ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಜಿಬಿಎ ಚುನಾವಣೆ: ಇವಿಎಂ ಬದಲು ಬ್ಯಾಲೆಟ್‌ ಪೇಪರ್‌; 88.91 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ

ಜಿಬಿಎ ಚುನಾವಣೆ: ಇವಿಎಂ ಬದಲು ಬ್ಯಾಲೆಟ್‌ ಪೇಪರ್‌; 88.91 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ

ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್‌ ಪೇಪರ್‌ ಮೂಲಕ ಮತದಾನ ನಡೆಸಲಾಗುವುದು ಎಂದು ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ತಿಳಿಸಿದರು. ಸೋಮವಾರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

1 ಅಕ್ಟೋಬರ್‌ 2025ನ್ನು ಆಧಾರವಾಗಿ ಪಡೆದು ಸಿದ್ಧಪಡಿಸಲಾದ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ. ಇದರಲ್ಲಿ 45,69,193 ಪುರುಷರು, 43,20,583 ಮಹಿಳೆಯರು ಹಾಗೂ 1,635 ಇತರೆ ಮತದಾರರು ಸೇರಿದ್ದಾರೆ ಎಂದು ವಿವರಿಸಿದರು.

ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಹಾಗೂ ಪಶ್ಚಿಮ ಎಂಬ ಐದು ನಗರ ಪಾಲಿಕೆಗಳಿದ್ದು, ಒಟ್ಟು 369 ವಾರ್ಡ್‌ಗಳು ರಚನೆಯಾಗಿವೆ. ಈ ವಾರ್ಡ್‌ಗಳಿಗೆ ಒಟ್ಟು 8,044 ಮತಗಟ್ಟೆಗಳು ಇರಲಿವೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 23ರಲ್ಲಿ ಅತಿ ಹೆಚ್ಚು 49,530 ಮತದಾರರು ಇದ್ದರೆ, ಬೆಂಗಳೂರು ಪೂರ್ವ ನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 16ರಲ್ಲಿ ಅತಿ ಕಡಿಮೆ 10,926 ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.

ಪರಿಶೀಲನೆ, ಆಕ್ಷೇಪಣೆಗಳಿಗೆಅವಕಾಶ
ಜನವರಿ 20ರಿಂದ ಫೆಬ್ರವರಿ 3, 2026ರವರೆಗೆ ಬೂತ್‌ ಲೆವಲ್‌ ಅಧಿಕಾರಿಗಳು (ಬಿ.ಎಲ್.ಓ) ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಅವಧಿಯಲ್ಲಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ. ಹಕ್ಕು–ಆಕ್ಷೇಪಣೆಗಳ ವಿಲೇವಾರಿ ಫೆಬ್ರವರಿ 4ರಿಂದ 18ರವರೆಗೆ ನಡೆಯಲಿದ್ದು, ಮಾರ್ಚ್‌ 16, 2026ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ವೆಬ್‌ಸೈಟ್‌ನಲ್ಲಿಪಟ್ಟಿಲಭ್ಯ
ವಾರ್ಡ್‌ವಾರು ಕರಡು ಮತದಾರರ ಪಟ್ಟಿಯನ್ನು ಜಿಬಿಎ ಅಧಿಕೃತ ಜಾಲತಾಣ https://gba.karnataka.gov.in/home ನಲ್ಲಿ ಪಿಡಿಎಫ್‌ ರೂಪದಲ್ಲಿ ಪ್ರಕಟಿಸಲಾಗುತ್ತದೆ. ಸಾರ್ವಜನಿಕರು ತಮ್ಮ ಹೆಸರುಗಳು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮತದಾರರ ಸಹಾಯವಾಣಿ ಸಂಖ್ಯೆಗಳು
* ಬೆಂಗಳೂರು ಕೇಂದ್ರ: 080-22975803
* ಬೆಂಗಳೂರು ಉತ್ತರ: 080-22975936
* ಬೆಂಗಳೂರು ದಕ್ಷಿಣ: 9480685704
* ಬೆಂಗಳೂರು ಪೂರ್ವ: 9480685706
* ಬೆಂಗಳೂರು ಪಶ್ಚಿಮ: 9480685703

ನಮೂನೆಗಳ ಮೂಲಕ ಅರ್ಜಿಸಲ್ಲಿಕೆ
ಗ್ರೇಟರ್ ಬೆಂಗಳೂರು ಆಡಳಿತ (ಮತದಾರರ ನೋಂದಣಿ) ನಿಯಮಗಳು, 2025ರಂತೆ, ಮತದಾರರ ನೋಂದಣಾಧಿಕಾರಿ/ಸಹಾಯಕ ನೋಂದಣಾಧಿಕಾರಿ ಅಥವಾ ಬಿ.ಎಲ್.ಓ ಅವರ ಬಳಿ ನಿಗದಿತ ನಮೂನೆಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ನಮೂನೆ–4: ಹೆಸರು ಸೇರ್ಪಡೆ
ನಮೂನೆ–5: ಹೆಸರು ಸೇರ್ಪಡೆಗೆ ಆಕ್ಷೇಪಣೆ
ನಮೂನೆ–6: ಹೆಸರು ತಿದ್ದುಪಡಿ
ನಮೂನೆ–7: ಸ್ಥಳ ಬದಲಾವಣೆ
ನಮೂನೆ–8: ಹೆಸರು ತೆಗೆಯಲು

18 ವರ್ಷಮೇಲ್ಪಟ್ಟಎಲ್ಲರಿಗೂಅವಕಾಶ
ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಮಾತನಾಡಿ, ಕರಡು ಪಟ್ಟಿಯಲ್ಲಿ ಹೆಸರು ಇಲ್ಲದವರು ತಕ್ಷಣವೇ ನಿಗದಿತ ನಮೂನೆಗಳ ಮೂಲಕ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು. 18 ವರ್ಷ ತುಂಬಿದ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರಾಗುವಂತೆ ಮನವಿ ಮಾಡಿದರು.

ರಾಜಕೀಯ ಪಕ್ಷಗಳೊಂದಿಗೆಸಭೆ
ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ವಾರ್ಡ್‌ನ ಪ್ರತಿಯೊಂದು ಮತಗಟ್ಟೆಗೆ ಒಬ್ಬರಂತೆ ಬೂತ್‌ ಲೆವಲ್‌ ಏಜೆಂಟ್‌ಗಳನ್ನು (BLA) ನೇಮಿಸಿ, ಅರ್ಹ ಮತದಾರರ ನೋಂದಣಿ ಕಾರ್ಯದಲ್ಲಿ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಕೋರಲಾಯಿತು. ಸಭೆಯಲ್ಲಿ ನಗರ ಪಾಲಿಕೆಗಳ ಆಯುಕ್ತರು, ಚುನಾವಣಾ ವಿಭಾಗದ ಅಧಿಕಾರಿಗಳು, ತಹಸೀಲ್ದಾರ್‌ಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು