ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-11

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-11

ಯೋಜನೆ ಮತ್ತು ಪ್ರದೇಶಾಭಿವೃದ್ಧಿ

  • ರಾಜ್ಯದ ಜಿ.ಎಸ್.ಡಿ.ಪಿ ಬೆಳವಣಿಗೆ ದರವನ್ನು ಶೇ.13 ರಿಂದ ಶೇ.17ಕ್ಕೆ ಹೆಚ್ಚಿಸುವ ಮೂಲಕ ರಾಜ್ಯವನ್ನು 1 ಟ್ರಿಲಿಯನ್ ಡಾಲರ್‌ ಎಕಾನಮಿಯಾಗಿ ಏರಿಸುವ (1 Trillion Dollar Economy) ಗುರಿಯೊಂದಿಗೆ ಕೃಷಿ, ಉದ್ಯಮ ಮತ್ತು ಸೇವಾ ವಲಯಗಳ ಸಾಮರ್ಥ್ಯ ವೃದ್ಧಿ, ಮೂಲಸೌಕರ್ಯ ಬೆಂಬಲ, ಅಧಿಕಾರ ಪ್ರತ್ಯಾಯೋಜನೆ, ಆಡಳಿತ ವಿಕೇಂದ್ರೀಕರಣ ಮತ್ತಿತರ ಉಪಕ್ರಮಗಳನ್ನು ಜಾರಿಗೆ ತರಲಾಗುವುದು.
  • ಯು.ಪಿ.ಎ. ಸರ್ಕಾರದ ಇಚ್ಛಾಶಕ್ತಿಯಿಂದ ಭಾರತದ ಸಂವಿಧಾನಕ್ಕೆ ತಿದ್ದುಪಡಿ ಮಾಡಿ, ಅನುಚ್ಛೇದ 371 (ಜೆ) ಅಳವಡಿಸುವ ಮೂಲಕ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದೆ.
    ಈ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರತ್ಯೇಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಯಿತು. ಆದರೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಪ್ರಮಾಣದ ಅನುದಾನ ಘೋಷಿಸಿದ್ದರೂ, ಸಮರ್ಪಕವಾದ ಕ್ರಿಯಾ ಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಲ್ಲಿ ಅವರ ವೈಫಲ್ಯ ಎದ್ದು ಕಾಣುತ್ತದೆ. ಇದರ ಪರಿಣಾಮವಾಗಿ ಮಂಡಳಿಯಲ್ಲಿ
    2,000 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುದಾನ ಬಳಕೆಯಾಗದೆ ಉಳಿದಿರುವುದನ್ನು ಗಮನಿಸಲಾಗಿದೆ. ಈ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಿ, ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ 2023-24ನೇ ಸಾಲಿನಲ್ಲಿ 5,000 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
  • ರಾಜ್ಯದ ಸರಾಸರಿಗಿಂತ ಕಡಿಮೆ ಪ್ರಗತಿ ಸಾಧಿಸುತ್ತಿರುವ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಶಿಕ್ಷಣ, ಆರೋಗ್ಯ, ಪೌಷ್ಟಿಕತೆ, ಲಿಂಗ ಸಮಾನತೆ, ಬಡತನ ನಿರ್ಮೂಲನೆ ಮತ್ತಿತರ ಅಭಿವೃದ್ಧಿಯ
    ಬಹು ಆಯಾಮ ಸೂಚ್ಯಂಕಗಳಲ್ಲಿ ಸುಧಾರಣೆ ತರಲು 3,000 ಕೋಟಿ ರೂ. ವೆಚ್ಚ ಮಾಡಲಾಗುವುದು.
  • 2023-24ನೇ ಸಾಲಿನಲ್ಲಿ ನಗರಾಭಿವೃದ್ಧಿ ಇಲಾಖೆಯ ನಿಗಮಗಳ ವತಿಯಿಂದ ಗ್ರೀನ್‌ ಬಾಂಡ್‌ಗಳ ಮೂಲಕ ಸುಮಾರು 1,000 ಕೋಟಿ ರೂ. ಬಂಡವಾಳ ಸಂಗ್ರಹಿಸಿ, ಸ್ವಚ್ಛ ಮತ್ತು ಸುಸ್ಥಿರ ನಗರಗಳನ್ನು ವೇಗವಾಗಿ ನಿರ್ಮಾಣ ಮಾಡಲಾಗುವುದು.
PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು