ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅರ್ಜುನನ ಸಮಾಧಿಗೆ ಕಂಚಿನ ಬದಲು ಫೈಬರ್ ಪ್ರತಿಮೆ ನಿರ್ಮಿಸಿದ ಸರ್ಕಾರ – ಸಕಲೇಶಪುರ ಜನತೆ ಅಸಮಾಧಾನ

ಅರ್ಜುನನ ಸಮಾಧಿಗೆ ಕಂಚಿನ ಬದಲು ಫೈಬರ್ ಪ್ರತಿಮೆ ನಿರ್ಮಿಸಿದ ಸರ್ಕಾರ – ಸಕಲೇಶಪುರ ಜನತೆ ಅಸಮಾಧಾನ

ಸಕಲೇಶಪುರ: ತಾಲೂಕಿನ ಯಸಳೂರು ಅರಣ್ಯ ವ್ಯಾಪ್ತಿಯ ದಬ್ಬಳ್ಳಿಕಟ್ಟೆ ಪ್ರದೇಶದಲ್ಲಿರುವ ಆನೆ ಅರ್ಜುನನ ಸಮಾಧಿ ಆವರಣದಲ್ಲಿ ಇಂದು ಸಂಜೆ ಪ್ರತಿಮೆ ಉದ್ಘಾಟನೆಗೊಳ್ಳಲಿರುವ ಹಿನ್ನೆಲೆಯಲ್ಲಿ, ಶಾಸಕ ಸಿಮೆಂಟ್ ಮಂಜು ಅವರು ಸ್ಥಳಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು.

​ಅರಣ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇತರ ಗಣ್ಯರು ಈ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಸ್ಥಳ ಪರಿಶೀಲನೆ ನಡೆಸಿದ ಶಾಸಕರು, ಅಧಿಕಾರಿಗಳ ಕಾರ್ಯವೈಖರಿ ಹಾಗೂ ಮೂಲಸೌಕರ್ಯಗಳ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

​ಶಾಸಕರ ಪ್ರಮುಖ ಆಗ್ರಹಗಳು ಹಾಗೂ ಅಸಮಾಧಾನದ ವಿಚಾರಗಳು:

  • ​ಫೈಬರ್ ಪ್ರತಿಮೆಗೆ ಬೇಸರ: “ಈಗಾಗಲೇ ಅರ್ಜುನನ ಪ್ರತಿಮೆ ಉದ್ಘಾಟನೆ ಸಾಕಷ್ಟು ವಿಳಂಬವಾಗಿದೆ. ಇದೀಗ ಅರ್ಜುನನಿಗೆ ಫೈಬರ್ ಪ್ರತಿಮೆ ನಿರ್ಮಿಸಿರುವುದು ತೀವ್ರ ಬೇಸರ ತರಿಸಿದೆ. ಆತನ ಸೇವೆಗೆ ಕಂಚಿನ ಪ್ರತಿಮೆ ಮಾಡಿದ್ದರೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತಿತ್ತು” ಎಂದು ಶಾಸಕರು ವಿಷಾದ ವ್ಯಕ್ತಪಡಿಸಿದರು.
  • ​ಮೂಲಸೌಕರ್ಯಗಳ ಕೊರತೆ: ಸಮಾಧಿ ಸ್ಥಳಕ್ಕೆ ತೆರಳಲು ಸರಿಯಾದ ಡಾಂಬರ್ ರಸ್ತೆ ಇಲ್ಲ. ಪ್ರಸ್ತುತ ಕೇವಲ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಸಜ್ಜಿತ ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿಗಳನ್ನು ಕಡ್ಡಾಯವಾಗಿ ನಿರ್ಮಿಸಬೇಕು ಎಂದು ಸೂಚಿಸಿದರು.
  • ​ಕಂಚಿನ ಫಲಕ ಅಳವಡಿಕೆಗೆ ಒತ್ತಾಯ: ದಸರಾ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್ ಅರ್ಜುನನ ಇತಿಹಾಸ ಮತ್ತು ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಕಂಚಿನ ಫಲಕವನ್ನು ಸ್ಮಾರಕದ ಬಳಿ ಅಳವಡಿಸಬೇಕು ಎಂದು ಆಗ್ರಹಿಸಿದರು.
  • ​ಪ್ರವಾಸಿಗರಿಗೆ ರಕ್ಷಣೆ: ಸಮಾಧಿ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಸೂಕ್ತ ಭದ್ರತೆ ಮತ್ತು ರಕ್ಷಣಾ ವ್ಯವಸ್ಥೆ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿ ಈ ಪ್ರದೇಶವನ್ನು ಒಂದು ಸುಂದರ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಸಚಿವರಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.
  • ​ಕಾಡಾನೆ ಸಮಸ್ಯೆ ಹಾಗೂ ಪ್ರಕರಣಗಳ ವಾಪಸಾತಿಗೆ ಆಗ್ರಹ:
  • ಸ್ಮಾರಕದ ಅಭಿವೃದ್ಧಿಯ ಜೊತೆಗೆ, ಸಕಲೇಶಪುರ ತಾಲೂಕಿನಲ್ಲಿ ಮಿತಿಮೀರಿರುವ ಕಾಡಾನೆ ಸಮಸ್ಯೆಗೆ ಸರ್ಕಾರ ಶಾಶ್ವತ ಪರಿಹಾರ ಒದಗಿಸಬೇಕು ಹಾಗೂ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ತಕ್ಷಣ ಮುಂದಾಗಬೇಕು ಎಂದು ಶಾಸಕರು ಒತ್ತಾಯಿಸಿದರು. ಅಲ್ಲದೆ, ಅರ್ಜುನನ ಸಮಾಧಿ ನಿರ್ಮಾಣದ ಹೋರಾಟದ ವೇಳೆ ಸಾರ್ವಜನಿಕರು ಹಾಗೂ ರೈತರು ಸೇರಿ ಒಟ್ಟು 19 ಜನರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ಕೂಡಲೇ ಹಿಂಪಡೆಯುವಂತೆ ಸಚಿವರ ಬಳಿ ಮನವಿ ಮಾಡುವುದಾಗಿ ಅವರು ಭರವಸೆ ನೀಡಿದರು.
  • ​ಈ ಸಂದರ್ಭದಲ್ಲಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಸೌರಭ್ ಕುಮಾರ್ ಸೇರಿದಂತೆ ಹಲವು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು