ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗೇ ಎಂದು ಹೀಯಾಳಿಸಿ ಬೆತ್ತಲೆಗೊಳಿಸಿ ರ‍್ಯಾಗಿಂಗ್! ಜಾದವ್‌ಪುರ ವಿವಿ ವಿದ್ಯಾರ್ಥಿ ಧಾರುಣ ಸಾವು

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಗೇ ಎಂದು ಹೀಯಾಳಿಸಿ ಬೆತ್ತಲೆಗೊಳಿಸಿ ರ‍್ಯಾಗಿಂಗ್! ಜಾದವ್‌ಪುರ ವಿವಿ ವಿದ್ಯಾರ್ಥಿ ಧಾರುಣ ಸಾವು

ಕೋಲ್ಕತ್ತಾ: ಜಾದವ್‌ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣಕ್ಕೆ ಆಘಾತಕಾರಿ ತಿರುವ ಸಿಕ್ಕಿದೆ. 18 ವರ್ಷದ ವಿದ್ಯಾರ್ಥಿಯನ್ನು ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ವಿವಸ್ತ್ರಗೊಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿ ಸ್ವಪ್ನದೀಪ್ ಕುಂದು ಗೆ ಒಳಪಡಿಸಿರುವ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಮೊದಲ ವರ್ಷದ ಪದವಿಪೂರ್ವ ವಿದ್ಯಾರ್ಥಿ ಸ್ವಪ್ನದೀಪ್ ಕುಂದು ಆಗಸ್ಟ್ 9 ರಂದು ವಿಶ್ವವಿದ್ಯಾನಿಲಯದ ಮುಖ್ಯ ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ. ಹಾಸ್ಟೆಲ್‌ನಲ್ಲಿ ಬಾಲಕನಿಗೆ ರ‍್ಯಾಗಿಂಗ್ ಮಾಡಿ ಲೈಂಗಿಕ ಕಿರುಕುಳವನ್ನು ನೀಡಿದ್ದಾರೆ ಎಂದು ಅವನ ಕುಟುಂಬ ಆರೋಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 13 ಮಂದಿಯನ್ನು ಬಂಧಿಸಿದ್ದಾರೆ.

ರ‍್ಯಾಗಿಂಗ್ ಗೆ ನಡೆಸುವ ವೇಳೆ ಬಾಲಕನನ್ನು ಬೆತ್ತಲಾಗಿಸಿ ಮೆರವಣಿಗೆ ಮಾಡಿಸಲಾಯಿತು, ಒಂದು ಗಂಟೆಗೂ ಹೆಚ್ಚು ಕಾಲ ಅವನನ್ನು ಬೆದರಿಸಿ ಒಂದು ಕೋಣೆಯಿಂದ ಇನ್ನೊಂದು ಕೋಣೆಗೆ ಓಡುವಂತೆ ಮಾಡಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ. ವಿದ್ಯಾರ್ಥಿಯನ್ನು ಗೇ (ಸಮ ಲಿಂಗದ ಕಡೆಗೆ ಆಕರ್ಷಿತವಾಗುವುದು) ಎಂದು ಹೀಯಾಳಿಸಲಾಗಿದೆ.

ಇದುವರೆಗೆ ಬಂಧಿಸಲಾಗಿರುವ 13 ಆರೋಪಿಗಳ ಪೈಕಿ ಕನಿಷ್ಠ 12 ಆರೋಪಿಗಳ ವಿರುದ್ಧ ಪೊಲೀಸರ ಬಳಿ ಸಾಕ್ಷ್ಯಗಳಿದ್ದು, Protection of Children from Sexual Offences Act ಅಡಿಯಲ್ಲಿ ಕೇಸು ದಾಖಲಾಗಿದೆ.

ಈ ಬಗ್ಗೆ ಆಡಳಿತರೂಢ ತೃಣಮೂಲ ಕಾಂಗ್ರೆಸನ್ನು ಟೀಕಿಸಿರುವ ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಆದರೆ ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯಪಾಲ ಸಿವಿ ಆನಂದ ಬೋಸ್ ಈ ಪ್ರಕರಣದಲ್ಲಿ ಟೀಕಿಸಿದ್ದು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಇಂತಹ ಘಟನೆಗಳಿಗೆ ನೂರಕ್ಕೆ ನೂರು ರಾಜ್ಯಪಾಲರೇ ಜವಾಬ್ದಾರರು ಎಂದು ಪ್ರತಿಕ್ರಿಯಿಸಿದೆ.

ರಾಜ್ಯಪಾಲರು ವಿಶ್ವವಿದ್ಯಾನಿಲಯಗಳ ಕುಲಪತಿಗಳೂ ಆಗಿರುವುದರಿಂದ ಅಲ್ಲಿನ ಉನ್ನತ ಹುದ್ದೆಗಳಿಗೆ ನೇಮಕಾತಿ ಮಾಡುವ ಅಧಿಕಾರವನ್ನು ಅವರಿಗಿದೆ.

25 ವರ್ಷಗಳ ಹಿಂದೆ ನವದೀಪ್ ಸಂಜೀಬ್ ಅಧಿಕಾರಿ ಎಂಬ ವಿದ್ಯಾರ್ಥಿ 1998ರಲ್ಲಿ ಬೆಹರಂಪೋರ್ ಟೆಕ್ಸ್‌ಟೈಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇದೇ ರೀತಿಯ ರ‍್ಯಾಗಿಂಗ್ ಗೆ ದಾರುಣವಾಗಿ ಸಾವನ್ನಪ್ಪಿದ್ದ. ಈತನನ್ನು ಗೇ ಎಂದು ಹೀಯಾಳಿಸಿ ರ‍್ಯಾಗಿಂಗ್ ಮಾಡಲಾಗಿತ್ತು. ನಂತರ ಹಾಸ್ಟೆಲ್‌ ನ ಮೂರನೇ ಮಹಡಿಯಿಂದ ಬಿದ್ದು ಈತ ಸಾವನ್ನಪ್ಪಿದ್ದ.

ಸ್ವಪ್ನದೀಪ್ ಕುಂದು ಸಾವಿನ ಹಿನ್ನಲೆಯಲ್ಲಿ ಇಪ್ಪತ್ತೈದು ವರ್ಷಗಳ ಹಿಂದಿನ ಈ ಪ್ರಕರಣ ಮತ್ತೆ ಚರ್ಚೆಯಲ್ಲಿದೆ.

ವಿಷಯಗಳು: #news #peepal #peepalmedia
PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು