ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಾಸ್ತು ಪ್ರಕಾರ ಹಾಸನಕ್ಕೆ ಹೆಚ್ಡಿಕೆ – ಹೆಚ್.ಡಿ ರೇವಣ್ಣ ಬಾರಿ ಚರ್ಚೆ

ವಾಸ್ತು ಪ್ರಕಾರ ಹಾಸನಕ್ಕೆ ಹೆಚ್ಡಿಕೆ – ಹೆಚ್.ಡಿ ರೇವಣ್ಣ ಬಾರಿ ಚರ್ಚೆ

ಹಾಸನ : ಏನೇ ಶುಭ ಕಾರ್ಯ ನಡೆದರೂ ಅದು ವಾಸ್ತು ಪ್ರಕಾರ ಸಂಪ್ರದಾಯ ಬದ್ಧವಾಗಿಯೇ ನಡೆಯಬೇಕು ಎನ್ನುವ ಮಾಜಿ ಸಚಿವ ಇಂದೂ ಸಹ ಅದನ್ನೂ ಪಾಲನೆ ಮಾಡಿದರು.ಶನಿವಾರದಂದು ನಗರದಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದ ಸಿದ್ಧತೆ ಪರಿಶೀಲನೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದು ಆಗಮಿಸಿದ್ದರು.

ನಗರದ ಹೊರವಲಯದ ಬೂವನಹಳ್ಳಿ ಬಳಿ ನಡೆಯಲಿರುವ ಜನತಾ ಸಮಾವೇಶಕ್ಕೆ ಈಗಾಗಲೇ ಬೃಹತ್ ವೇದಿಕೆ ನಿರ್ಮಾಣಗೊಂಡಿದೆ. ಇದನ್ನು ನೋಡಲು ಬಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ವಾಸ್ತು ಪ್ರಕಾರವೇ ರೇವಣ್ಣ ಕರೆದುಕೊಂಡು ಬರುವ ಮೂಲಕ ಅಚ್ಚರಿ ಮೂಡಿಸಿದರು. ಆರಂಭದಲ್ಲಿ ವೇದಿಕೆ ಬಳಿಗೆ ದಕ್ಷಿಣ ದಿಕ್ಕಿನಿಂದ ಬಂದ ಎಚ್.ಡಿ.ಕುಮಾರಸ್ವಾಮಿ ಆಗಮಿಸಿದರು. ಎಚ್‌ಡಿಕೆ ಜೊತೆ ಎಚ್.ಡಿ.ರೇವಣ್ಣ, ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಹಾಗೂ ಎಂಎಲ್‌ಸಿ ಬೋಜೇಗೌಡ ಕಾರಿನಲ್ಲೇ ಆಗಮಿಸಿದರು.

ಇನ್ನೇನು ಕಾರಿನಿಂದ ಕುಮಾರಸ್ವಾಮಿ ಇಳಿಯಬೇಕು ಎನ್ನುವಷ್ಟರಲ್ಲಿ ಕಾರಿನಿಂದ ಇಳಿಯದಂತೆ ಹೇಳಿ ಮುಂದಕ್ಕೆ ಹೋಗುವಂತೆ ಕಾರು ಚಾಲಕನಿಗೆ ಹೇಳಿದೆ ರೇವಣ್ಣ ಸೂಚನೆ ನೀಡಿದರು. ಅವರ ನಿರ್ದೇಶನದಂತೆ ಉತ್ತರ ದಿಕ್ಕಿಗೆ ಹೋಗಿ ಈಶಾನ್ಯ ಮೂಲೆಯಿಂದ ಬಂದು ಪೂರ್ವ ದಿಕ್ಕಿಗೆ ಚಾಲಕ ಕಾರು ನಿಲ್ಲಿಸಿದರು. ಪೂರ್ವಾಭಿಮುಖವಾಗಿ ಕಾರು ನಿಂತ ಮೇಲೆಯೇ ಕುಮಾರಸ್ವಾಮಿ ಕೆಳಗಿಳಿದರು. ನಂತರ ಸಮಾವೇಶದ ಸಿದ್ಧತೆಗಳನ್ನು ಪರಿಶೀಲನೆ ಕೇಂದ್ರ ಸಚಿವರು ಪರಿಶೀಲಿಸಿದರು.

ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್, ತಾಲೂಕು ಅಧ್ಯಕ್ಷ ಎಸ್,ದ್ಯಾವೇಗೌಡ, ಜೆಡಿಎಸ್ ಜಿಲ್ಲಾ ವಕ್ತಾರ ರಘು ಹೊಂಗೆರೆ , ಮುಖಂಡರಾದ ಕೆಂಕೆರೆ ಕೇಶವಮೂರ್ತಿ, ಬಾಣಾವರ ಅಶೋಕ್, ಎಂ.ಎ.ನಾಗರಾಜ್ , ನಿರಂಜನ್ ಮೊದಲಾದವರಿದ್ದರು.

ವಿಷಯಗಳು: #karnataka #news #peepal #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು