ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾತ್ಮ ಗಾಂಧೀಜಿ ಬಗ್ಗೆ ಅವಹೇಳನ; ಬಸನಗೌಡ ಯತ್ನಾಳ್ ವಿರುದ್ಧ ದೂರು, ಪ್ರಕರಣ ದಾಖಲು

P

Peepal Media Desk • ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಮಹಾತ್ಮ ಗಾಂಧೀಜಿ ಬಗ್ಗೆ ಅವಹೇಳನ; ಬಸನಗೌಡ ಯತ್ನಾಳ್ ವಿರುದ್ಧ ದೂರು, ಪ್ರಕರಣ ದಾಖಲು

ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತನ್ನ ಹಳೆಯ ಚಾಳಿಯಂತೆ ವಿವಾದಾತ್ಮಕ ಹೇಳಿಕೆಗಳಿಂದ ಮತ್ತೆ ಸುದ್ದಿಗೆ ಬಂದಿದ್ದಾರೆ. ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ಕಾರಣಕ್ಕೆ ಸುದ್ದಿಗೆ ಬರುವ ಯತ್ನಾಳ್ ಈ ಬಾರಿ ಮಹಾತ್ಮ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿದ್ದಾರೆ. ಅಷ್ಟೇ ಅಲ್ಲದೆ ಇದೇ ವಿಚಾರಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ.

ಉಚ್ಛಾಟಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗಾಂಧೀಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ವಿಜಯಪುರದ ಆದರ್ಶ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರ ನಗರದ ಇಬ್ರಾಹಿಂ ರೋಜಾ ಪ್ರದೇಶದ ಅಲ್ಲಾಭಕ್ಷ ಡೋಗರಿಸಾಬ ಬಡೇಘರ ಎಂಬ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನೀಡಿದ ದೂರಿನ ಅನ್ವಯ ಪೊಲೀಸರು ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೇ 12ರಂದು ಆದರ್ಶ ನಗರದಲ್ಲಿ ಬಸವೇಶ್ವರ ದೇವಸ್ಥಾನದ ಗುದ್ದಲಿ ಪೂಜೆಗೆ ಬಂದಂತಹ ಸಂದರ್ಭದಲ್ಲಿ ಮಾತನಾಡುತ್ತಾ ಶಾಸಕ ಯತ್ನಾಳ್, “ಮಹಾತ್ಮ ಗಾಂಧಿ ಹುಟ್ಟಿಸಿದ ಕೂಸೇ ಪಾಕಿಸ್ತಾನ. ಗಾಂಧಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಮತ್ತು ಗಾಂಧಿ ದೇಶ ಒಡೆದವರು, ಗಾಂಧಿ ಮುಸಲ್ಮಾನರಿಗೆ ಪಾಕಿಸ್ತಾನ ಮಾಡಿಕೊಟ್ಟ, ನಮ್ಮ ದೇಶದ ಒಡೆದವರ ಮೂರ್ತಿಯನ್ನು ಬೀದಿ-ಬೀದಿಗಳಲ್ಲಿ ಸ್ಥಾಪನೆ ಮಾಡುತ್ತೇವೆ” ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.

ಈ ಬಗ್ಗೆ ದೂರು ದಾಖಲಿಸಿದ ಅಲ್ಲಾಭಕ್ಷ “ಗಾಂಧಿಜಿಯವರು ನಮ್ಮ ಭಾರತದ ದೇಶಕ್ಕೆ ಮಾತ್ರವಲ್ಲ ಇಡೀ ವಿಶ್ವದಲ್ಲಿ ಅಹಿಂಸೆ ಪ್ರತೀಕ ಎಂದೇ ಖ್ಯಾತರು. 2001ರಲ್ಲಿ ಯುನೈಟೆಡ್‌ ನೇಷನ್ ವತಿಯಿಂದ ಪ್ರತಿ ವರ್ಷ ಅ.2ರ ಗಾಂಧಿಜಿ ಜಯಂತಿಯಂದು ವಿಶ್ವ ಅಹಿಂಸಾ ದಿನ ಎಂದು ಘೋಷಿಸಿರುವುದೇ ಇದಕ್ಕೆ ಸಾಕ್ಷಿ. ವಿಶ್ವಾದ್ಯಂತ ಭಾರತ ಎಂದರೆ ಗಾಂಧೀಜಿ ಹಾಗೂ ಗಾಂಧೀಜಿ ಎಂದರೆ ಭಾರತ ಎನ್ನುವುದರ ಮಟ್ಟಿಗೆ ತಮ್ಮ ವ್ಯಕ್ತಿತ್ವ ಇಡಿ ವಿಶ್ವಕ್ಕೆ ಪರಿಚಯಿಸಿದ್ದಾರೆ. ಇಂತಹ ವ್ಯಕ್ತಿತ್ವ ವಿರುದ್ಧ ಹಗುರವಾಗಿ ಮಾತನಾಡಿದ ಶಾಸಕರ ವಿರುದ್ದ ಕಠಿಣ ಕ್ರಮ ಜರುಗಿಸಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version