ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಟಾಕ್ಸಿಕ್” ಸಿನೆಮಾ ನಿರ್ಮಾಣ ಸಂಸ್ಥೆಯ ವಿರುದ್ಧ ಎಫ್ಐಆರ್ ದಾಖಲು

P

Peepal Media Desk • ಬ್ರೇಕಿಂಗ್ ಸುದ್ದಿ, ಸಿನಿಮಾ

• 1 ನಿಮಿಷದ ಓದು

“ಟಾಕ್ಸಿಕ್” ಸಿನೆಮಾ ನಿರ್ಮಾಣ ಸಂಸ್ಥೆಯ ವಿರುದ್ಧ ಎಫ್ಐಆರ್ ದಾಖಲು

ಸಿನೆಮಾ ಶೂಟಿಂಗ್ ಗಾಗಿ ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಸೂಚನೆಯಂತೆ ಸಿನೆಮಾ ನಟ ಯಶ್ ಅವರ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್ ​ರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್​​ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣವಾಗಿರುವ ಜಾಗ ಮತ್ತು ಮರ ಕಡಿದಿರುವ ಕುರಿತು ಈ ಹಿಂದೆ ವಿವಾದ ಕೇಳಿ ಬಂದಿತ್ತು. ಮರಗಳನ್ನು ಕಡಿದಿರುವ ಆರೋಪದ ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆಯವರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಜೊತೆಗೆ ಇಲಾಖೆ ಸೂಚಿಸುವ ವರೆಗೂ ಶೂಟಿಂಗ್ ಸ್ಥಗಿತಗೊಳಿಸುವಂತೆ ಸ್ಪಷ್ಟವಾಗಿ ಸೂಚಿಸಲಾಗಿತ್ತು.

ಅಷ್ಟೇ ಅಲ್ಲದೆ ಎಚ್​ಎಂಟಿ ತನಗೆ ನೀಡಲಾಗಿದ್ದ ಜಾಗವನ್ನು ಸಿನಿಮಾಗಳಿಗೆ ಬಾಡಿಗೆ ನೀಡಿ ಹಣ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಮಾಡಿದ ಜಾಗದಲ್ಲಿ ಮುಂಚೆ ಇದ್ದ ಮರಗಳು ಆ ನಂತರ ನಾಶವಾದ ಮರಗಳ ಮಾಹಿತಿ ಒದಗಿಸುವ ಸ್ಯಾಟಲೈಟ್ ಚಿತ್ರವನ್ನು ಸಹ ಬಿಡುಗಡೆ ಮಾಡಲಾಗಿತ್ತು.

ಈ ಆರೋಪಗಳಿಗೆ ಸ್ಪಂದಿಸಿದ್ದ ಎಚ್​ಎಂಟಿ, ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಆಗಿರುವ ಸ್ಥಳ ನಮ್ಮದಲ್ಲ, ಅದು ಕೆನರಾ ಬ್ಯಾಂಕ್​ಗೆ ಸೇರಿದ್ದು, ಕೆನರಾ ಬ್ಯಾಂಕ್​ಗೆ ಸೇರಿದ ಸ್ಥಳವನ್ನು ನಾವು ಬಾಡಿಗೆಗೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದಿತ್ತು. ಈ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್​ಎಂಟಿ ಲಿಮಿಟೆಡ್ ವಿರುದ್ಧವೂ ಸಹ ಎಫ್​ಐಆರ್ ದಾಖಲಾಗಿದೆ. ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಆರೋಪಿಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version