ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಡಿಸಿ ಪಿಎ ಚಾಟ್ ಪ್ರಕರಣದಲ್ಲಿ ಸತ್ಯಾ ಹೊರಬರಲಿ – ಎಚ್.ಡಿ. ಕುಮಾರಸ್ವಾಮಿನಿಖಿಲ್‌ಗೆ ದೇವಾಲಯ ಪ್ರವೇಶ ವಿಚಾರ – ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಜನ – ಎಚ್.ಡಿ. ಕುಮಾರಸ್ವಾಮಿಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮಧ್ಯಪ್ರವೇಶ ಮಾಡಲಿ – ಜಿ. ಪರಮೇಶ್ವರ್ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ನವೆಂಬರ್ 16ರ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆಅಮೆರಿಕದಲ್ಲಿ ಒಂದೇ ದಿನ ಸರಣಿ ಅವಘಡಗಳು: ವಿಮಾನ ಹಾರಾಟ ಸ್ಥಗಿತ, ಹಡಗು ಅಪಘಾತ, SpaceX ಬೂಸ್ಟರ್ ಸ್ಫೋಟ!ತಮಿಳುನಾಡಿನ ವಿರೋಧಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ, ಮೇಕೆದಾಟಿಗೆ ಅಣೆಕಟ್ಟು ಕಟ್ಟುವುದು ನಮ್ಮ ಹಕ್ಕು ಸಿ ಎಮ್‌ ಡಿ ಕೆ ಶಿವಕುಮಾರ್ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ಚುರುಕು: ಐವರು ಪ್ರಮುಖ ಸಾಕ್ಷಿಗಳ ವಿಚಾರಣೆಮಹದೇವ್ ಬೆಟ್ಟಿಂಗ್ ಆಯಪ್ ಜಾಲಕ್ಕೆ ಸಿಬಿಐ ಶಾಕ್; 6 ರಾಜ್ಯಗಳ 33 ಕಡೆ ದಾಳಿಆರ್‌ಎಸ್‌ಎಸ್‌ ನಂಟಿನ ಆರೋಪ: ನಿಗಮ ಮಂಡಳಿ ಹುದ್ದೆಗಳಿಗೆ ರಾಜೀನಾಮೆ ನೀಡಲು ಸೂಚನೆKPS ಶಾಲೆಗಳ ಬಲವರ್ಧನೆ – ಕರಡು ಪ್ರಕಟಿಸಿದ ರಾಜ್ಯ ಸರ್ಕಾರಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ವಿವಾದಾತ್ಮಕ ನಟಿ ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್ ದಾಖಲುಮಕ್ಕಳಿಗೆ ಹೆಚ್ಚಿದ ಓದಿನ ಒತ್ತಡ – 1 ರಿಂದ 9ನೇ ತರಗತಿವರೆಗೆ ಟ್ಯೂಷನ್‌ಗೆ ಬ್ರೇಕ್ಮೇಕೆದಾಟು ಯೋಜನೆಗೆ ವಿರೋಧ ರಾಜಕೀಯ ಪ್ರೇರಿತ: ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಪ್ರಧಾನಿ ಒಪ್ಪಿಗೆಪ್ರಧಾನಿ ಮೋದಿ ಭೇಟಿ ವೇಳೆ ಮಾಂಸದಂಗಡಿ ಬಂದ್ ಮಾಡುವ ಅವಶ್ಯಕತೆ ಏನಿತ್ತು – ನಿ. ನ್ಯಾ. ನಾಗಮೋಹನ್‌ನಾಳೆಯಿಂದ ತುಂಗಭದ್ರಾ ಕಾಲುವೆ ನಾಳೆಯಿಂದ ಬಂದ್ – ರೈತರಿಂದ ತೀವ್ರ ಆಕ್ರೋಶಇಡಿಯಿಂದ 580 ಪುಟಗಳ ಚಾರ್ಜ್‌ಶೀಟ್, ಕೆಪಿಎಸ್‌ಸಿ ಹಗರಣದಲ್ಲಿ 4 ಜನರ ಪಟ್ಟಿ ಬಿಡುಗಡೆಮಧುಮೇಹ ಪತ್ತೆಯಲ್ಲಿನ ವಿಳಂಬ ಆತಂಕಕಾರಿ; ಆರಂಭಿಕ ತಪಾಸಣೆಗೆ WHO ಕರೆವಿಶ್ವ ಬಾಕ್ಸ್ ಆಫೀಸ್‌ನಲ್ಲಿ ₹1,110 ಕೋಟಿ ಗಳಿಸಿದ ‘ರಾಮಾಯಣ’; ಯಶ್‌ಗೆ ಮತ್ತೊಂದು 1,000 ಕೋಟಿ ದಾಖಲೆ!ಋತುಬಂಧದ ಮಹಿಳೆಯರ ಆರೋಗ್ಯ ರಕ್ಷಣೆಗೆ ‘ಋತುತಾರೆ’ ಯೋಜನೆ ಜಾರಿ; ನಟಿ, ಮಾಜಿ ಸಂಸದೆ ರಮ್ಯಾ ರಾಯಭಾರಿನನ್ನ ಫೋನ್‌ನಲ್ಲೇ ಸಾಕ್ಷ್ಯವಿದೆ, ಮೋದಿಯವರೇ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ; ಮುಖಾಮುಖಿ ಚರ್ಚೆಗೆ ಮತ್ತೊಮ್ಮೆ ಸವಾಲು

ಮಕ್ಕಳಿಗೆ ಹೆಚ್ಚಿದ ಓದಿನ ಒತ್ತಡ – 1 ರಿಂದ 9ನೇ ತರಗತಿವರೆಗೆ ಟ್ಯೂಷನ್‌ಗೆ ಬ್ರೇಕ್

ಮಕ್ಕಳಿಗೆ ಹೆಚ್ಚಿದ ಓದಿನ ಒತ್ತಡ – 1 ರಿಂದ 9ನೇ ತರಗತಿವರೆಗೆ ಟ್ಯೂಷನ್‌ಗೆ ಬ್ರೇಕ್

ಬೆಂಗಳೂರು : ವಿದ್ಯಾರ್ಥಿಗಳ ಮೇಲಿನ ಅತಿಯಾದ ಶೈಕ್ಷಣಿಕ (School Education) ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ (Government) ಮಹತ್ವದ ಹೆಜ್ಜೆಯಿಟ್ಟಿದೆ. 1 ರಿಂದ 9ನೇ ತರಗತಿಯವರೆಗಿನ ಮಕ್ಕಳಿಗೆ ಕೋಚಿಂಗ್ (Coaching Ban) ನೀಡುವುದನ್ನು ನಿರ್ಬಂಧಿಸಿ, ಕೇವಲ 10ನೇ ತರಗತಿ ಹಾಗೂ ಅದಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಕೋಚಿಂಗ್ ಪಡೆಯಲು ಅವಕಾಶ ಕಲ್ಪಿಸುವ ಕರಡು ಮಾರ್ಗಸೂಚಿಯನ್ನು ಶಾಲಾ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

15 ವರ್ಷ ತುಂಬಿದವರಿಗೆ ಮಾತ್ರ ಕೋಚಿಂಗ್‌ಗೆ ಅವಕಾಶ
ನೂತನ ಪ್ರಸ್ತಾವನೆಯ ಪ್ರಕಾರ, 15 ವರ್ಷ ಪೂರೈಸಿದ ವಿದ್ಯಾರ್ಥಿಗಳಿಗೆ ಮಾತ್ರ ಕೋಚಿಂಗ್ ಸೆಂಟರ್‌ಗಳಿಗೆ ಪ್ರವೇಶ ನೀಡಲಾಗುವುದು. ಬೆಳಗ್ಗೆಯಿಂದ ಸಂಜೆಯವರೆಗೆ ಶಾಲಾ ತರಗತಿಗಳು, ಬಳಿಕ ಟ್ಯೂಷನ್‌ಗಳು ಹಾಗೂ ಮನೆಗೆ ಮರಳಿದ ನಂತರ ಹೋಂವರ್ಕ್ ಮತ್ತು ಪರೀಕ್ಷಾ ತಯಾರಿಯಿಂದಾಗಿ ಮಕ್ಕಳು ಆಟ, ವಿಶ್ರಾಂತಿ ಹಾಗೂ ಮನರಂಜನೆಯಿಂದ ವಂಚಿತರಾಗುತ್ತಿದ್ದಾರೆ. ಈ ಒತ್ತಡದ ವಾತಾವರಣಕ್ಕೆ ಅಂತ್ಯ ಹಾಡಲು ಸರ್ಕಾರ ಕೈಗೊಂಡಿರುವ ಈ ನಿರ್ಧಾರಕ್ಕೆ ಪೋಷಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಟ್ಯೂಷನ್ ಹೆಸರಿನಲ್ಲಿ ಮಕ್ಕಳ ಮೇಲೆ ಹೇರಲಾಗುತ್ತಿರುವ ಮಾನಸಿಕ ಒತ್ತಡ ತಗ್ಗುವುದರ ಜೊತೆಗೆ, ಉತ್ತಮ ರ್ಯಾಂಕ್ ಹಾಗೂ ಫಲಿತಾಂಶದ ಆಸೆ ತೋರಿಸಿ ಪೋಷಕರಿಂದ ದುಬಾರಿ ಶುಲ್ಕ ವಸೂಲಿ ಮಾಡುವ ದಂಧೆಗೂ ಇದರಿಂದ ಬ್ರೇಕ್ ಬೀಳಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕೋಚಿಂಗ್ ಕೇಂದ್ರಗಳಿಗೆ ಕಠಿಣ ನಿಯಮಗಳ ಮೂಗುದಾರ
ಇದುವರೆಗೆ ಅತ್ಯುತ್ತಮ ಫಲಿತಾಂಶದ ಭರವಸೆ ನೀಡಿ ಪೋಷಕರನ್ನು ಸೆಳೆಯುತ್ತಿದ್ದ ಕೋಚಿಂಗ್ ಸಂಸ್ಥೆಗಳ ಕಾರ್ಯವೈಖರಿಗೂ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೋಚಿಂಗ್ ಕೇಂದ್ರಗಳ ನೋಂದಣಿ, ಶುಲ್ಕ ನಿಗದಿ ಮತ್ತು ಮೂಲಸೌಕರ್ಯಗಳ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗುತ್ತಿದೆ. ಪ್ರತಿಯೊಂದು ಕೋಚಿಂಗ್ ಸೆಂಟರ್ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕಿದ್ದು, ಅಗ್ನಿ ಸುರಕ್ಷತಾ ಕ್ರಮಗಳು, ಸಿಸಿಟಿವಿ ಕಣ್ಗಾವಲು ಹಾಗೂ ಶೌಚಾಲಯದಂತಹ ಮೂಲಭೂತ ಸೌಲಭ್ಯಗಳನ್ನು ಹೊಂದಿರಬೇಕು. ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ಇಲಾಖೆ ರವಾನಿಸಿದೆ.

10 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೂ ವಿನಾಯಿತಿಗೆ ಆಗ್ರಹ
ಇನ್ನೊಂದೆಡೆ, ಈ ನಿರ್ಬಂಧವನ್ನು ಕೇವಲ 9ನೇ ತರಗತಿಗೆ ಮಾತ್ರ ಸೀಮಿತಗೊಳಿಸಿರುವ ಕುರಿತು ಚರ್ಚೆಗಳು ಶುರುವಾಗಿವೆ. 10, 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಮೇಲೂ ಬೋರ್ಡ್ ಪರೀಕ್ಷೆ, ಅಂಕಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತೀವ್ರ ಒತ್ತಡವಿರುತ್ತದೆ. ಆದ್ದರಿಂದ ಈ ಹಂತದ ವಿದ್ಯಾರ್ಥಿಗಳನ್ನೂ ಟ್ಯೂಷನ್ ಒತ್ತಡದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು