ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

PPeepal Media Desk

Peepal Media Desk ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಪತ್ನಿ ಶ್ರೀಮತಿ ಚೆನ್ನಮ್ಮ ಅವರು ಶನಿವಾರ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚೆನ್ನಮ್ಮ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.

ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ ದೇವೇಗೌಡರ ಕುಟುಂಬದ ಸದಸ್ಯರೆಲ್ಲರೂ ಆಸ್ಪತ್ರೆಗೆ ಧಾವಿಸಿದ್ದರು. ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಸದಸ್ಯರು ಆಸ್ಪತ್ರೆಯಲ್ಲೇ ಉಪಸ್ಥಿತರಿದ್ದರು.

ಪತ್ನಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಭಾವುಕರಾಗಿ ಕಂಬನಿ ಮಿಡಿದರು. ಹಲವು ದಶಕಗಳ ಕಾಲ ಜೀವನದ ಸುಖ-ದುಃಖಗಳಲ್ಲಿ ಜೊತೆಗಿದ್ದ ಸಂಗಾತಿಯನ್ನು ಕಳೆದುಕೊಂಡ ದುಃಖ ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು. ಕುಟುಂಬದ ಸದಸ್ಯರು ಮತ್ತು ಆತ್ಮೀಯರು ದೇವೇಗೌಡ ಅವರಿಗೆ ಸಾಂತ್ವನ ಹೇಳಿದರು.

ರಾಜಕೀಯದಿಂದ ಸಂಪೂರ್ಣ ದೂರ ಉಳಿದಿದ್ದ ಚೆನ್ನಮ್ಮ ಅವರು ದೇವೇಗೌಡರ ಕುಟುಂಬದ ಬೆನ್ನೆಲುಬಾಗಿ ಗುರುತಿಸಿಕೊಂಡಿದ್ದರು. ಅಪ್ಪಟ ಗೃಹಿಣಿಯಾಗಿ ಪತಿ, ಮಕ್ಕಳ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದರ ಜೊತೆಗೆ ದೊಡ್ಡ ಕುಟುಂಬವನ್ನು ಒಗ್ಗೂಡಿಸಿಕೊಂಡು ಸಾಗಿದ ಮಾತೃಮೂರ್ತಿಯಾಗಿದ್ದರು.

ಅವರಿಗೆ ಪುತ್ರರಾದ ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರೇವಣ್ಣ, ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ರಮೇಶ್ ಹಾಗೂ ಪುತ್ರಿಯರಾದ ಹೆಚ್.ಡಿ. ಅನಸೂಯಾ ಮತ್ತು ಹೆಚ್.ಡಿ. ಶೈಲಜಾ ಇದ್ದಾರೆ. ಸೊಸೆಯರಾದ ಭವಾನಿ ರೇವಣ್ಣ, ಅನಿತಾ ಕುಮಾರಸ್ವಾಮಿ, ರಾಧಿಕಾ ಕುಮಾರಸ್ವಾಮಿ, ಕವಿತಾ ಬಾಲಕೃಷ್ಣ ಹಾಗೂ ಸೌಮ್ಯ ರಮೇಶ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅವರು ಅಗಲಿದ್ದಾರೆ.

ದೇವೇಗೌಡರ ಕುಟುಂಬದ ಮಾತೃಸ್ಥಾನದಲ್ಲಿದ್ದ ಚೆನ್ನಮ್ಮ ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು