ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ಸೇನೆ ದಾಳಿ ; 500 ಕ್ಕೂ ಹೆಚ್ಚು ಅಮಾಯಕರ ಸಾವು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ಸೇನೆ ದಾಳಿ ; 500 ಕ್ಕೂ ಹೆಚ್ಚು ಅಮಾಯಕರ ಸಾವು

ಹಮಾಸ್ ನ್ನು ಮಟ್ಟ ಹಾಕಲು ಇಸ್ರೇಲ್ ಗಾಜಾದಲ್ಲಿ ನಡೆಸುತ್ತಿರುವ ದಾಳಿ ದಿನೇ ದಿನೇ ಪರಿಸ್ಥಿತಿ ಕೈಮೀರುವಂತೆ ಮಾಡಿದೆ. ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಹಮಾಸ್ ಬಂಡುಕೋರರ ಮೇಲಿನ ದಾಳಿ ಮುಂದುವರೆಸಿದ ಇಸ್ರೇಲ್ ಭೀಕರ ಹತ್ಯಾಕಾಂಡವನ್ನೇ ನಡೆಸಿದೆ.

ಯುದ್ಧ ಸಂತ್ರಸ್ತ ಗಾಯಾಳುಗಳು ಮತ್ತು ಇತರ ಪ್ಯಾಲೆಸ್ಟೀನಿಯಾದವರಿಂದಲೇ ತುಂಬಿದ ಗಾಜಾ ನಗರದ ಆಸ್ಪತ್ರೆಯಲ್ಲಿ ಮಂಗಳವಾರ ಭಾರಿ ಸ್ಫೋಟ ಸಂಭವಿಸಿದ್ದು, 500ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಹತ್ಯಾಕಾಂಡಕ್ಕೆ ಹಮಾಸ್ ಇಸ್ರೇಲಿ ವೈಮಾನಿಕ ದಾಳಿಯನ್ನು ದೂಷಿಸಿದೆ. ಆದರೆ ಇಸ್ರೇಲಿ ಮಿಲಿಟರಿ ಇದು ಪ್ಯಾಲೆಸ್ಟೀನಿಯನ್ ಉಗ್ರಗಾಮಿಗಳು ತಪ್ಪಾಗಿ ಹಾರಿಸಿದ ರಾಕೆಟ್ ದಾಳಿ ಎಂದು ಹೇಳಿದೆ. ದಾಳಿಯಲ್ಲಿ ಕನಿಷ್ಠ 500 ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಅಲ್-ಅಹ್ಲಿ ಅರಬ್ ಆಸ್ಪತ್ರೆಯ ಮೇಲಿನ ದಾಳಿಯು ಅಂತರರಾಷ್ಟ್ರೀಯ ಖಂಡನೆಗೆ ಕಾರಣವಾಗಿದೆ.

“ಇದು ಅತಿರೇಕದ ಮತ್ತು ಮತ್ತೊಮ್ಮೆ ಇದು ನಾಗರಿಕರ ಜೀವನದ ಬಗ್ಗೆ ಸ್ಪಷ್ಟವಾದ ನಿರ್ಲಕ್ಷ್ಯವನ್ನು ತೋರಿಸುತ್ತದೆ” ಎಂದು ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಇನ್ ನಿಯರ್ ಈಸ್ಟ್ (UNRWA) ತನ್ನ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದೆ.

ಜೋರ್ಡಾನ್ ರಾಜ ಅಬ್ದುಲ್ಲಾ II, ದಾಳಿಯನ್ನು “ಹತ್ಯಾಕಾಂಡ” ಮತ್ತು “ಮಾನವೀಯತೆಯ ಅವಮಾನ” ಎಂದು ಕರೆದಿದ್ದಾರೆ.

ಬಂಡುಕೋರರ ದಾಳಿಯನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡಿರುವ ಇಸ್ರೇಲ್ ಈಗ ಗಾಜಾದ ಸಂಪೂರ್ಣ ನಾಶಕ್ಕೆ ಕೈ ಹಾಕಿದೆ. ವಿಶ್ವಸಂಸ್ಥೆ ಅಥವಾ ಇನ್ನಾವುದೇ ಸಂಸ್ಥೆಯ ಸಲಹೆಗಳನ್ನು ಪೂರಕವಾಗಿ ತಗೆದುಕೊಳ್ಳದೇ ನೇರಾನೇರ ತನಗೆ ತೋಚಿದ ಜಾಗಕ್ಕೆ ದಾಳಿ ಮಾಡಿ ಅಮಾಯಕರ ಸಾವಿಗೆ ಕಾರಣವಾಗುತ್ತಿದೆ.

ಎರಡು ದಿನಗಳ ಹಿಂದಷ್ಟೇ ಗಾಜಾದಲ್ಲಿ ಇರುವ 20 ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ತೆರವುಗೊಳಿಸುವಂತೆ ಇಸ್ರೇಲ್ ಸೇನೆ ಗಡುವು ನೀಡಿತ್ತು. ಇದರ ಬೆನ್ನಲ್ಲೇ ಈ ಒಂದು ದಾಳಿ ಭಯಾನಕ ವಾತಾವರಣ ಸೃಷ್ಟಿಸಿದೆ.

ನಾಗರಿಕರಿಗೆ ಆಶ್ರಯ ನೀಡುವಲ್ಲಿ ಆಸ್ಪತ್ರೆಗಳು ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಗಾಜಾ ಆರೋಗ್ಯ ಸಚಿವಾಲಯವು ಹೇಳಿಕೆಯನ್ನು ನೀಡಿತು.

ಇಸ್ರೇಲ್ ಆಸ್ಪತ್ರೆ ಮೇಲೆ ಬಾಂಬ್ ಸುರಿಮಳೆ ಸುರಿಸಿದೆ. ಆಸ್ಪತ್ರೆ ಮೇಲೆ ನಡೆದ ಭೀಕರ ದಾಳಿಯಲ್ಲಿ ಪುಟ್ಟ ಮಕ್ಕಳು ಸೇರಿ 500ಕ್ಕೂ ಹೆಚ್ಚು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೀವ ಉಳಿಸಿಕೊಳ್ಳಲು ಜನ ಪರದಾಟ ನಡೆಸುವಂತಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು