ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬದರಿನಾಥಯಲ್ಲಿ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ – ತನಿಖೆ ಚುರುಕು

ಬದರಿನಾಥಯಲ್ಲಿ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ – ತನಿಖೆ ಚುರುಕು

ಡೆಹ್ರಾಡೂನ್: ಬದರಿನಾಥ ಧಾಮದಲ್ಲಿ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ಉತ್ತರಾಖಂಡ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಸೂಚನೆಯ ಮೇರೆಗೆ ಮೂವರು ಸದಸ್ಯರ ವಿಶೇಷ ತನಿಖಾ ಸಮಿತಿ ರಚಿಸಲಾಗಿದೆ.

ಸಮಿತಿಯ ಅಧ್ಯಕ್ಷ  ಹೇಮಂತ್ ದ್ವಿವೇದಿ ಅವರು ಮಾಹಿತಿ ನೀಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಕೆಲವು ಲೋಪದೋಷಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಬದರಿನಾಥ್-ಕೇದಾರನಾಥ ದೇವಸ್ಥಾನ ಸಮಿತಿಯ ಖಾಸಗಿ ಕಾರ್ಯದರ್ಶಿಯಾಗಿದ್ದ ಪ್ರಮೋದ್ ನೌಟಿಯಾಲ್ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸರ್ಕಾರ ರಚಿಸಿರುವ ಹೊಸ ತನಿಖಾ ಸಮಿತಿಯು ಜುಲೈ 8ರಿಂದಲೇ ತನಿಖೆ ಆರಂಭಿಸಿದ್ದು, ಮುಂದಿನ 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಸಮಿತಿಯು ಗರ್ವಾಲ್ ವಿಭಾಗದ ಕಮಿಷನರ್ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದೆ.

ಇದೇ ವೇಳೆ ದೇವಸ್ಥಾನ ಸಮಿತಿಯು ನಾಲ್ವರು ಹಿರಿಯ ಅಧಿಕಾರಿಗಳ ತಂಡವನ್ನು ರಚಿಸಿ ಪ್ರತ್ಯೇಕ ತನಿಖೆ ನಡೆಸುತ್ತಿದೆ. ತಂಡವು ದೇವಸ್ಥಾನದ ಸಿಸಿಟಿವಿ ದೃಶ್ಯಗಳು, ಸಿಬ್ಬಂದಿಗಳ ಹೇಳಿಕೆಗಳು ಹಾಗೂ ಹಣಕಾಸು ದಾಖಲೆಗಳನ್ನು ಪರಿಶೀಲಿಸುತ್ತಿದೆ.ಆರೋಪಗಳು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಬದರಿನಾಥ್-ಕೇದಾರನಾಥ ದೇವಸ್ಥಾನ ಸಮಿತಿ, 1939 ಮತ್ತು ನೌಕರರ ನಡವಳಿಕೆ ನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬದರಿನಾಥ ದೇವಸ್ಥಾನದ ಕಾಣಿಕೆ ಹಣ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಹರಡಿತ್ತು. ಬಳಿಕ  ಭೈರವ ಸೇನೆ ಸಂಘಟನೆ ಈ ಕುರಿತು ತನಿಖೆಗೆ ದೂರು ನೀಡಿತ್ತು. ಭಕ್ತರ ಕಾಣಿಕೆ ಹಣಕ್ಕೆ ಸಂಬಂಧಿಸಿದ ಪ್ರಕರಣವಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ವಿಷಯಗಳು: #india #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು