ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಾಸನ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸಾವುಗಳು ; ಇಂದು ಒಂದೇ ದಿನ ನಾಲ್ವರ ಬಲಿ

PPeepal Media Desk

Peepal Media Desk ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಹಾಸನ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸಾವುಗಳು ; ಇಂದು ಒಂದೇ ದಿನ ನಾಲ್ವರ ಬಲಿ

ಹಾಸನದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಇಂದು ಒಂದೇ ದಿನದಲ್ಲಿ ಮಧ್ಯಾಹ್ನದ ಒಳಗೆ 4 ಸಾವಿನ ಪ್ರಕರಣ ಹೊರಬಿದ್ದಿದೆ. ಇದೀಗ ತಾನೆ ಚನ್ನರಾಯಪಟ್ಟಣ ತಾಲ್ಲೂಕಿನ ಡಿ ಗ್ರೂಪ್ ನೌಕರ ಕುಮಾರ್(53) ಮೃತಪಟ್ಟ ಬಗ್ಗೆ ವರದಿಯಾಗಿದೆ.

ಸಧ್ಯದ ಮಾಹಿತಿಯಂತೆ ಕಳೆದ 40 ದಿನಗಳಲ್ಲಿ ಇಂದಿನವರೆಗೆ ಒಟ್ಟು 22 ಜನ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಅಲ್ಲದೆ ಇಂದು ಒಂದೇ ದಿನ ಜಿಲ್ಲೆಯಲ್ಲಿ ಒಟ್ಟು ನಾಲ್ವರು ಹೃದಯಾಘಾತದಿಂದ ಸಾವನಪ್ಪಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆಯೇ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ (50) ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಆಸ್ಪತ್ರೆಗೆ ಬರುವ ಮೊದಲೇ ಮಹಿಳೆ ಮೃತಪಟ್ಟಿದ್ದಾರೆ.

ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿರುವಾಗಲೇ ಪ್ರಾಧ್ಯಾಪಕ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಮುತ್ತಯ್ಯ (58) ಸಾವನಪ್ಪಿದ್ದಾರೆ.

ಜನರಾಯಪಟ್ಟಣದಲ್ಲಿ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವನ್ನಪ್ಪಿದ್ದಾನೇ. ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ.

ಇದೀಗ ಸಿಕ್ಕ ಮಾಹಿತಿಯಂತೆ ಚನ್ನರಾಯಪಟ್ಟಣ ತಾಲ್ಲೂಕಿನ ಡಿ ಗ್ರೂಪ್ ನೌಕರ ಕುಮಾರ್(53) ಮೃತಪಟ್ಟ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೃದಯಾಘಾತದಿಂದ ಮೃತಪಡುತ್ತಿರುವ ಪ್ರಕರಣ ನನ್ನ ಗಮನಕ್ಕೂ ಬಂದಿದೆ. ಆದಷ್ಟು ಬೇಗ ಈ ಹೃದಯಾಘಾತಕ್ಕೆ ಕಾರಣ ಏನಿರಬಹುದು ಎಂಬುದಕ್ಕೆ ತಜ್ಞರ ಸಮಿತಿ ರಚಿಸಲಾಗುವುದು ಎಂದು ಹೇಳಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು