ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಾಸನದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ – ಪಾಲಿಕೆಯಿಂದ ಕಟ್ಟುನಿಟ್ಟಿನ ಕ್ರಮ

ಹಾಸನದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ – ಪಾಲಿಕೆಯಿಂದ ಕಟ್ಟುನಿಟ್ಟಿನ ಕ್ರಮ

ಹಾಸನ : ನಗರದ ರಸ್ತೆ ಹಾಗೂ ಫುಟ್‌ಪಾತ್‌ಗಳನ್ನು ಸಾರ್ವಜನಿಕರ ಬಳಕೆಗೆ ಸಂಪೂರ್ಣವಾಗಿ ಮುಕ್ತಗೊಳಿಸುವ ಉದ್ದೇಶದಿಂದ ಹಾಸನ ಮಹಾನಗರ ಪಾಲಿಕೆ ಕೈಗೊಂಡಿರುವ ಒತ್ತುವರಿ ತೆರವು ಕಾರ್ಯಾಚರಣೆ ದಿನದಿಂದ ದಿನಕ್ಕೆ ಮತ್ತಷ್ಟು ವಿಸ್ತಾರಗೊಳ್ಳುತ್ತಿದೆ. ಕಳೆದ ಒಂದು ತಿಂಗಳಿನಿಂದ ನಗರದ ವಿವಿಧ ಪ್ರದೇಶಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆ ಸೋಮವಾರವೂ ಮುಂದುವರಿದಿದ್ದು, ನಗರದ ಪ್ರಮುಖ ವಾಣಿಜ್ಯ ಪ್ರದೇಶವಾದ ಬಿ.ಎಂ. ರಸ್ತೆ ಯುದ್ದಕ್ಕೂ ಫುಟ್‌ಪಾತ್‌ಗಳ ಮೇಲೆ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಗೂಡಂಗಡಿಗಳು, ತಾತ್ಕಾಲಿಕ ವ್ಯಾಪಾರ ಮಳಿಗೆಗಳು, ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿದ್ದ ವಿವಿಧ ವಸ್ತುಗಳು ಹಾಗೂ ರಾಜಕೀಯ ಪಕ್ಷಗಳ ಕಟೌಟ್‌ಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು.

ಸೋಮವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭಿಸಿದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ರಸ್ತೆ ಬದಿಯಲ್ಲಿದ್ದ ಒತ್ತುವರಿಗಳನ್ನು ತೆರವುಗೊಳಿಸಿದರು. ಕಾರ್ಯಾಚರಣೆ ವೇಳೆ ಕೆಲ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದರೂ, ಅಧಿಕಾರಿಗಳು ನಿಯಮಾನುಸಾರ ಕ್ರಮವನ್ನು ಮುಂದುವರಿಸಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪಾಲಿಕೆ ಸೂಪರ್‌ವೈಸರ್ ಪರಶುರಾಮು ಮಾತನಾಡಿ, ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಸಾರ್ವಜನಿಕ ರಸ್ತೆ ಹಾಗೂ ಫುಟ್‌ಪಾತ್‌ಗಳ ಮೇಲಿನ ಎಲ್ಲ ರೀತಿಯ ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಪಾದಚಾರಿಗಳಿಗೆ ಮೀಸಲಾಗಿರುವ ಫುಟ್‌ಪಾತ್‌ಗಳನ್ನು ವ್ಯಾಪಾರಕ್ಕಾಗಿ ಬಳಸುವುದರಿಂದ ಜನರು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದರಿಂದ ಅಪಘಾತಗಳ ಸಾಧ್ಯತೆಯೂ ಹೆಚ್ಚುತ್ತಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಹೇಳಿದರು. ಕಳೆದ 15 ದಿನಗಳ ಹಿಂದೆಯೇ ಫುಟ್‌ಪಾತ್ ಆಕ್ರಮಿಸಿಕೊಂಡಿದ್ದ ಗೂಡಂಗಡಿ ಹಾಗೂ ಅಂಗಡಿ ಮಾಲೀಕರಿಗೆ ಸ್ವಯಂಪ್ರೇರಿತವಾಗಿ ಒತ್ತುವರಿ ತೆರವುಗೊಳಿಸಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೂ ತೆರವುಗೊಳಿಸದ ಹಿನ್ನೆಲೆಯಲ್ಲಿ ಇದೀಗ ಜೆಸಿಬಿ ಮೂಲಕ ಪಾಲಿಕೆ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.

ಕಾರ್ಯಾಚರಣೆ ಕೇವಲ ಸಣ್ಣ ವ್ಯಾಪಾರಿಗಳಿಗೆ ಮಾತ್ರ ಸೀಮಿತವಾಗಿಲ್ಲ. ನಗರದ ಕೆಲ ಪ್ರಮುಖ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳು ಹಾಗೂ ಜಾಹೀರಾತು ಫಲಕಗಳೂ ಫುಟ್‌ಪಾತ್ ವ್ಯಾಪ್ತಿಗೆ ಅತಿಕ್ರಮಣ ಮಾಡಿರುವುದು ಕಂಡುಬಂದಿದ್ದು, ಪ್ರತಿಷ್ಠಿತ ಅಂಗಡಿ ಹಾಗೂ ಮಳಿಗೆಗಳಿಗೂ ನಿಯಮ ಉಲ್ಲಂಘನೆ ಕುರಿತು ನೋಟಿಸ್ ನೀಡಲಾಗಿದೆ. ನಿಗದಿತ ಅವಧಿಯಲ್ಲೂ ಸ್ಪಂದಿಸದಿದ್ದರೆ ಅನಧಿಕೃತ ನಾಮಫಲಕಗಳನ್ನೂ ತೆರವುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ವಿಚಾರದಲ್ಲಿ ಯಾವುದೇ ಜನಪ್ರತಿನಿಧಿ, ರಾಜಕೀಯ ಮುಖಂಡ ಅಥವಾ ಪ್ರಭಾವಿ ವ್ಯಕ್ತಿಯ ಒತ್ತಡಕ್ಕೆ ಮಣಿಯುವುದಿಲ್ಲ. ಸಾರ್ವಜನಿಕ ಹಿತಾಸಕ್ತಿ ಹಾಗೂ ಕಾನೂನು ಪಾಲನೆಯೇ ನಮ್ಮ ಆದ್ಯತೆ. ಎಲ್ಲರಿಗೂ ಒಂದೇ ನಿಯಮ ಅನ್ವಯವಾಗಲಿದೆ** ಎಂದು ಸ್ಪಷ್ಟಪಡಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಒತ್ತುವರಿಯಿಂದ ವಾಹನ ಸಂಚಾರ ದಟ್ಟಣೆ, ಪಾದಚಾರಿಗಳ ಓಡಾಟಕ್ಕೆ ತೊಂದರೆ ಹಾಗೂ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೂ ಅಡ್ಡಿಯಾಗುತ್ತಿರುವ ಹಿನ್ನೆಲೆ ಈ ಕಾರ್ಯಾಚರಣೆ ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಮುಂದುವರಿಯಲಿದೆ ಎಂದು ಪಾಲಿಕೆ ತಿಳಿಸಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು