ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಮಂದಿ ವಿರುದ್ಧ ಎಫ್ಐಆರ್ ದಾಖಲು

ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಮಂದಿ ವಿರುದ್ಧ ಎಫ್ಐಆರ್ ದಾಖಲು

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮತ್ತೊಂದು ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಅವರ ಮೇಲೆ ಆರೋಪ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಹತ್ಯೆಯಾದ ಸಂಘಪರಿವಾರದ ರೌಡಿ ಶೀಟರ್ ಸುಹಾಸ್ ಶೆಟ್ಟಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ  RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಕಾರ್ಯಕ್ರಮ ಆಯೋಜಿಸಿದ್ದ 15 ಹಿಂದುತ್ವದ ಕಾರ್ಯಕರ್ತರ ಮೇಲೂ ಎಫ್ಐಆರ್ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದಲ್ಲಿ ಮೇ.12 ರಂದು ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 353(2) BNSರಡಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ಸರಣಿ ಕೊಲೆ ಬೆನ್ನಲೇ ರಾತ್ರೋ ರಾತ್ರಿ ನೂತನ ಎಸ್ ಪಿ ಹಿಂದೂ ಸಂಘಟನೆಗಳ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮಧ್ಯರಾತ್ರಿ ಮನೆಗಳಿಗೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಈ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡಿದ್ದ ಕಾರ್ಯಕರ್ತರ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ. ಯಾವುದೇ ಅನುಮತಿ ಪಡೆಯದೇ ಗುಂಪುಕಟ್ಟಿಕೊಂಡು ಬಂದು ಕಡಬ ಠಾಣೆಯ ಮುಂದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಎಫ್ ಐ ಆರ್ ದಾಖಲಿಸಲಾಗಿದೆ.

ಪ್ರಮೋದ್ ರೈ ನಂದಗುರಿ, ತಿಲಕ್ ನಂದಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ್ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನುಂದಗುರಿ, ಶ್ರೇಯತ್, ಉಮೇಶ್ , ರಾಧಾಕೃಷ್ಣ, ಜಯಂತ್ ಸೇರಿದಂತೆ 15 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು