ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಧ್ವೇಷ ಭಾಷಣ : ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ಐಆರ್ ದಾಖಲು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಧ್ವೇಷ ಭಾಷಣ : ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ಐಆರ್ ದಾಖಲು

ಧಾರ್ಮಿಕ ಸಭೆಯೊಂದರಲ್ಲಿ ‘ಬ್ಯಾರಿ’ ಸಮುದಾಯದ ವಿರುದ್ಧ ಅವಹೇಳನಕಾರಿ ಪದ ಬಳಸಿದ ಹಾಗೂ ಧರ್ಮಗಳ ನಡುವೆ ದ್ವೇಷ ಹುಟ್ಟಿಸಲು ಯತ್ನಿಸಿದ ಬಗ್ಗೆ ಶಾಸಕ ಹರೀಶ್‌ ಪೂಂಜ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ರಾತ್ರಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಮಾತನಾಡಿದ್ದರು.

ಸಭೆಯಲ್ಲಿ ‘ಕಂತ್ರಿ ಬ್ಯಾರಿಗಳು ನಾಲ್ಕು ಟ್ಯೂಬ್‌ಲೈಟ್ ಒಡೆದರೂ ನಾವು ಯಾರೂ ಎದೆಗುಂದಿಲ್ಲ. ದಿನ ಬೆಳಗಾಗುವಾಗ ಕಂತ್ರಿ ಬ್ಯಾರಿಗಳು ಟ್ಯೂಬ್‌ಲೈಟ್ ಒಡೆಯುತ್ತಿದ್ದಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ಊರಿನ ಯುವಕರು ಬಂದು ಹೇಳಿದರು. ಯಾರೂ ತಲೆ ಬಿಸಿ ಮಾಡಬೇಡಿ. ಬ್ರಹ್ಮಕಲಶ ಮುಗಿದು ದೃಢಕಲಶ ಆಗುವ ಮುನ್ನ ಇದನ್ನು ಮಾಡಿದ್ದು ಯಾರೆಂದು ಗೊತ್ತಾಗುತ್ತದೆ. ಗೋಪಾಲಕೃಷ್ಣ ದೇವರು ತೋರಿಸಿಕೊಡುತ್ತಾನೆ’ ಎಂದು ಹರೀಶ್ ಪೂಂಜ ಹೇಳಿದ್ದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವರ್ತಕ ಇಬ್ರಾಹಿಂ ಎಸ್‌ಬಿ ಅವರು ದೂರು ನೀಡಿದ್ದು ಭಾರತೀಯ ನ್ಯಾಯಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 196 (ಧರ್ಮಗಳ ನಡುವೆ ದ್ವೇಷ ಹುಟ್ಟಿಸುವುದು) ಹಾಗೂ ಸೆಕ್ಷನ್ 353 (2)ರ (ಶಾಂತಿಭಂಗವನ್ನು ಉಂಟುಮಾಡಲು ಉದ್ದೇಶಪೂರ್ವಕವಾಗಿ ಅವಹೇಳನ ಮಾಡುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಬ್ಯಾರಿಗಳಲ್ಲಿ ಜಾತಿ ಇಲ್ಲ ಸರ್ಕಾರಿ ಅಂಕಿ ಅಂಶ ಹೇಳುತ್ತದೆ. ಆದರೆ ಅವರಲ್ಲೂ 70ರಿಂದ 74 ಜಾತಿಗಳಿವೆ. ಆದರೆ ನಮಗೆ ಯಾರಿಗೂ ಅವರ ಜಾತಿ ಯಾವುದು ಎಂದು ಗೊತ್ತಿಲ್ಲ. ನಮಗೆ ಉಸ್ಮಾನಕ್ಕ, ಅಬ್ದುಲ್ಲ, ಇಬ್ರಾಹಿಂ ಬ್ಯಾರಿಗಳೆಂದೇ ಅವರು ಎಂದೇ ಗೊತ್ತು. ನಮ್ಮಲ್ಲಿ ಹಾಗಲ್ಲ. ಅವ ಬ್ರಾಹ್ಮಣ, ಇವ ಬಿಲ್ಲವ, ಅವ ಗೌಡ, ಕುಲಾಲ ಎಂದು ಜಾತಿ ಆಧಾರದಲ್ಲಿ ಹಿಂದುಗಳನ್ನು ಒಡೆಯುವ ಕೆಲಸ ಮಾಡುತ್ತಾರೆ. ಹಿಂದೂಗಳಾಗಿ ನಾವೂ ಒಗ್ಗಟ್ಟಿನಿಂದ ಇರಬೇಕು. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ‘ನೀನು ಹಿಂದೂವಾ ಮುಸ್ಲಿಮಾ ಎಂದು ಮಾತ್ರ ಕೇಳಿದ್ದರು. ‘ನೀವು ಶೆಟ್ರಾ, ಭಟ್ರಾ, ಬಿಲ್ಲವನಾ, ಗೌಡಾ, ದಲಿತನಾ’ ಎಂದು ಭಯೋತ್ಪಾದಕರು ಕೇಳಿದ್ದಾರೆಯೇ. ಹಿಂದುಗಳನ್ನು ಗುರಿಯಾಗಿಸಿ ಕೊಂದರು. ಆ ಕಾರಣಕ್ಕಾಗಿ ಜಾತಿ ವ್ಯವಸ್ಥೆ ಬಿಟ್ಟು ಹಿಂದೂಗಳಾಗಿ ದೇವಸ್ಥಾನ ಉಳಿಸಬೇಕು’ ಎಂದು ಹರೀಶ್ ಪೂಂಜ ಮಾತನಾಡಿದ ವಿಡಿಯೋ ವೈರಲ್ ಆಗಿತ್ತು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು