ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ʼಗುತ್ತಿದಾರರ ಸಂಘಕ್ಕೆ ಜೀವ ಬೆದರಿಕೆ ಹಾಕುತ್ತಿದ್ದಾರೆ, ನಮ್ಮನ್ನು ರಕ್ಷಿಸಿʼ: ಕೆಂಪಣ್ಣ

P

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ʼಗುತ್ತಿದಾರರ ಸಂಘಕ್ಕೆ ಜೀವ ಬೆದರಿಕೆ ಹಾಕುತ್ತಿದ್ದಾರೆ, ನಮ್ಮನ್ನು ರಕ್ಷಿಸಿʼ: ಕೆಂಪಣ್ಣ

ಬೆಂಗಳೂರು: ಕಾಮಗಾರಿ ಮಾಡಬೇಕಾದರೆ ನಾನು ಹೇಳಿದಷ್ಟು ಹಣ ತಂದು ಕೊಡಲಿಲ್ಲ ಅಂದರೆ ಕೆಲಸದಿಂದ ತೆಗೆಯುತ್ತೇನೆ ಎಂದು ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವ ಮುನಿರತ್ನ ಅಧಿಕಾರಿಗಳನ್ನು ಹೆದರಿಸುತ್ತಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದ ಎಲ್ಲ ಎಂಎಲ್‌ ಎಗಳೂ ಕಮಿಷನ್‌ ದಂಧೆಯಲ್ಲಿ ಪಾಲ್ಗೊಂಡಿದ್ದಾರೆ. 40% ಕಮಿಷನ್‌ ಇಲ್ಲದೆ ಕೆಲಸ ಆಗುತ್ತಿಲ್ಲ. ಇದನ್ನು ಪ್ರಶ್ನೆ ಮಾಡುತ್ತಿರುವ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಕೆಂಪಣ್ಣ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ತೋಟಗಾರಿಕೆ ಸಚಿವ ಮುನಿರತ್ನ, ಸಂಪೂರ್ಣ ದಾಖಲೆ ಕೊಟ್ಟು ಮಾತಾಡಲಿ, ಆರೋಪಗಳಿಗೆ ದಾಖಲೆ ಕೊಡದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಮತ್ತು ಇದನ್ನು ಇಲ್ಲಿಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ಗುತ್ತಿಗೆದಾರರ ಸಂಘವನ್ನು ವಿಭಜಿಸಲು ಸಚಿವರು ಯತ್ನಿಸುತ್ತಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ 10,000 ಕೋಟಿ ರುಪಾಯಿ ಕಾಮಗಾರಿ ಆಗಿದೆಯೇ ಎಂದು ಪ್ರಶ್ನಿಸಿದ ಕೆಂಪಣ್ಣ, ಮುನಿರತ್ನ ಅವರು ನಡೆಸಿರುವ ಕಾಮಗಾರಿಯ ಬಗ್ಗೆ ಉನ್ನತಮಟ್ಟದ ತನಿಖೆ ಆಗಲಿ ಎಂದು ಆಗ್ರಹಿಸಿದ್ದಾರೆ.

ಕೆಂಪಣ್ಣ ಹೇಳಿಕೆಗೆ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು, ಗುತ್ತಿಗೆದಾರರ ಸಂಘದವರು ವಿರೋಧ ಪಕ್ಷದ ನಿರ್ದೇಶನದಂತೆ ಆರೋಪ ಮಾಡುತ್ತಿದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುತ್ತಿಗೆದಾರರ ಆರೋಪದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಂದಮೇಲೆ ಕೆಂಪಣ್ಣ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ, ಇದು ರಾಜಕೀಯ ಪ್ರೇರಿತ ಆರೋಪ ಎಂದು ಕಿಡಿಕಾರಿದ್ದಾರೆ.

P

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version