ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉಚಿತ ಯೋಜನೆ- ಆರ್ಥಿಕತೆಗೆ ಹಾನಿಕಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಉಚಿತ ಯೋಜನೆ- ಆರ್ಥಿಕತೆಗೆ ಹಾನಿಕಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

“ಉಚಿತ”ಗಳು ಆರ್ಥಿಕತೆಯ ಮೇಲೆ ಹಾನಿಯನ್ನುಂಟು ಮಾಡುತ್ತವೆ, ರಾಜಕೀಯ ಪಕ್ಷಗಳು ಇದರ ಬಗ್ಗೆ ಗಂಭೀರವಾಗಿ ಚರ್ಚಿಸಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.

ಉದಯಪುರದಲ್ಲಿ ನಡೆದ 9ನೇ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಇಂಡಿಯಾ ರೀಜನ್ ಕಾನ್ಫರೆನ್ಸ್‌ನ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಉಪ ರಾಷ್ಟ್ರಪತಿ ಈ ಹೇಳಿಕೆ ನೀಡಿದ್ದಾರೆ.

“ದೊಡ್ಡ ಮೊತ್ತದ ಉಚಿತ ಯೋಜನೆಯಗಳು ಜನರಿಗೆ ರಾಜಕೀಯ ಅಮಲನ್ನು ನೀಡಿದಂತೆ, ಇದರ ಬಗ್ಗೆ ಗಂಭೀರ ಚರ್ಚೆಯಾಗಬೇಕು. ಇದರ ಪರಿಣಾಮವಾಗಿ ಆರ್ಥಿಕತೆ ಕುಸಿದಿದೆ. ಜನರು ತಮ್ಮ ಸಾಮರ್ಥ್ಯವನ್ನು ತೋರಿಸುವ ವಾತಾವರಣವನ್ನು ಅಧಿಕಾರ ವ್ಯವಸ್ಥೆ ನೀಡಬೇಕು. ನೇರವಾಗಿ ಅವರ ಜೇಬು ತುಂಬಿಸುವುದು ಆಯ್ಕೆಯಾಗಿರಬಾರದು. ದೇಶದಲ್ಲಿ ಬಂಡವಾಳ ವೆಚ್ಚವು ಇಳಿಮುಖವಾಗುತ್ತಿದೆ. ಇದು ನಿಜವಾದ ಅರ್ಥದಲ್ಲಿ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ,” ಎಂದು ಧನಕರ್ ಹೇಳಿದ್ದಾರೆ.

ಕರ್ನಾಟಕದಂತಹ ಬಿಜೆಪಿಯೇತರ ಆಡಳಿತ ಇರುವ ರಾಜ್ಯಗಳಲ್ಲಿ ʼಉಚಿತ ಭಾಗ್ಯʼ ಯೋಜನೆಗಳನ್ನು ಘೋಸಿಸಿರುವ ಸರ್ಕಾರದ ಕ್ರಮಗಳನ್ನು ಬಿಜೆಪಿ ಟೀಕಿಸುತ್ತಿರುವ ಹಿನ್ನಲೆಯಲ್ಲಿ ಉಪ ರಾಷ್ಟ್ರಪತಿ ಈ ಹೇಳಿಕೆ ನೀಡಿದ್ದಾರೆ.

ಜುಲೈ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂತಹ ಉಚಿತ ಜನಪರ ಯೋಜನೆಗಳನ್ನು ʼರೇವಡಿʼ (ಮತಗಳಿಗಾಗಿ ಹಂಚುವ ಸಿಹಿತಿಂಡಿ). ಇಂತಹ ಘೋಷಣೆಗಳು ತೆರಿಗೆದಾರರ ಮೇಲೆ ಹೊರೆಯನ್ನು ಹೆಚ್ಚಿಸುತ್ತವೆ ಮತ್ತು ದೇಶವು ಸ್ವಾವಲಂಬಿಯಾಗುವುದನ್ನು ನಿಲ್ಲಿಸುತ್ತದೆ ಎಂದು ಟೀಕಿಸಿದ್ದರು.

ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಗೆ ಚುನಾವಣಾ ಸಮಯದಲ್ಲಿ ಮತದಾರರನ್ನು ಸೆಳೆಯಲು ಪ್ರಚಾರದ ಸಂದರ್ಭದಲ್ಲಿ ಪಕ್ಷಗಳು ನೀಡಿರುವ ʼತರ್ಕಬದ್ಧವಲ್ಲದ ಉಚಿತಗಳ ಭರವಸೆʼಗಳನ್ನು ಕಾನೂನುಬಾಹಿರಗೊಳಿಸುವಂತೆ ಕೇಳಲಾಗಿತ್ತು, ಹಲವಾರು ಸುತ್ತಿನ ವಾದಗಳ ನಂತರ ಸೆಪ್ಟೆಂಬರ್‌ನಲ್ಲಿ, ಸುಪ್ರೀಂ ಕೋರ್ಟ್ ಉಪಾಧ್ಯಾಯ ಅವರ ಈ ಅರ್ಜಿಯನ್ನು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದ್ದು ನ್ಯಾಯಾಲಯದ ಮುಂದೆ ಪ್ರಕರಣ ಬಾಕಿ ಇದೆ.

ಕರ್ನಾಟಕದಲ್ಲಿ ಕಾಂಗ್ರೇಸ್‌ ನೀಡಿದ್ದ ಉಚಿತ ಯೋಜನೆಗಳ ಬಗ್ಗೆ ಬಿಜೆಪಿ ಅನೇಕ ರೀತಿಯಲ್ಲಿ ಟೀಕೆ ಮಾಡಿತ್ತು. ಅವುಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹರಡಿತ್ತು. ಆದರೆ ಕಾಂಗ್ರೇಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಈ ಯೋಜನೆಗಳನ್ನು ಜಾರಿಗೊಳಿಸಿದ್ದು ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version