ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
81 ಲಕ್ಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು!ಡಿಸಿ ಪಿಎ ಚಾಟ್ ಪ್ರಕರಣದಲ್ಲಿ ಸತ್ಯಾ ಹೊರಬರಲಿ – ಎಚ್.ಡಿ. ಕುಮಾರಸ್ವಾಮಿನಿಖಿಲ್‌ಗೆ ದೇವಾಲಯ ಪ್ರವೇಶ ವಿಚಾರ – ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಜನ – ಎಚ್.ಡಿ. ಕುಮಾರಸ್ವಾಮಿಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮಧ್ಯಪ್ರವೇಶ ಮಾಡಲಿ – ಜಿ. ಪರಮೇಶ್ವರ್ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ನವೆಂಬರ್ 16ರ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆಅಮೆರಿಕದಲ್ಲಿ ಒಂದೇ ದಿನ ಸರಣಿ ಅವಘಡಗಳು: ವಿಮಾನ ಹಾರಾಟ ಸ್ಥಗಿತ, ಹಡಗು ಅಪಘಾತ, SpaceX ಬೂಸ್ಟರ್ ಸ್ಫೋಟ!ತಮಿಳುನಾಡಿನ ವಿರೋಧಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ, ಮೇಕೆದಾಟಿಗೆ ಅಣೆಕಟ್ಟು ಕಟ್ಟುವುದು ನಮ್ಮ ಹಕ್ಕು ಸಿ ಎಮ್‌ ಡಿ ಕೆ ಶಿವಕುಮಾರ್ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ಚುರುಕು: ಐವರು ಪ್ರಮುಖ ಸಾಕ್ಷಿಗಳ ವಿಚಾರಣೆಮಹದೇವ್ ಬೆಟ್ಟಿಂಗ್ ಆಯಪ್ ಜಾಲಕ್ಕೆ ಸಿಬಿಐ ಶಾಕ್; 6 ರಾಜ್ಯಗಳ 33 ಕಡೆ ದಾಳಿಆರ್‌ಎಸ್‌ಎಸ್‌ ನಂಟಿನ ಆರೋಪ: ನಿಗಮ ಮಂಡಳಿ ಹುದ್ದೆಗಳಿಗೆ ರಾಜೀನಾಮೆ ನೀಡಲು ಸೂಚನೆKPS ಶಾಲೆಗಳ ಬಲವರ್ಧನೆ – ಕರಡು ಪ್ರಕಟಿಸಿದ ರಾಜ್ಯ ಸರ್ಕಾರಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ವಿವಾದಾತ್ಮಕ ನಟಿ ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್ ದಾಖಲುಮಕ್ಕಳಿಗೆ ಹೆಚ್ಚಿದ ಓದಿನ ಒತ್ತಡ – 1 ರಿಂದ 9ನೇ ತರಗತಿವರೆಗೆ ಟ್ಯೂಷನ್‌ಗೆ ಬ್ರೇಕ್ಮೇಕೆದಾಟು ಯೋಜನೆಗೆ ವಿರೋಧ ರಾಜಕೀಯ ಪ್ರೇರಿತ: ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಪ್ರಧಾನಿ ಒಪ್ಪಿಗೆಪ್ರಧಾನಿ ಮೋದಿ ಭೇಟಿ ವೇಳೆ ಮಾಂಸದಂಗಡಿ ಬಂದ್ ಮಾಡುವ ಅವಶ್ಯಕತೆ ಏನಿತ್ತು – ನಿ. ನ್ಯಾ. ನಾಗಮೋಹನ್‌ನಾಳೆಯಿಂದ ತುಂಗಭದ್ರಾ ಕಾಲುವೆ ನಾಳೆಯಿಂದ ಬಂದ್ – ರೈತರಿಂದ ತೀವ್ರ ಆಕ್ರೋಶಇಡಿಯಿಂದ 580 ಪುಟಗಳ ಚಾರ್ಜ್‌ಶೀಟ್, ಕೆಪಿಎಸ್‌ಸಿ ಹಗರಣದಲ್ಲಿ 4 ಜನರ ಪಟ್ಟಿ ಬಿಡುಗಡೆಮಧುಮೇಹ ಪತ್ತೆಯಲ್ಲಿನ ವಿಳಂಬ ಆತಂಕಕಾರಿ; ಆರಂಭಿಕ ತಪಾಸಣೆಗೆ WHO ಕರೆವಿಶ್ವ ಬಾಕ್ಸ್ ಆಫೀಸ್‌ನಲ್ಲಿ ₹1,110 ಕೋಟಿ ಗಳಿಸಿದ ‘ರಾಮಾಯಣ’; ಯಶ್‌ಗೆ ಮತ್ತೊಂದು 1,000 ಕೋಟಿ ದಾಖಲೆ!ಋತುಬಂಧದ ಮಹಿಳೆಯರ ಆರೋಗ್ಯ ರಕ್ಷಣೆಗೆ ‘ಋತುತಾರೆ’ ಯೋಜನೆ ಜಾರಿ; ನಟಿ, ಮಾಜಿ ಸಂಸದೆ ರಮ್ಯಾ ರಾಯಭಾರಿ

ನಿಖಿಲ್‌ಗೆ ದೇವಾಲಯ ಪ್ರವೇಶ ವಿಚಾರ – ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಜನ – ಎಚ್.ಡಿ. ಕುಮಾರಸ್ವಾಮಿ

