ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾನು ಸತ್ಯಾಗ್ರಹ ಕೈಬಿಡುವುದಿಲ್ಲ, ನೀವೆಲ್ಲರು ದೇಶಕ್ಕಾಗಿ ಕೈಜೋಡಿಸಿ – ಸೋನಮ್ ವಾಂಗ್‌ಚುಕ್

ನಾನು ಸತ್ಯಾಗ್ರಹ ಕೈಬಿಡುವುದಿಲ್ಲ, ನೀವೆಲ್ಲರು ದೇಶಕ್ಕಾಗಿ ಕೈಜೋಡಿಸಿ – ಸೋನಮ್ ವಾಂಗ್‌ಚುಕ್

ನವದೆಹಲಿ : ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆಗೆ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ, ಕಾಕ್ರೋಚ್‌ ಜನತಾ ಪಕ್ಷ (ಸಿಜೆಪಿ) ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆಯ ಭಾಗವಾಗಿರುವ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್‌ಚುಕ್‌ (Sonam Wangchuk), ಕಳೆದ 18 ದಿನಗಳಿಂದ ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜಕೀಯ ನಾಯಕರು ಹಾಗೂ ಅಸಂಖ್ಯಾತ ಬೆಂಬಲಿಗರ ನಿರಂತರ ವಿನಂತಿಗಳ ಹೊರತಾಗಿಯೂ, ಸೋನಮ್ ವಾಂಗ್‌ಚುಕ್ (Sonam Wangchuk)ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು (unger strike ) ಮುಂದುವರಿಸಲು ನಿರ್ಧರಿಸಿದ್ದಾರೆ.

ನಾನು ಈಗಲೇ ಊಟ ಮಾಡಿದರೆ ದೇಶಕ್ಕೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ? ಪ್ರತಿಭಟನಾಕಾರರು ಬಂದು ಕುಳಿತು ಸುಮ್ಮನೆ ಹೊರಟು ಹೋಗುತ್ತಾರೆ ಎಂದಾಗುತ್ತದೆ. ಸರ್ಕಾರದ ಕಡೆಯಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಾರದೆ ತಾವು ಉಪವಾಸ ಕೈಬಿಟ್ಟರೆ, ಅದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

18ನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ: ಆರೋಗ್ಯದ ಸ್ಥಿತಿ ಹೇಗಿದೆ?
ತಮ್ಮ ವೀಡಿಯೊ ಸಂದೇಶದಲ್ಲಿ ಉಪವಾಸ ಸತ್ಯಾಗ್ರಹದ 18ನೇ ದಿನದ ಅನುಭವಗಳನ್ನು ಹಂಚಿಕೊಂಡಿರುವ ಅವರು, ತಮ್ಮ ಆರೋಗ್ಯದ ಕುರಿತು ಅಭಿಮಾನಿಗಳಲ್ಲಿ ಇರುವ ಆತಂಕವನ್ನು ದೂರ ಮಾಡಿದ್ದಾರೆ.

ಅನೇಕ ವೈದ್ಯಕೀಯ ಪರೀಕ್ಷೆಗಳು ಹಾಗೂ ಇಸಿಜಿ ಮಾಡಲಾಗಿದ್ದು, ವರದಿಗಳು ಸದ್ಯಕ್ಕೆ ಸಾಮಾನ್ಯ ರೇಂಜ್‌ನಲ್ಲಿವೆ. ತಕ್ಷಣಕ್ಕೆ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. 18 ದಿನಗಳ ಉಪವಾಸದಿಂದಾಗಿ ದೇಹದಲ್ಲಿ ತೀವ್ರ ದೌರ್ಬಲ್ಯ ಕಾಣಿಸಿಕೊಂಡಿದೆ ಮತ್ತು ಸ್ನಾಯುಗಳು ಬಲಹೀನವಾಗುತ್ತಿವೆ. ಆದರೆ, ಹೃದಯ ಮತ್ತು ಆಂತರಿಕ ಅಂಗಾಂಗಗಳು ಇನ್ನೂ ಸದೃಢವಾಗಿ ಕೆಲಸ ಮಾಡುತ್ತಿವೆ. ಹೀಗಾಗಿ ಇನ್ನೂ ಕೆಲವು ದಿನಗಳ ಕಾಲ ಹೋರಾಟ ಮುಂದುವರಿಸಲು ಶಕ್ತಿ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯದ ಮೊರೆ ಹೋದ ಹಿತೈಷಿಗಳು ಹಾಗೂ ಹಿರಿಯ ರಾಜಕಾರಣಿಗಳು ತಮಗೆ ಊಟ ಮಾಡುವಂತೆ ಪ್ರೀತಿಯಿಂದ ಒತ್ತಾಯಿಸುತ್ತಿದ್ದಾರೆ ಎಂದು ವಾಂಗ್‌ಚುಕ್ ಇದೇ ವೇಳೆ ಸ್ಮರಿಸಿದ್ದಾರೆ. ಉಪವಾಸವನ್ನು ಕೊನೆಗೊಳಿಸುವಂತೆ ಮನವಿ ಮಾಡುವ ಬದಲು, ಜುಲೈ 20 ರಂದು ಸಿಜೆಪಿಯ ಪ್ರಸ್ತಾವಿತ ಚಲೋ ಸಂಸದ್‌‍ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ. ಇದರಿಂದ ಸರ್ಕಾರಕ್ಕೆ ಸಂದೇಶ ಕಳುಹಿಸಲಾಗುತ್ತದೆ.ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಜುಲೈ 20 ಅನ್ನು ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಅನುಭವಿ ಶಿಕ್ಷಣದ ದಿನವಾಗಿ ಆಚರಿಸಲು ನಾನು ವಿನಂತಿಸುತ್ತೇನೆ ಎಂದಿದ್ದಾರೆ.

ವಿಷಯಗಳು: #india #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು