ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರ್ನಲ್ ಸೋಫಿಯಾ ಖುರೇಷಿ ಅವರನ್ನು ‘ಭಯೋತ್ಪಾಕರ ಸಹೋದರಿ’ ಎಂದ ಬಿಜೆಪಿ ನಾಯಕನ ಮೇಲೆ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

P

Peepal Media Desk • ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಕರ್ನಲ್ ಸೋಫಿಯಾ ಖುರೇಷಿ ಅವರನ್ನು ‘ಭಯೋತ್ಪಾಕರ ಸಹೋದರಿ’ ಎಂದ ಬಿಜೆಪಿ ನಾಯಕನ ಮೇಲೆ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ‘ಭಯೋತ್ಪಾದಕರ ಸಹೋದರಿ’ ಎಂಬ ಪದ ಬಳಕೆ ಮಾಡಿದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಷಾ ವಿರುದ್ಧ ದೇಶಾದ್ಯಂತ ಬಾರಿ ಆಕ್ರೋಶ ವ್ಯಕ್ತವಾಗಿದೆ. ಸಧ್ಯ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಮಧ್ಯಪ್ರದೇಶ ಹೈಕೋರ್ಟ್ ಆದೇಶಿಸಿದೆ.

ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಅನುರಾಧಾ ಶುಕ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಯಾವುದೇ ಕೃತ್ಯವನ್ನು ಅಪರಾಧೀಕರಿಸುವ ಬಿಎನ್‌ಎಸ್‌ನ ಸೆಕ್ಷನ್ 152 ರ ಅಡಿಯಲ್ಲಿ ಪ್ರಾಥಮಿಕವಾಗಿ ಅಪರಾಧವನ್ನು ಮಾಡಿದೆ ಎಂದು ತೀರ್ಪು ನೀಡಿದೆ. ಹೀಗಾಗಿ ಸ್ವಯಂಪ್ರೇರಿತ ದೂರು ದಾಖಲಿಸಿ, ಎಫ್ಐಆರ್ ದಾಖಲು ಮಾಡಲು ಸೂಚಿಸಿದೆ.

ಇಸ್ಲಾಂ ಅನುಯಾಯಿಯಾದ ಮಾತ್ರಕ್ಕೆ ಕರ್ನಲ್ ಖುರೇಷಿ ಅವರನ್ನು “ಭಯೋತ್ಪಾದಕರ ಸಹೋದರಿ” ಎಂದು ಅವಹೇಳನ ಮಾಡಿರುವುದು ಪ್ರಾಥಮಿಕವಾಗಿ ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಅಥವಾ ಜಾತಿಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದನ್ನು ಸೂಚಿಸುವುದರ ಅಪರಾಧವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಇಂದು ಸಂಜೆಯೊಳಗೆ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯ ಡಿಜಿಪಿಗೆ ನಿರ್ದೇಶಿಸಿದೆ. ಅಕಸ್ಮಾತ್ ಬಂಧನದ ವೇಳೆ ಡಿಜಿಪಿ ಯಾವುದೇ ತಪ್ಪು ಮಾಡಿದರೆ, ಅವರು ನ್ಯಾಯಾಲಯ ನಿಂದನೆ ಕಾಯ್ದೆಯಡಿಯಲ್ಲಿ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version