ನಿಖಿಲ್‌ಗೆ ದೇವಾಲಯ ಪ್ರವೇಶ ವಿಚಾರ – ಕಾಂಗ್ರೆಸ್‌ಗೆ  ಬುದ್ಧಿ ಕಲಿಸಲಿದ್ದಾರೆ ಜನ – ಎಚ್.ಡಿ. ಕುಮಾರಸ್ವಾಮಿ

ಹಾಸನ: ರಾಮನಗರ ಜಿಲ್ಲೆಯ ದೊಡ್ಡಕುರುಬನಹಳ್ಳಿ ಗ್ರಾಮದಲ್ಲಿ ದೇವಾಲಯದ ಉದ್ಘಾಟನೆಗೆ ಆಹ್ವಾನ ನೀಡಿದ್ದರೂ ನಿಖಿಲ್ ಕುಮಾರಸ್ವಾಮಿ ಅವರಿಗೆ ಅಡ್ಡಿಪಡಿಸಿರುವ ಘಟನೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯಲ್ಲಿ ಮಾತನಾಡಿದ ಅವರು, ಸದ್ಯ ರಾಜಕೀಯ ಚರ್ಚೆ ಮಾಡುವುದಿಲ್ಲ. ಇದಕ್ಕೆ ಸ್ವಲ್ಪ ಸಮಯ ನೀಡಬೇಕು ಎಂದು ಕೆಲವರು ಹೇಳಿದ್ದಾರೆ. ಮೈಸೂರಿನಲ್ಲಿ ಮುಖ್ಯಮಂತ್ರಿ ನಿನ್ನೆ ಮಾತನಾಡಿರುವುದನ್ನು ಗಮನಿಸಿದ್ದೇನೆ. ಅವರ ಮಾತು, ಕೃತಿಗಳು ಮತ್ತು ನಡವಳಿಕೆ ಹೇಗಿರುತ್ತದೆ ಎಂಬುದನ್ನು ಕಾದು ನೋಡೋಣ ಎಂದರು ದೊಡ್ಡಕುರುಬನಹಳ್ಳಿ ಗ್ರಾಮದಲ್ಲಿ ಮಾರಮ್ಮ ದೇವಾಲಯದ ಉದ್ಘಾಟನೆಗೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿತ್ತು. ಈ ಗ್ರಾಮ ನನಗೆ ಅತ್ಯಂತ ಹೆಚ್ಚಿನ ಬೆಂಬಲ ನೀಡಿರುವ ಪ್ರದೇಶವಾಗಿದೆ. ಚೀಲೂರು ಪಂಚಾಯಿತಿಗೆ ಸೇರಿದ ಈ ಗ್ರಾಮದಲ್ಲಿ ನನಗೆ ದೊಡ್ಡ ಮಟ್ಟದ ಬಹುಮತ ದೊರೆಯುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜೆಡಿಎಸ್ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುವುದು, ಅವರನ್ನು ಭಯಭೀತರನ್ನಾಗಿಸುವ ಪ್ರಯತ್ನಗಳು ನಡೆಯುತ್ತಿವೆ. ಕಾಂಗ್ರೆಸ್ ಕಾರ್ಯಕರ್ತರ ದೌರ್ಜನ್ಯ ಮತ್ತು ರೌಡಿಸಂ ಬಗ್ಗೆ ಹೆಚ್ಚು ಮಾತನಾಡಲು ಹೋಗುವುದಿಲ್ಲ. ಆದರೆ, ಅಲ್ಲಿನ ಜನರು ಅವರಿಗೆ ಬುದ್ಧಿ ಕಲಿಸುವ ದಿನ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

2004ರಲ್ಲಿ ಕೂಟ್ಗಲ್ಲು ಹೊಸೂರು ಗ್ರಾಮದಲ್ಲಿ ನಾನು ದೇವಾಲಯಕ್ಕೆ ತೆರಳುವ ಸಂದರ್ಭದಲ್ಲಿ ಕಾಂಗ್ರೆಸ್‌ನವರು ದಬ್ಬಾಳಿಕೆ ನಡೆಸಿ ದೇವಾಲಯಕ್ಕೆ ಬೀಗ ಹಾಕಿದ್ದರು. ಆದರೆ, ನಂತರ ನಡೆದ ಚುನಾವಣೆಯಲ್ಲಿ ಜನರು ನನಗೆ 25 ಸಾವಿರಕ್ಕೂ ಅಧಿಕ ಮತಗಳ ಬಹುಮತ ನೀಡುವ ಮೂಲಕ ತಕ್ಕ ಉತ್ತರ ನೀಡಿದ್ದರು. ಇದೀಗ ಕಾಂಗ್ರೆಸ್‌ನವರು ಮತ್ತೊಮ್ಮೆ ಬದಲಾವಣೆಯ ಪರ್ವಕ್ಕೆ ನಾಂದಿ ಹಾಡುತ್ತಿದ್ದಾರೆ ಎಂದು ಟೀಕಿಸಿದರು.

ಈಗಾಗಲೇ ಜೆಡಿಎಸ್ ಕಾರ್ಯಕರ್ತರು ಈ ಘಟನೆಯ ವಿರುದ್ಧ ಹೋರಾಟ ಆರಂಭಿಸಿದ್ದಾರೆ. ಜನರೇ ಮುಂದಿನ ದಿನಗಳಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು