ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರ್ನಾಟಕದಲ್ಲಿ ಮೇ 11ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

PPeepal Media Desk

Peepal Media Desk ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಕರ್ನಾಟಕದಲ್ಲಿ ಮೇ 11ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಮೇ 8: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಸುಳಿಗಾಳಿಯ ಪ್ರಭಾವದಿಂದ ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ.. ಅಂದರೆ ಮೇ 11ರವರೆಗೆ ಗುಡುಗು ಸಹಿತ ಭಾರಿ ಮಳೆ ಸುರಿಯಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.

ಆಗ್ನೇಯ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ಸಮೀಪ ಕೇರಳ ಕರಾವಳಿ ಭಾಗದಲ್ಲಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ಮೇಲ್ಮೈ ಸುಳಿಗಾಳಿ ಆವರಿಸಿದ್ದು, ಇದರ ಪರಿಣಾಮ ಒಳನಾಡು ಕರ್ನಾಟಕದ ಮಾರುತಗಳ ಮೇಲೆ ತೀವ್ರ ಪ್ರಭಾವ ಬೀರಲಿದೆ ಎಂದು ತಜ್ಞರು ತಿಳಿಸಿದ್ದಾರೆ.

ಜಿಲ್ಲಾವಾರು ಮುನ್ಸೂಚನೆ
ಮೇ 7ರಂದು ಉತ್ತರ ಒಳನಾಡಿನ ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ವರುಣನ ಅಬ್ಬರ ಜೋರಾಗಿರಲಿದೆ. ಮೇ 8ರಂದು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಮೇ 7ರಿಂದ 11ರವರೆಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ದಕ್ಷಿಣ ಒಳನಾಡಿನ ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 8ರವರೆಗೆ ಬಿರುಗಾಳಿ ಸಹಿತ ಮಳೆ ಮುಂದುವರಿಯಲಿದ್ದು, ನಂತರ ಸಾಧಾರಣ ಮಳೆ ಆಗಲಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.

ಸಾರ್ವಜನಿಕರಿಗೆ ಎಚ್ಚರಿಕೆ
ಗುಡುಗು–ಮಿಂಚಿನ ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ಬಿರುಗಾಳಿಯ ಬಗ್ಗೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ರೈತರು ಮತ್ತು ಸಾರ್ವಜನಿಕರಿಗೆ ಮನವಿ ಮಾಡಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು