ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ತೊರೆಯುವ ಭರದಲ್ಲಿ ಅಸೂಕ್ಷ್ಮವಾಗಿ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಬಿಜೆಪಿ ತೊರೆಯುವ ಭರದಲ್ಲಿ ಅಸೂಕ್ಷ್ಮವಾಗಿ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ

ಮಾಜಿ ಸಂಸದ ಎಲ್​ಆರ್​ ಶಿವರಾಮೇಶಗೌಡ ಬಿಜೆಪಿ ತೊರೆದು ಕಾಂಗ್ರೆಸ್​ ಸೇರುವ ನಿರ್ಧಾರ ಮಾಡಿರುವ ಸಂದರ್ಭದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತೀರಾ ಅಸೂಕ್ಷ್ಮತೆಯಿಂದ ಮಾತನಾಡಿ ಈಗ ರಾಜಕೀಯ ವಲಯದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಂಡ್ಯ ಜನತೆ ಬಗ್ಗೆ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

“ಮಂಡ್ಯದವರೆಲ್ಲ ನರಸತ್ತವರು, ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ” ಎಂಬ ಪದ ಪ್ರಯೋಗಗಳ ಮೂಲಕ ಒಬ್ಬ ರಾಜಕಾರಣಿ ಎಂಬ ಪ್ರಜ್ಞೆಯೂ ಇಲ್ಲದೇ ಮಾಜಿ ಸಂಸದ ಶಿವರಾಮೇಗೌಡ ಸೂಕ್ಷ್ಮತೆ ಮರೆತು ಮಾತನಾಡಿದ್ದಾರೆ.

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ರಾಮನಗರದಿಂದ ಓಡಿಸಿದ್ದಾರೆ. ಆದರೆ ಮಂಡ್ಯದವರೆಲ್ಲ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಮಂಡ್ಯ ಜಿಲ್ಲೆಯ ಮುಖಂಡರು ಮತ್ತು ಜನತೆ ಈಗಲಾದರೂ ಎಚ್ಚೆತ್ತುಕೊಳ್ಳಿ. ಮಂಡ್ಯ ಜಿಲ್ಲೆಯ ಜನತೆಗೆ ಕರೆ‌ ಕೊಡುತ್ತೇನೆ “ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ” ಎನ್ನುವ ಮೂಲಕ ಕುಮಾರಸ್ವಾಮಿ ಕುಟುಂಬದ ವಿರುದ್ದ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಮಂಡ್ಯ ಜನತೆ ಬಗ್ಗೆ ಆಡಿದ ಮಾತು ರಾಜಕೀಯ ವಲಯದಲ್ಲಿ ತೀವ್ರ ಟೀಕೆಗೆ ಎಡೆಮಾಡಿಕೊಟ್ಟಿದೆ.

ನಾನು ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ, ಕಾಂಗ್ರೆಸ್ ಸೇರಲು ನಿರ್ಧಾರ ಮಾಡಿದ್ದೇನೆ. ಸಿ.ಪಿ.ಯೋಗೇಶ್ವರ್ ರೀತಿ ನಾನು ಕೂಡ ಜಂಪಿಂಗ್ ಸ್ಟಾರ್‌‌. ಸಂಸದ ಡಾ. ಮಂಜುನಾಥ್ ಅವರನ್ನು ಅಭ್ಯರ್ಥಿ ಮಾಡಲು ಸಿಪಿ ಯೋಗೇಶ್ವರ್​ ಶ್ರಮವಹಿಸಿದರು. ಆದರೆ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ಗೆ ಎನ್‌ಡಿಎ ಟಿಕೆಟ್ ಕೊಡದೇ ಅವರನ್ನೇ ಬಲಿ ಪಡೆದಿದ್ದಾರೆ. ಚನ್ನಪಟ್ಟಣ ಜನ ದಡ್ಡರಲ್ಲ, ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ.

ಶಿವರಾಮೇಗೌಡರ ಬಾಯಿಂದ ಇಂತಹ ಮಾತನ್ನಾಡುವುದು ಇದೇ ಮೊದಲಲ್ಲ. ಈ ಹಿಂದೆ ಸುಮಲತಾ ಅಂಬರೀಷ್ ಚುನಾವಣೆ ನಿಂತಾಗಲೂ, ಅವರ ವಿರುದ್ದ ಅತ್ಯಂತ ಕೆಟ್ಟ ರೀತಿಯ ಮಾತನ್ನಾಡುತ್ತಾ, ರಾಜಕೀಯ ವೇದಿಕೆ ಎಂಬುದನ್ನೂ ಮರೆತು ನಾಲಿಗೆ ಹರಿಬಿಟ್ಟಿದ್ದರು. ಅವರ ಭಾಷಾ ಪ್ರಯೋಗದ ಬಗ್ಗೆ ಟೀಕೆಗಳು ಬಂದಾಗಲೂ ಕಿಂಚಿತ್ ಪಶ್ಚಾತ್ತಾಪ ತೋರದೇ ತನ್ನ ಮಾತನ್ನು ಸಮರ್ಥಿಸಿಕೊಂಡಿದ್ದರು ಇದೇ ಶಿವರಾಮೇಗೌಡ. ಈಗ ಕುಮಾರಸ್ವಾಮಿ ಕುಟುಂಬದ ವಿರುದ್ದ ಮಾತನಾಡುವ ಭರದಲ್ಲಿ ಕೀಳು ಪದ ಪ್ರಯೋಗ ತೀವ್ರ ಟೀಕೆಗೆ ಎಡೆಮಾಡಿಕೊಟ್ಟಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು