ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉಪಚುನಾವಣೆ ನಡುವೆ ‘ಗ್ಯಾರಂಟಿ’ ಯೋಜನೆಗಳಿಗೆ ಗ್ರೀನ್ ಸಿಗ್ನಲ್: ಹೈಕೋರ್ಟ್ ತೀರ್ಪು

ಉಪಚುನಾವಣೆ ನಡುವೆ ‘ಗ್ಯಾರಂಟಿ’ ಯೋಜನೆಗಳಿಗೆ ಗ್ರೀನ್ ಸಿಗ್ನಲ್: ಹೈಕೋರ್ಟ್ ತೀರ್ಪು

ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ಸರ್ಕಾರದ ಪ್ರಮುಖ ‘ಗ್ಯಾರಂಟಿ’ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಯೋಜನೆಗಳ ಹಣ ಬಿಡುಗಡೆಗೆ ತಡೆ ವಿಧಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸುವ ಮೂಲಕ ಸರ್ಕಾರ ನಿಟ್ಟುಸಿರು ಬಿಡುವಂತಾಗಿದೆ.

ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಸೇರಿದಂತೆ ಜನಪ್ರಿಯ ಯೋಜನೆಗಳ ನಗದು ನೆರವು ಮುಂದುವರಿಯಲಿದೆ. ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಈ ಯೋಜನೆಗಳ ಹಣ ಬಿಡುಗಡೆಗೆ ತಡೆ ವಿಧಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ದಾವಣಗೆರೆ ದಕ್ಷಿಣ ಉಪಚುನಾವಣೆಯ ಸ್ವತಂತ್ರ ಅಭ್ಯರ್ಥಿ ಗೌತಮ್ ಕುಮಾರ್ ಜೈನ್ ಅರ್ಜಿ ಸಲ್ಲಿಸಿದ್ದರು. ಕಳೆದ ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ಹಣವನ್ನು ಇದೀಗ ಏಕಾಏಕಿ ಬಿಡುಗಡೆ ಮಾಡಲಾಗುತ್ತಿದೆ. ಇದು ಉಪಚುನಾವಣೆಯಲ್ಲಿ ಮತದಾರರನ್ನು ಪ್ರಭಾವಿಸಲು ಸರ್ಕಾರದ ಪ್ರಯತ್ನ ಎಂದು ಅವರು ವಾದಿಸಿದ್ದರು.

ಆದರೆ, ಅರ್ಜಿದಾರರ ಈ ಆರೋಪಗಳನ್ನು ಪರಿಗಣಿಸಿದ ನ್ಯಾಯಾಲಯ, ಕಲ್ಯಾಣ ಯೋಜನೆಗಳನ್ನು ತಡೆಹಿಡಿಯಲು ಕಾನೂನು ಆಧಾರಗಳಿಲ್ಲವೆಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿದೆ.

ಹೈಕೋರ್ಟ್ ತೀರ್ಪಿನೊಂದಿಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಇದ್ದ ಅನಿಶ್ಚಿತತೆ ನಿವಾರಣೆಯಾಗಿ, ಲಕ್ಷಾಂತರ ಫಲಾನುಭವಿಗಳಿಗೆ ಹಣ ತಲುಪುವ ದಾರಿ ಸುಗಮವಾಗಿದೆ. ಉಪಚುನಾವಣೆ ನಡುವೆಯೂ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ನಿರಂತರವಾಗಿ ಜಾರಿಯಾಗಲಿವೆ ಎಂಬುದು ಸ್ಪಷ್ಟವಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು