ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸುದೀಪ್​​ರನ್ನು ಪರಿಚಯಿಸಿದ್ದು ನಾನು – ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ

ಸುದೀಪ್​​ರನ್ನು ಪರಿಚಯಿಸಿದ್ದು ನಾನು – ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ

ಬೆಂಗಳೂರು: ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ಮದಕರಿ ನಾಯಕ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅಬ್ಬರದ ಭಾಷಣ ಮಾಡಿದ್ದ ಮಾಜಿ ಸಂಸದ ವಿಎಸ್​ ಉಗ್ರಪ್ಪ ನಟ ಸುದೀಪ್​ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ನಾಯಕ ಸಮುದಾಯದ ಮಗನಾಗಿದ್ದರೆ ನಮ್ಮ ಸಮುದಾಯದ ಪರ ಧ್ವನಿ ಎತ್ತಿ. ದಮ್ಮು, ತಾಕತ್ ಇದ್ರೆ ನಮ್ಮ ಸಮುದಾಯದ ಮೀಸಲಾತಿ ಹೋರಾಟಕ್ಕೆ ಬನ್ನಿ ಎಂದಿದ್ದು ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ನಟ ಸುದೀಪ್​ ಅವರಿಗೆ ಅಪಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಉಗ್ರಪ್ಪ, ನಟ ಸುದೀಪ್​ ಅವರು ನಮ್ಮ ಸಮುದಾಯದ ಹೆಸರಲ್ಲಿ ಗುರುತಿಸಿಕೊಂಡವರು. ನಾಯಕ ಸಮಾಜದ ಜಯಂತಿಯಲ್ಲಿ ಸುದೀಪ್ ಅವರನ್ನು ಮೊದಲು ಪರಿಚಯಿಸಿದ್ದೇ ನಾನು. ನಾನು ವಕೀಲ ಎಲ್ಲರ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಗೋಕಾಕ್ ಚಳುವಳಿಗಾಗಿ ಡಾ. ರಾಜಕುಮಾರ್​ ಕೂಡ ಬೀದಿಗಿಳಿದು ಹೋರಾಟ ಮಾಡಿದ್ದರು ಎಂದರು.

‘ರಾಜೂಗೌಡರೇ ನಿಮಗೂ ಸುದೀಪ್​​ಗೂ ಈಗಲೂ ಹೇಳುವುದೇನೆಂದರೆ, ಸಮಾಜಕ್ಕಾಗಿ ಹೋರಾಟ ಮಾಡೋಣ, ಸುದೀಪ್ ಅವರೇ ನೀವು ಬನ್ನಿ ನಿಮ್ಮ ನಾಯಕತ್ವದಲ್ಲೇ ಹೋರಾಡೋಣ. ಫೇವರಿಸಂ ಬೆಳೆಸೋ ಹೇಳಿಕೆ ಒಳ್ಳೇದಲ್ಲ. ಸಮಾಜದ ಬೆಂಬಲಕ್ಕೆ ನೀವು ನಿಲ್ಲಬೇಕು. ಸಮಾಜ ನಿಮ್ಮ ಬೆಂಬಲಕ್ಕೆ ಬಂದಿದ್ದು ನೆನಪಿದೆಯಲ್ಲ. ನಾನು ಇದುವರೆಗೂ ಯಾರಿಗೂ ಅಗೌರವ ತೋರಿಲ್ಲ. ಅಗೌರವವಾಗುವಂತೆ ನಡೆದುಕೊಂಡೂ ಇಲ್ಲ. ಬದುಕಿನ ಪ್ರಶ್ನೆ ಬಂದಾಗ ಪ್ರತಿಷ್ಠೆ ಬಿಟ್ಟು ಹೋರಾಟಕ್ಕೆ ಬನ್ನಿ, ನಮ್ಮ ಆಕ್ರೋಶ ಎಲ್ಲರಿಗೂ ಗೊತ್ತಾಗಬೇಕು ಎಂದು ಹೇಳಿದರು.

SC/ST ಮೀಸಲಾತಿ ಹೆಚ್ಚಳಕ್ಕೆ ತಡೆ ನೀಡಿರುವ ಹೈಕೋರ್ಟ್ ನಿರ್ಧಾರ ಈ ಸಮಾಜಗಳ ಪಾಲಿಗೆ ದೊಡ್ಡ ಹೊಡೆತ. ಸಂವಿಧಾನದ ಆಶಯಗಳಿಗೆ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ತೀರ್ಪು ಇದಾಗಿದೆ. ಮೀಸಲಾತಿ ಹೆಚ್ಚಳಕ್ಕೆ ಅವಕಾಶ ಇದೆ ಎಂದು ಜಸ್ಟೀಸ್ ನಾಗಮೋಹನ್ ದಾಸ್, ಸುಭಾಷ್ ಆದಿ ಅವರಿದ್ದ ಸಮಿತಿ ನೀಡಿದ್ದ ವರದಿಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವೀಕರಿಸಿದ್ದರು. ತಮಿಳುನಾಡಿನಲ್ಲಿ ಶೇ 69ರಷ್ಟು ಮೀಸಲಾತಿ ಸೇರ್ಪಡೆ ಮಾಡಿದಂತೆ ನಮ್ಮ ಮೀಸಲಾತಿ ಸೇರ್ಪಡೆಗೂ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

ವಿಷಯಗಳು: #karnataka #news #politics
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version