ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಜಂಟಿ ಡಿ-ನೋಟಿಫಿಕೇಷನ್ ಹಗರಣ : ವಿಚಾರಣೆಗೆ ಲೋಕಾಯುಕ್ತ ಎದುರು ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ

ಜಂಟಿ ಡಿ-ನೋಟಿಫಿಕೇಷನ್ ಹಗರಣ : ವಿಚಾರಣೆಗೆ ಲೋಕಾಯುಕ್ತ ಎದುರು ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ

2007 ರಿಂದ 2010 ರ ಅವಧಿಯಲ್ಲಿ ಬೆಂಗಳೂರಿನ ಗಂಗಾ ನಗರದಲ್ಲಿ ನಡೆದ ಅಕ್ರಮ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯ ನೋಟಿಸ್ ಗೆ ಉತ್ತರಿಸಲು ಇದೀಗ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಲೋಕಾಯುಕ್ತ ಕಛೇರಿಗೆ ಹಾಜರಾಗಿದ್ದಾರೆ.

ಯಡಿಯೂರಪ್ಪ ಲೋಕಾಯುಕ್ತ ಕಚೇರಿಯಲ್ಲಿ ತನಿಖಾಧಿಕಾರಿಗಳ ಎದುರು ಹಾಜರಾಗಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬೇಕರ್, ಐಜಿ ಸುಬ್ರಮಣೇಶ್ವರ ರಾವ್ ನೇತೃತ್ವದಲ್ಲಿ ತನಿಖಾಧಿಕಾರಿ ಬಸವರಾಜ್ ಮಗದುಂ ಅವರು ಯಡಿಯೂರಪ್ಪ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಗಂಗಾ ನಗರದಲ್ಲಿ 1 ಎಕರೆ 11 ಗುಂಟೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫಿಕೇಷನ್ ನಡೆಸಿದ್ದ ಬಗ್ಗೆ ಕೆಲವೇ ದಿನಗಳ ಹಿಂದೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಹುತೇಕ ಮರೆತೇ ಹೋಗಿದ್ದ ಪ್ರಕರಣ ಇದಾಗಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೈಗೆತ್ತಿಕೊಂಡಿದ್ದ ಡಿನೋಟಿಫಿಕೇಷನ್ ಪ್ರಕ್ರಿಯೆಯನ್ನು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮುಕ್ತಾಯಗೊಳಿಸಲಾಗಿತ್ತು. ಅಕ್ರಮವಾಗಿ ಡಿ-ನೋಟಿಫೈ ಮಾಡಿಸಿದ್ದ ಆರೋಪದಲ್ಲಿ ಯಡಿಯೂರಪ್ಪ ಎ 1 ಆರೋಪಿಯಾಗಿದ್ದಾರೆ.

2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್‌ ಅವರಿಂದ ನಿಯಮ 164ರ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು