ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಸಿಲಿನ ತೀವ್ರತೆ; ಸರ್ಕಾರಿ ಕಛೇರಿಗಳ ಸಮಯ ಬದಲಾವಣೆ ಮಾಡಿ ಸರ್ಕಾರದಿಂದ ಆದೇಶ ಜಾರಿ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ಬಿಸಿಲಿನ ತೀವ್ರತೆ; ಸರ್ಕಾರಿ ಕಛೇರಿಗಳ ಸಮಯ ಬದಲಾವಣೆ ಮಾಡಿ ಸರ್ಕಾರದಿಂದ ಆದೇಶ ಜಾರಿ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಸರ್ಕಾರಿ ಕಛೇರಿಗಳ ಸಮಯ ಬದಲಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೂ ಬೇಸಿಗೆ ಕಾಲದಲ್ಲಿ ಕಚೇರಿ ಕೆಲಸದ ವೇಳೆಯನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಸರ್ಕಾರಕ್ಕೆ ಮನವಿ ಮಾಡಿದಂತೆ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

ಈ ಮನವಿ ಪುರಸ್ಕರಿಸಿರುವ ರಾಜ್ಯ ಸರ್ಕಾರ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾಯಿಸಿ ಆದೇಶಿಸಿದೆ.

ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಆದೇಶ ಹೊರಡಿಸಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು