ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಹಾಸನದಲ್ಲಿ 15 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾ-ಬೆಳ್ಳಿ ಕಳ್ಳತನ

ಹಾಸನದಲ್ಲಿ 15 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾ-ಬೆಳ್ಳಿ ಕಳ್ಳತನ

ಹಾಸನ : ನಗರದ ಶಾಂತಿನಗರ 4ನೇ ಹಂತ, ಶಿವಕುಮಾರಸ್ವಾಮೀಜಿ ರಸ್ತೆಯ ಸಮೀಪ ಇರುವ ಕುಮಾರಸ್ವಾಮಿ ನಿವಾಸದಲ್ಲಿ ಬೀಗ ಒಡೆದು ಭಾರಿ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕಳ್ಳರು ದೋಚಿರುವ ಘಟನೆ ಸೋಮವಾರ ಸಂಜೆ ಬೆಳಕಿಗೆ ಬಂದಿದೆ.

ಕಳೆದ ವರ್ಷ ಡಿ.31 ರಂದು ಕುಮಾರಸ್ವಾಮಿ ಕುಟುಂಬದವರು ಬೆಂಗಳೂರಿನ ಸಂಬಂಧಿಕರ ಮನೆಗೆ ಪ್ರಯಾಣ ಬೆಳೆಸಿದ್ದು, ನಂತರ ವಾಪಸ್ ಇಂದು ವಾಪಸ್ ಸೋಮವಾರ ಸಂಜೆ 4 ಗಂಟೆಗೆ ಮನೆಗೆ ಬಂದಿದ್ದಾರೆ. ಮನೆ ಬಾಗಿಲು ಬೀಗ ಮುರಿದಿರುವುದು ಕಂಡು ಬಂದಿದೆ. ನಂತರ ಒಳಗೆ ಹೋಗಿ ನೋಡಿದರೇ ಬೀರುವಿನಲ್ಲಿದ್ದ 15 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದು ಕಂಡು ಬಂದಿದೆ. ತಕ್ಷಣ ಪೊಲೀಸ್ ಠಾಣೆಗೆ ಕರೆ ಮಾಡಿ ವಿಚಾರ ತಿಳಿಸಿದಾಗ ಶ್ವಾನ ದಳದ ಜೊತೆ ಬೆರಳಚ್ಚುಗಾರರು ಆಗಮಿಸಿದರು. ಆದರೇ ಕಳ್ಳತನವಾಗಿ ತುಂಬ ದಿನವಾಗಿದ್ದರಿಂದ ಶ್ವಾನ ದಳ ಕಂಡು ಹಿಡಿಯಲು ಸಾಧ್ಯವಾಗದೆ ವಾಪಸ್ ಹೋಯಿತು. ನಂತರ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡರು.

ಕಳ್ಳತನವಾದ ಮನೆಯ ಮಾಲೀಕ ಕುಮಾರಸ್ವಾಮಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಡಿ.1 ಬೆಂಗಳೂರಿಗೆ ತೆರಳಿದ್ದೆವು. ಕುಟುಂಬದವರ ಸಿಸ್ಟರ್ ಮನೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲ್ಲಿಯೇ ವಾಸವಾಗಿದ್ದೆವು. ಜ.5 ರಂದು ಸೋಮವಾರ ಮನೆಗೆ ವಾಪಸ್ ಬಂದಾಗ ಕಳ್ಳತನವಾಗಿರುವುದು ಗೊತ್ತಾಯಿತು ಎಂದರು. ಕೋಲಿಂಡಿಯಾ ಲಿಮಿಟೆಡ್‌ನಲ್ಲಿ ಕೆಲಸ ಮಾಡಿ 2010ರಲ್ಲಿ ನಿವೃತ್ತರಾಗಿದ್ದೇನೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರ ಪತ್ನಿ ಉಮಕುಮಾರಸ್ವಾಮಿ ಮಾತನಾಡಿ, ಡಿ.31 ಬೆಂಗಳೂರಿನ ನನ್ನ ಅಕ್ಕನ ಮನೆಗೆ ಹೋಗಿ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಮನೆಗೆ ಬಂದಾಗ ಬಾಗಿಲು ಹೊಡೆದು ಒಳನುಗ್ಗಿ ಬೀರುವಿನಲ್ಲಿದ್ದ ಎಲ್ಲಾ ಚಿನ್ನ-ಬೆಳ್ಳಿ ಒಡವೆಗಳನ್ನು ಕಳ್ಳರು ಕಳವು ಮಾಡಿದ್ದಾರೆ ಎಂದರು. ಕಳ್ಳತನವಾದ ಚಿನ್ನಾಭರಣಗಳಲ್ಲಿ ಕರೀಮಣಿ ಚೈನ್, ಲಕ್ಷ್ಮೀ ಡಾಲರ್, ಮುತ್ತಿನ ನೆಕ್ಲೆಸ್, ಪ್ಲೇನ್ ಲಾಂಗ್ ನೆಕ್ಲೆಸ್, ಎರಡು ಹರಳಿನ ಉಂಗುರ, ಒಂದು ಡೈಮಂಡ್ ಉಂಗುರ, ಅಮೇರಿಕನ್ ಡೈಮಂಡ್ ಉಂಗುರ, ಮಕ್ಕಳ ಉಂಗುರಗಳು, ಚಿನ್ನದ ಓಲೆ-ಜುಮುಕಿ, ಕೆಂಪಿನ ಓಲೆ, ಮುತ್ತಿನ ಹಾಗೂ ಹವಳದ ಓಲೆಗಳು, ಲಕ್ಷ್ಮೀ ಕಾಸು, 15 ಗ್ರಾಂ ತೂಕದ ಚಿನ್ನದ ಸರ ಸೇರಿದಂತೆ ಸುಮಾರು 20 ತಲಾ ಚಿನ್ನಾಭರಣಗಳು ಸೇರಿವೆ ಎಂದು ಹೇಳಿದರು.

ಇದಲ್ಲದೆ ಬೆಳ್ಳಿಯ ದೊಡ್ಡ ತಟ್ಟೆ, ಚೊಂಬು, ಬಟ್ಟಲುಗಳು, ಪಂಚಪಾತ್ರೆ, ಉದ್ಧರಣೆ, ಚಮಚಗಳು, ಕಟೋರಿ, ದೊಡ್ಡ ಹಾಗೂ ಚಿಕ್ಕ ದೀಪದ ಕಂಬಗಳು, ಆರತಿ ತಟ್ಟೆ, ಬೆಳ್ಳಿ ಕಾಲುಚೈನ್‌ಗಳು, ಉಡದಾರ, ಹಲಗಾರತಿ, ಕುಂಕುಮ ಡಬ್ಬಿ, ಬೆಳ್ಳಿಯ ಲೋಟಗಳು ಹಾಗೂ ಲೇಡಿಸ್ ವಾಚ್‌ಗಳು ಸೇರಿ ಬೆಳ್ಳಿ ವಸ್ತುಗಳನ್ನೂ ಕಳ್ಳರು ಕಳವು ಮಾಡಿದ್ದಾರೆ. ಮದುವೆ ಸಮಯದಲ್ಲಿ ನಮ್ಮಮ್ಮ ಮಾಡಿಸಿಕೊಟ್ಟ ಎಲ್ಲಾ ಆಭರಣಗಳೂ ಕಳವಾಗಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಘಟನೆ ಕುರಿತು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು