ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜೀವಾವಧಿ ಶಿಕ್ಷೆ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿಗೆ ನ್ಯಾಯಾಲಯದ ಐತಿಹಾಸಿಕ ತೀರ್ಪು

PPeepal Media Desk
ಜೀವಾವಧಿ ಶಿಕ್ಷೆ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿಗೆ ನ್ಯಾಯಾಲಯದ ಐತಿಹಾಸಿಕ ತೀರ್ಪು

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಅಪರಾಧಿಗಳಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಈ ತೀರ್ಪು ಕರ್ನಾಟಕ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಏನಿದು ಪ್ರಕರಣ?
2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಯೋಗೇಶ್ ಗೌಡ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ಇದನ್ನು ಆಸ್ತಿ ವಿವಾದ ಎಂದು ಬಿಂಬಿಸಿ, ಆರು ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ಯೋಗೇಶ್ ಗೌಡ ಅವರ ಪತ್ನಿ ಮಲ್ಲಮ್ಮ ಮತ್ತು ಕುಟುಂಬಸ್ಥರು ಇದೊಂದು ರಾಜಕೀಯ ಪ್ರೇರಿತ ಕೊಲೆ ಎಂದು ಆರೋಪಿಸಿ, ಅಂದಿನ ಸಚಿವ ವಿನಯ್ ಕುಲಕರ್ಣಿ ಅವರ ಕೈವಾಡ ಇರುವುದಾಗಿ ಅನುಮಾನ ವ್ಯಕ್ತಪಡಿಸಿದ್ದರು.

ಸಿಬಿಐ ತನಿಖೆ — ಬಯಲಾದ ಸತ್ಯ
ಕುಟುಂಬದ ಒತ್ತಡ ಮತ್ತು ಸಾರ್ವಜನಿಕ ಆಕ್ರೋಶದ ಹಿನ್ನೆಲೆಯಲ್ಲಿ 2019ರಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಿತು. ಸಿಬಿಐ ತನಿಖೆಯಲ್ಲಿ ವಿನಯ್ ಕುಲಕರ್ಣಿ ಅವರ ನೇರ ಒಳಸಂಚು ದೃಢಪಟ್ಟಿತು. 2020ರ ನವೆಂಬರ್‌ನಲ್ಲಿ ಅವರನ್ನು ಸಿಬಿಐ ಬಂಧಿಸಿತು. ಒಟ್ಟು 21 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಯಿತು. ಇದರಲ್ಲಿ ಇಬ್ಬರು ಸರ್ಕಾರಿ ಸಾಕ್ಷಿಗಳಾದರು, ಮತ್ತಿಬ್ಬರು ಸಾಕ್ಷ್ಯದ ಕೊರತೆಯಿಂದ ಖುಲಾಸೆಗೊಂಡರು. ಉಳಿದ 17 ಮಂದಿಯನ್ನು ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 120ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಬುಧವಾರ ನ್ಯಾಯಾಲಯ ಅಪರಾಧಿಗಳೆಂದು ಘೋಷಿಸಿತ್ತು.

ಸಿಬಿಐ ವಾದ: “ವಿರಳಾತಿ ವಿರಳ ಪ್ರಕರಣ”
ಗುರುವಾರ ನಡೆದ ಶಿಕ್ಷೆಯ ಪ್ರಮಾಣದ ವಿಚಾರಣೆಯಲ್ಲಿ ಸಿಬಿಐ ಪರ ವಕೀಲರು ಕಠಿಣ ನಿಲುವು ತಾಳಿದರು. “ಇದೊಂದು ವಿರಳಾತಿ ವಿರಳ ಪ್ರಕರಣ. ಆರೋಪಿಗಳು ವ್ಯವಸ್ಥಿತ ಪಿತೂರಿ ನಡೆಸಿ, ರಾಜಕೀಯ ದ್ವೇಷದ ಕಾರಣಕ್ಕೆ ಹತ್ಯೆ ಎಸಗಿದ್ದಾರೆ. ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಸಾಕ್ಷ್ಯ ನಾಶಪಡಿಸುವ ಯತ್ನವೂ ನಡೆದಿದೆ. ಹೀಗಾಗಿ ಕ್ಷಮಾದಾನ ರಹಿತ ಜೀವಾವಧಿ ಶಿಕ್ಷೆ ವಿಧಿಸಬೇಕು” ಎಂದು ಬಲವಾಗಿ ವಾದಿಸಿದ್ದರು. ನ್ಯಾಯಾಲಯವು ಈ ವಾದವನ್ನು ಪರಿಗಣಿಸಿ ಶುಕ್ರವಾರ ಜೀವಾವಧಿ ಶಿಕ್ಷೆ ಆದೇಶ ನೀಡಿದೆ.

ಶಾಸಕ ಸ್ಥಾನ ಹೋಯ್ತು – ಉಪಚುನಾವಣೆ ಅನಿವಾರ್ಯ
ಜನಪ್ರತಿನಿಧಿಗಳ ಕಾಯ್ದೆ ಅನ್ವಯ, 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆಗೆ ಗುರಿಯಾದ ಯಾವುದೇ ಹಾಲಿ ಶಾಸಕ ಅಥವಾ ಸಂಸದರು ತಕ್ಷಣ ತಮ್ಮ ಸ್ಥಾನ ಕಳೆದುಕೊಳ್ಳುತ್ತಾರೆ. ಈ ತೀರ್ಪಿನ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳ್ಳಲಿದ್ದಾರೆ. ಪರಿಣಾಮವಾಗಿ ಧಾರವಾಡದಲ್ಲಿ ಶೀಘ್ರದಲ್ಲೇ ಉಪಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದ್ದು, ಕರ್ನಾಟಕ ರಾಜಕೀಯ ಮಹಲಿನಲ್ಲಿ ಚರ್ಚೆಗಳು ಜೋರಾಗಿವೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು