ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಚ್.ಡಿ.ರೇವಣ್ಣ ಅವರಿಂದ ಅಧಿಕಾರಿಗಳಿಗೆ ಕಿರುಕುಳ – ಶ್ರೇಯಸ್ ಪಟೇಲ್

ಎಚ್.ಡಿ.ರೇವಣ್ಣ ಅವರಿಂದ ಅಧಿಕಾರಿಗಳಿಗೆ ಕಿರುಕುಳ – ಶ್ರೇಯಸ್ ಪಟೇಲ್

ಹಾಸನ: ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಅನಾವಶ್ಯಕ ಕಿರುಕುಳ ನೀಡುತ್ತಿದ್ದಾರೆ ಎಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಆರೋಪಿಸಿದರು.

ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಮೇಲೂ ಅನಗತ್ಯ ಒತ್ತಡ ಮತ್ತು ತೊಂದರೆ ನೀಡಲಾಗುತ್ತಿದೆ ಎಂದು ದೂರಿದರು. ಹಿರಿಯ ಶಾಸಕರಾಗಿರುವ ರೇವಣ್ಣ ಅವರು ಜನಪ್ರತಿನಿಧಿಗಳಿಗೆ ಮಾರ್ಗದರ್ಶನ ನೀಡಬೇಕಾದ ಸಂದರ್ಭದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ನಡೆದುಕೊಳ್ಳುತ್ತಿರುವುದು ಸಮಂಜಸವಲ್ಲ ಎಂದು ಹೇಳಿದರು. ಕ್ಷೇತ್ರದ ಅಭಿವೃದ್ಧಿ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಬದಲು ಅಧಿಕಾರಿಗಳ ವಿರುದ್ಧವೇ ಮಾತನಾಡುತ್ತಿರುವುದು ಸರಿಯಲ್ಲ. ಸರ್ಕಾರಕ್ಕೆ ಸಲಹೆ ನೀಡಿ ಒಟ್ಟಾಗಿ ಅಭಿವೃದ್ಧಿ ಕೆಲಸಗಳಿಗೆ ಕೈಜೋಡಿಸಬೇಕಾದರೆ, ನಿರಾಧಾರ ಆರೋಪಗಳ ಮೂಲಕ ಅಧಿಕಾರಿಗಳನ್ನು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ಷೇಪಿಸಿದರು.

ಹೊಳೆನರಸೀಪುರ ಜಾತ್ರೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆ ಘಟನೆ ಕುರಿತು ಜಿಲ್ಲೆಯ ಜನರಿಗೆ ಸತ್ಯಸ್ಥಿತಿ ತಿಳಿದಿದೆ ಎಂದರು. ಕೆಲಸ ಮಾಡುವ ಅಧಿಕಾರಿಗಳಿಗೆ ಸಹಕಾರ ನೀಡುವ ಬದಲು ತೊಂದರೆ ನೀಡುವುದು ಸರಿಯಲ್ಲ ಎಂದು ಹೇಳಿದರು. ಜನರ ಸಮಸ್ಯೆಗಳ ಪರಿಹಾರದಲ್ಲಿ ಗಮನ ಹರಿಸುವುದನ್ನು ಬಿಟ್ಟು ಅಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಗುರಿಯಾಗಿಸಿ ಟೀಕೆ ಮಾಡುವುದರಲ್ಲೇ ಸಮಯ ವ್ಯರ್ಥ ಮಾಡಲಾಗುತ್ತಿದೆ. ಜನರು ಈ ಬೆಳವಣಿಗೆಯನ್ನು ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಮಹಿಳೆಯಾಗಿದ್ದರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿರುವುದು ಖಂಡನೀಯವಾಗಿದ್ದು, ಇದು ಶಾಸಕರು ತಮ್ಮ ಜವಾಬ್ದಾರಿಯಲ್ಲಿ ವಿಫಲರಾಗಿರುವುದನ್ನು ಸೂಚಿಸುತ್ತದೆ ಎಂದು ಟೀಕಿಸಿದರು.

ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟ್‌ಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪವನ್ನು ತಳ್ಳಿ ಹಾಕಿದ ಶ್ರೇಯಸ್ ಪಟೇಲ್, ಯಾವುದೇ ಅಧಿಕಾರಿ ಒಂದು ಪಕ್ಷದ ಪರವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಸರ್ಕಾರಗಳು ಬದಲಾಗುತ್ತಲೇ ಇರುತ್ತವೆ, ಆದರೆ ಅಧಿಕಾರಿಗಳು ಎಲ್ಲ ಸರ್ಕಾರಗಳಲ್ಲೂ ಕರ್ತವ್ಯ ನಿರ್ವಹಿಸಬೇಕು ಎಂದು ಸ್ಪಷ್ಟಪಡಿಸಿದರು. ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಕುರಿತು ಪ್ರತಿಕ್ರಿಯಿಸಿ, ಎಸ್‌ಐಟಿ ತನಿಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಯಾರಿಗಾದರೂ ಅನ್ಯಾಯವಾಗಿದೆ ಎಂಬ ಭಾವನೆ ಇದ್ದರೆ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದರು. ಪ್ರಕರಣದ ವಿವರಗಳ ಕುರಿತು ಸಂಪೂರ್ಣ ಮಾಹಿತಿ ತನ್ನ ಬಳಿ ಇಲ್ಲ ಎಂದು ತಿಳಿಸಿದರು.

ಇದೇ ವೇಳೆ ಜಿಲ್ಲೆಯಲ್ಲಿ ಗ್ಯಾಸ್ ಲಭ್ಯತೆ ಕುರಿತು ಮಾಹಿತಿ ನೀಡಿದ ಅವರು, ಸುಮಾರು 3,200 ಕಮರ್ಷಿಯಲ್ ಗ್ಯಾಸ್ ಕೊರತೆ ಇದ್ದರೂ, 7,731 ಗೃಹಬಳಕೆ ಸಿಲಿಂಡರ್‌ಗಳು ಸ್ಟಾಕ್‌ನಲ್ಲಿ ಲಭ್ಯವಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಮನವಿ ಮಾಡಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು