ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಾಸನ : ಸಾಲದ ಹಣ ವಾಪಸ್ ಕೇಳಿದಕ್ಕೆ ಜಗಳ ಕೊ*ಲೆಯಲ್ಲಿ ಅಂತ್ಯ

ಹಾಸನ : ಸಾಲದ ಹಣ ವಾಪಸ್ ಕೇಳಿದಕ್ಕೆ ಜಗಳ ಕೊ*ಲೆಯಲ್ಲಿ ಅಂತ್ಯ

ಹಾಸನ : ಅರಸೀಕೆರೆ ತಾಲ್ಲೂಕಿನ ಜೆ.ಸಿ.ಪುರ ಗ್ರಾಮದಲ್ಲಿ ಸಾಲದ ಹಣ ವಾಪಸ್ ನೀಡುವಂತೆ ಕೇಳಿದ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಮನ್ಸೂರ್ ಪಾಷಾ (38) ಕೊಲೆಯಾದ ವ್ಯಕ್ತಿಯಾಗಿದ್ದು, ಸನಾವುಲ್ಲಾ (50) ಹಾಗೂ ಆತನ ಪತ್ನಿ ಜರೀನಾ ಭಾನು (45) ಆರೋಪಿಗಳಾಗಿದ್ದಾರೆ. ಒಂದು ವರ್ಷದ ಹಿಂದೆ ಮನ್ಸೂರ್ ಪಾಷಾ ಬಳಿ ಸನಾವುಲ್ಲಾ ₹40 ಸಾವಿರ ಸಾಲ ಪಡೆದಿದ್ದ ಎನ್ನಲಾಗಿದ್ದು, ಹಣ ವಾಪಸ್ ನೀಡುವಂತೆ ಮನ್ಸೂರ್ ಪಾಷಾ ಒತ್ತಾಯಿಸುತ್ತಿದ್ದರು. ಸಾಲದ ವಿಚಾರವನ್ನು ಕೆಲವರ ಬಳಿ ಹೇಳಿದ್ದಕ್ಕೆ ಸನಾವುಲ್ಲಾ ಮನ್ಸೂರ್ ಪಾಷಾ ಮೇಲೆ ಕೋಪಗೊಂಡಿದ್ದರು.

ಸಂಬಂಧಿಕರ ಮನೆಗೆ ಬಂದಿದ್ದ ಮನ್ಸೂರ್ ಪಾಷಾ ಜೊತೆ ಇದೇ ವಿಚಾರಕ್ಕೆ ಸನಾವುಲ್ಲಾ ಜಗಳ ತೆಗೆದಿದ್ದು, ಬಳಿಕ ಜಗಳ ತಾರಕಕ್ಕೇರಿ ಸನಾವುಲ್ಲಾ ಹಾಗೂ ಜರೀನಾ ಭಾನು ಮನ್ಸೂರ್ ಪಾಷಾ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಹಲ್ಲೆಗೊಳಗಾದ ಮನ್ಸೂರ್ ಪಾಷಾ ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ. ನಂತರ ಮುಜಾಹಿದ್ ಖಾನ್ ಎಂಬುವವರು ಮನ್ಸೂರ್ ಪಾಷಾ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸನಾವುಲ್ಲಾ ಹಾಗೂ ಜರೀನಾ ಭಾನು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು