ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-6

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 2 ನಿಮಿಷದ ಓದು

ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-6

ಆರೋಗ್ಯ ಮತ್ತು ಕುಟುಂಬ ಕಲ್ಯಾಣ

  • ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಬಡವರಿಗೆ ಉಚಿತ ಡಯಾಲಿಸಿಸ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಏಕಬಳಕೆಯ ಡಯಾಲೈಸರ್‌ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್‌ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಒದಗಿಸಲಾಗುವುದು.
  • ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 PHC ಗಳನ್ನು CHC ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ CHC ಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  • ರಾಜ್ಯದಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರು ಮತ್ತು ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ಸಮಗ್ರವಾದ ಪರೀಕ್ಷೆ, ಚಿಕಿತ್ಸೆ, ಅರಿವು ಮೂಡಿಸುವಿಕೆ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗೆ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು. ಇದಕ್ಕಾಗಿ 25 ಕೋಟಿ ರೂ. ಗಳನ್ನು ಒದಗಿಸಲಾಗುವುದು.
  • ರಾಜ್ಯವು ಕಳೆದ ವರ್ಷ ನಿಮ್ಹಾನ್ಸ್‌ ಸಹಯೋಗದೊಂದಿಗೆ ಮೆದುಳಿನ ಆರೋಗ್ಯ ಆರೈಕೆ ಸೇವೆಗಳನ್ನು ಉತ್ತೇಜಿಸಲು ಮೂರು ಜಿಲ್ಲೆಗಳಲ್ಲಿ ʻಬ್ರೈನ್‌ ಹೆಲ್ತ್‌ ಇನಿಶಿಯೇಟಿವ್‌ʼ (Brain Health Initiative) ಎಂಬ ವಿಶಿಷ್ಟ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಯಶಸ್ವಿ ಪ್ರಾಯೋಗಿಕ ಅನುಷ್ಠಾನದ ನಂತರ ಈ ಯೋಜನೆಯನ್ನು ಇಡೀ ರಾಜ್ಯಕ್ಕೆ ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
  • ʻಆಶಾಕಿರಣʼ ಎಂಬ ಕಾರ್ಯಕ್ರಮದಡಿಯಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
  • ಸಮಾಜದ ದುರ್ಬಲ ವರ್ಗಗಳಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಮುದಾಯ ಆಧಾರಿತ ತಪಾಸಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ, ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ-ಕ್ಷ-ಕಿರಣ (Hand Held X-ray) ಉಪಕರಣವನ್ನು ಒದಗಿಸಲಾಗುವುದು. ಪ್ರತಿ X-ray ಯಂತ್ರಕ್ಕೆ 20 ಲಕ್ಷ ರೂ. ದಂತೆ ಒಟ್ಟು ಮೂರು ಕೋಟಿ ರೂ. ಒದಗಿಸಲಾಗುವುದು.
  • ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಅಗತ್ಯ ಔಷಧಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ವಿಭಾಗಗಳ ಎಂಟು ಜಿಲ್ಲೆಗಳಲ್ಲಿ ಸಮಗ್ರ ತಪಾಸಣೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು.
  • ಕರ್ನಾಟಕ ರತ್ನ ಡಾ|| ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು.
  • ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್‌ ಮತ್ತು ಆರು ಎಂ.ಆರ್‌.ಐ ಸ್ಕ್ಯಾನಿಂಗ್‌ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು.
  • ರಾಜ್ಯವು ಈಗಾಗಲೇ ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವಂತೆ ಆರೋಗ್ಯ ತಂತ್ರಜ್ಞಾನದ ಆವಿಷ್ಕಾರಗಳ ಅಳವಡಿಕೆಯಲ್ಲಿಯೂ ಪ್ರಮುಖ ಕೇಂದ್ರವಾಗುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು.
  • ರಾಜ್ಯದಲ್ಲಿ ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ ಯೋಜನೆ ಹಾಗೂ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ ಸೇರಿದಂತೆ ಇಲಾಖೆಯ ಇನ್ನಿತರ ಎಲ್ಲಾ ಅಂತರ್ಜಾಲ ಉಪಕ್ರಮಗಳನ್ನು ಅನುಷ್ಠಾನ ಮಾಡಲು ಕರ್ನಾಟಕ ಡಿಜಿಟಲ್‌ ಹೆಲ್ತ್‌ ಸೊಸೈಟಿಯನ್ನು (Karnataka Digital Health Society) ಸ್ಥಾಪನೆ ಮಾಡಲಾಗುವುದು.
PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು