುವರಿ ಜಟಾಪಟಿ ಯಶ್‌ ತಾಯಿ ಪುಷ್ಪಾ– ಜಿಪಿಎ ಹೋಲ್ಡರ್ ದೇವರಾಜು ಇಬ್ಬರ ವಿರುದ್ಧ ಎಫ್‌ಐಆರ್ 

ನಿವೇಶನ ಒತ್ತುವರಿ ಜಟಾಪಟಿ ಯಶ್‌ ತಾಯಿ ಪುಷ್ಪಾ– ಜಿಪಿಎ ಹೋಲ್ಡರ್ ದೇವರಾಜು ಇಬ್ಬರ ವಿರುದ್ಧ ಎಫ್‌ಐಆರ್ 

ಹಾಸನ: ನಗರದ ವಿದ್ಯಾನಗರ ಬಡಾವಣೆಯಲ್ಲಿ ನಿವೇಶನ ಒತ್ತುವರಿ ವಿಚಾರವಾಗಿ ಖ್ಯಾತ ಚಿತ್ರ ನಟ ಯಶ್ ಅವರ ತಾಯಿ ಪುಷ್ಪಾ ಹಾಗೂ ನಿವೇಶನ ಜಿಪಿಎ ಹೋಲ್ಡರ್ ದೇವರಾಜು ನಡುವಿನ ಜಟಾಪಟಿ ತೀವ್ರಗೊಂಡಿದೆ. ಈ ಸಂಬಂಧ ಬಡಾವಣೆ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಿವೇಶನದಲ್ಲಿ ಅಳವಡಿಸಲಾಗಿದ್ದ ಕೋರ್ಟ್ ಆದೇಶದ ಬೋರ್ಡ್ ಅನ್ನು ಕಿತ್ತು ಹಾಕಿದ ಹಿನ್ನೆಲೆಯಲ್ಲಿ ವಿವಾದ ಆರಂಭಗೊಂಡಿದೆ. ಈ ಬಗ್ಗೆ ಪ್ರಶ್ನಿಸಲು ತೆರಳಿದ ದೇವರಾಜು ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ನಿವೇಶನ ಒತ್ತುವರಿ ತೆರವುಗೊಳಿಸುವ ಸಂಬಂಧ ಪುಷ್ಪಾ ಹಾಗೂ ಜಿಪಿಎ ಹೋಲ್ಡರ್ ದೇವರಾಜು ನಡುವೆ ಈ ಹಿಂದೆಯೂ ದೂರು–ಪ್ರತಿ ದೂರುಗಳು ದಾಖಲಾಗಿದ್ದವು. ಕೋರ್ಟ್ ಆದೇಶ ಪಾಲಿಸುವಂತೆ ಪೊಲೀಸರು ಇಬ್ಬರಿಗೂ ತಿಳಿ ಹೇಳಿದ್ದರು ಎನ್ನಲಾಗಿದೆ. ಆದರೆ ಗುರುವಾರ ಪುಷ್ಪಾ ಅವರ ಸಂಬಂಧಿಕರು ನಿವೇಶನದಲ್ಲಿ ಹಾಕಲಾಗಿದ್ದ ಕೋರ್ಟ್ ಆದೇಶದ ಬೋರ್ಡ್ ಅನ್ನು ಕಿತ್ತು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಷಯ ತಿಳಿದು ಸ್ಥಳಕ್ಕೆ ತೆರಳಿದ ದೇವರಾಜು ಅವರನ್ನು ಪುಷ್ಪಾ ಅವರ ಅಕ್ಕನ ಮಗ ದುರ್ಗಾ ಪ್ರಸಾದ್, ಪಕ್ಕದ ನಿವೇಶನ ಮಾಲೀಕ ಹಾಗೂ ಅಳತೆ ಮತ್ತು ತೂಕ ಮಾಪನ ಇನ್ಸ್‌ಪೆಕ್ಟರ್ ನಟರಾಜ್ ಹಾಗೂ ಅವರ ಸಹಚರರು ಹಲ್ಲೆ ನಡೆಸಿದ್ದಾರೆ ಎಂದು ದೇವರಾಜು ಬಡಾವಣೆ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಜನಮಿತ್ರ ಪತ್ರಿಕೆಯೊಂದಿಗೆ ಮಾತನಾಡಿದ ದೇವರಾಜು, “ಕೋರ್ಟ್ ಆದೇಶ ಪಾಲಿಸುವಂತೆ ಪೊಲೀಸರು ಸೂಚಿಸಿದ್ದರೂ ಪುಷ್ಪಾ ಅವರ ಸಂಬಂಧಿಕರು ಬೋರ್ಡ್ ಕಿತ್ತು ಹಾಕಿದ್ದಾರೆ. ಈ ಬಗ್ಗೆ ಪ್ರಶ್ನಿಸಲು ತೆರಳಿದಾಗ ನನ್ನ ಮೇಲೆ ಹಲ್ಲೆಗೆ ಮುಂದಾದರು. ಈ ಕುರಿತು ಗುರುವಾರ ರಾತ್ರಿ ದೂರು ನೀಡಿದ್ದೇನೆ,” ಎಂದು ಹೇಳಿದರು.

ಇನ್ನೂ ಶುಕ್ರವಾರ ಕೂಡ ನಿವೇಶನದಲ್ಲಿ ಗುಂಡಿ ತೋಡಿ ಕಾಮಗಾರಿ ನಡೆಸಲಾಗುತ್ತಿತ್ತು. ತಕ್ಷಣ 112ಕ್ಕೆ ಕರೆ ಮಾಡಿ ಪೊಲೀಸರನ್ನು ಸ್ಥಳಕ್ಕೆ ಕರೆಸಿಕೊಂಡು ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಈ ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದ್ದು, ಕೋರ್ಟ್ ಆದೇಶ ಉಲ್ಲಂಘನೆ ಬಗ್ಗೆ ನ್ಯಾಯಾಧೀಶರ ಗಮನಕ್ಕೆ ತರಲಾಗುವುದು ಎಂದು ದೇವರಾಜು ತಿಳಿಸಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು