ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ FIR ದಾಖಲು

P

Peepal Media • ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ FIR ದಾಖಲು

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಲೋಕಾಯುಕ್ತ FIR ದಾಖಲಿಸಿದೆ.

ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಆಗಿದ್ದು, ಅವರ ಪತ್ನಿ ಬಿ.ಎಂ.‌ ಪಾರ್ವತಿ ಎ2, ಭಾವಮೈದು‌ನ ಮಲ್ಲಿಕಾರ್ಜುನಸ್ವಾಮಿ ಎ3 ಹಾಗೂ ಜಮೀನಿನ ಮಾಲೀಕ ದೇವರಾಜು ನಾಲ್ಕನೇ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ನೀಡಿದ ದೂರಿ‌ನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್​ 120 ಬಿ, 166, 403, 420, 426, 465, 468, 340, 351 ಅಡಿ ಎಫ್​ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್​ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ‌ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.

P

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version