ಇಡಿ ಅಧಿಕಾರಿಗಳಿಂದ ಮಾಜಿ ಸಚಿವ ನಾಗೇಂದ್ರ ಬಂಧನ
ಲಿಂಕ್ ನಕಲಿಸಲಾಗಿದೆ ✓
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರದ ಆರೋಪದಲ್ಲಿ ಇಂದು ಬೆಳಿಗ್ಗೆಯಿಂದಲೇ ವಿಚಾರಣೆಗೆ ಒಳಗಾಗಿದ್ದ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ (ED) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಕಳೆದ ಎರಡು 2 ದಿನಗಳಿಂದ ನಾಗೇಂದ್ರ ಮನೆಯಲ್ಲಿ ವಾಲ್ಮೀಕಿ ನಿಗಮದ ದಾಖಲೆಗಳ ಬಗ್ಗೆ ಶೋಧ ನಡೆಸಿದ್ದ ಅಧಿಕಾರಿಗಳು ಇಂದು ವಿಚಾರಣೆ ಮಾಡಿ ಮುಂಜಾನೆ ವಶಕ್ಕೆ ಪಡೆದಿದ್ದರು. ಇದೀಗ ತೀವ್ರ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆ ಚುರುಕುಗೊಳ್ಳುತ್ತಲೇ ಎಸ್‌ಐಟಿ ಅಧಿಕಾರಿಗಳು ತನಿಖೆ ಕೈಗೆತ್ತುಕೊಂಡಿದ್ದಾರೆ. ಈಗಾಗಲೇ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸಿರುವ ಇಡಿ ಅಧಿಕಾರಿಗಳು, ಇದೀಗ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬಂಧಿಸಿದ್ದಾರೆ
P
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