ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂದಿನಿಂದ ರಾಜ್ಯಾದ್ಯಂತ 3 ಹಂತದಲ್ಲಿ ಒಳಮೀಸಲಾತಿ ಸಮೀಕ್ಷೆ; 65 ಸಾವಿರ ಶಿಕ್ಷಕರ ನೇಮಕ: ಸಿಎಂ ಸಿದ್ದರಾಮಯ್ಯ

ಇಂದಿನಿಂದ ರಾಜ್ಯಾದ್ಯಂತ 3 ಹಂತದಲ್ಲಿ ಒಳಮೀಸಲಾತಿ ಸಮೀಕ್ಷೆ; 65 ಸಾವಿರ ಶಿಕ್ಷಕರ ನೇಮಕ: ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ಇಂದಿನಿಂದ ಮೇ. 17 ರವರೆಗೆ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆಗೆ 65 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಬಗ್ಗೆ ಸದಾಶಿವ ಆಯೋಗ ವರದಿ ಕೊಟ್ಟಿತ್ತು. 2011ರ ಜನಸಂಖ್ಯೆ ಆಧರಿಸಿ ವರದಿಯನ್ನು ಕೊಟ್ಟಿದ್ದರು. ಇದೀಗ ಇಂದಿನಿಂದ ಮೇ.17 ರವರೆಗೆ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ.  ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ. 2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ  ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024 ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು ಎಂದು ಹೇಳಿದರು.

ಪರಿಶಿಷ್ಟ ಜಾತಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನ್ಯಾ| ನಾಗಮೋಹನ್ ದಾಸ್ ಆಯೋಗ ಇಂದಿನಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ. ಗಣತಿದಾರರು ಕೇವಲ ಪರಿಶಿಷ್ಟ ಜಾತಿಗೆ ಸೇರಿದವರ ಮನೆಗೆ ಮಾತ್ರವಲ್ಲದೆ ಎಲ್ಲ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಈ ವೇಳೆ ಎಸ್ಸಿ ಅಲ್ಲದ ಕುಟುಂಬಗಳಿಂದ ಮನೆ ಸಂಖ್ಯೆ ಆಯಪ್ ನಲ್ಲಿ ನಮೂದಿಸಿ ಕುಟುಂಬ ಸದಸ್ಯರ ಸಂಖ್ಯೆ ದಾಖಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಾ ಶಶಿಧರ್,  ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು