ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕ ಸಾ ಪ ರಾಜ್ಯಾದ್ಯಕ್ಷ ಮಹೇಶ್ ಜೋಷಿ ಒಬ್ಬ ಸರ್ವಾಧಿಕಾರಿ – ಜನಪದ ವಿದ್ವಾಂಸ ಮೇಟಿಕರೆ ಹಿರಿಯಣ್ಣ

ರ
ಕ ಸಾ ಪ ರಾಜ್ಯಾದ್ಯಕ್ಷ ಮಹೇಶ್ ಜೋಷಿ ಒಬ್ಬ ಸರ್ವಾಧಿಕಾರಿ – ಜನಪದ ವಿದ್ವಾಂಸ ಮೇಟಿಕರೆ ಹಿರಿಯಣ್ಣ

ಹಾಸನ : ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷರಾದ ಮಹೇಶ್ ಜೋಷಿಯವರ ಸರ್ವಾಧಿಕಾರಿ ಧೋರಣೆ ನಾಡಿನ ಕನ್ನಡಿಗರನ್ನು ಆತಂಕಕ್ಕೆ ದೂಡಿರುವುದನ್ನು ಖಂಡಿಸಿ ಹಾಗೂ ತನಿಖೆ ಆಗುವವರೆಗೂ ರಾಜ್ಯಾಧ್ಯಕ್ಷರ ಹುದ್ದೆಯಿಂದ ಅಮಾನತ್ತುಗೊಳಿಸಲು ಆಗ್ರಹಿಸಿ ಹಾಸನ ಜನಪರ ಒಕ್ಕೂಟದ ಸಂಘ ಸಂಸ್ಥೆಗಳು ಬುಧವಾರ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಜನಪದ ವಿದ್ವಾಂಸ ಮೇಟಿಕರೆ ಹಿರಿಯಣ್ಣ ಮತ್ತು ಜಾನಪದ ಅಕಾಡೆಮಿ ಜಿಲ್ಲಾಧ್ಯಕ್ಷ ಹಂಪನಹಳ್ಳಿ ತಿಮ್ಮೇಗೌಡ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಅಧ್ಯಕ್ಷರುಗಳು ಕೂಡ ಜನರಿಂದ ಆಯ್ಕೆಯಾದವರು ಎಂಬ ಕನಿಷ್ಠ ಪ್ರಜ್ಞೆ ಇಲ್ಲದೇ ತಮ್ಮನ್ನು ಪ್ರಶ್ನೆ ಮಾಡುವ ಜಿಲ್ಲಾ ಅಧ್ಯಕ್ಷರುಗಳಿಗೆ ನೋಟೀಸ್ ನೀಡುವ ಕೆಲಸ ಮಾಡಿದ್ದಾರೆ. ಕಾರ್ಯಕಾರಿ ಸಮಿತಿಯಲ್ಲಿ ತಮಗೆ ಬೇಕಾದವರನ್ನು ಮಾತ್ರ ಕೂರಿಸಿಕೊಂಡು ತಮಗೆ ಇಷ್ಟ ಬಂದಂತೆ ಪರಿಷತ್ತನ್ನು ನಡೆಸಿಕೊಂಡು ಹೋಗುತ್ತಿದ್ದಾರೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೋಟ್ಯಾಂತರ ರೂ ಅವ್ಯವಹಾರ ನಡೆದಿದೆ ಎಂದು ದೂರು ದಾಖಲಾಗಿದೆ. ಅದೂ ಅಲ್ಲದೇ ಆತಿಥ್ಯ ವಹಿಸಿದ್ದ ಮಂಡ್ಯ ಜಿಲ್ಲೆಗೆ ಬರಬೇಕಾದ ಹಣವನ್ನು ಕೊಡದೇ ದ್ವೇಷದ ಮನಸ್ಥಿತಿ ಪ್ರದರ್ಶಸುತ್ತಿದ್ದಾರೆ ಎಂದು ದೂರಿದರು. ಮಹೇಶ್ ಜೋಷಿಯವರು ಈ ಹಿಂದೆ ದೂರದರ್ಶನದಲ್ಲಿ ತಮ್ಮ ಸಹೋದ್ಯೋಗಿಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಲಯ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಒಬ್ಬ ಅಪರಾಧಿ ಕನ್ನಡ ಸಾಹಿತ್ಯ ಪರಿಷತ್ತಿನ ಚುಕ್ಕಾಣಿ ಹಿಡಿದು ಕುಳಿತಿರುವುದು ಕನ್ನಡಿಗರ ದುರಂತವೇ ಸರಿ. ಏಕಾಏಕಿ ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾಕ್ಕೆ ತಿದ್ದುಪಡಿಗೆ ಮುಂದಾಗಿದ್ದಾರೆ. ಯಾರ ಮಾತನ್ನೂ ಕೇಳದ ದುರಹಂಕಾರಿ ವರ್ತನೆಯ ಮಹೇಶ್ ಜೋಷಿಯವರು ಸರ್ವಾಧಿಕಾರಿ ವ್ಯಕ್ತಿತ್ವ ಉಳ್ಳವರು ಎಂಬುದನ್ನು ಈಗಾಗಲೇ ಸಾಭೀತು ಮಾಡಿದ್ದಾರೆ. ಇಂತಹವರು ಬೈಲಾ ತಿದ್ದುಪಡಿ ಮಾಡಲು ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ ಎಂದರು.

ಈ ಎಲ್ಲಾ ವಿಚಾರಗಳ ಹಿನ್ನೆಲೆಯಲ್ಲಿ ಹಾಸನ ಜನಪರ ಒಕ್ಕೂಟದ ಸಂಘಸಂಸ್ಥೆಗಳು ಇದೇ ತಿಂಗಳ ೨೮ ನೇ ತಾರೀಖು ಪ್ರತಿಭಟನೆ ನಡೆಸಲಾಗುವುದು. ಹಣಕಾಸಿನ ಅವ್ಯವಹಾರ ಆರೋಪ, ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರುಗಳು ಹಾಗು ಪರಿಷತ್ತಿನ ಸದಸ್ಯರುಗಳ ಜೊತೆಗೆ ಘನತೆಯಿಂದ ನಡೆದುಕೊಳ್ಳದ ಸರ್ವಾಧಿಕಾರಿ ಧೋರಣೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಮಹೇಶ್ ಜೋಷಿಯವರನ್ನು ಅಮಾನತ್ತಿನಲ್ಲಿಟ್ಟು ರಾಜ್ಯ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಹಾಗು ಇತರೆ ಬೇಡಿಕೆಗಳನ್ನು ಮುಂದಿಡಲು ಕನ್ನಡ ಭಾಷೆಯ, ಸಾಹಿತ್ಯಪರ ಸಂಘಟನೆಗಳ ಒಕ್ಕೂಟ ತೀರ್ಮಾನಿಸಿದೆ ಎಂದು ಎಚ್ಚರಿಸಿದರು.        ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಚಲಂ ಹಾಡ್ಲಹಳ್ಳಿ, ಜಾನಪದ ವಿದ್ವಾಂಸ ಡಾ. ಹಂಪನಹಳ್ಳಿ ತಿಮ್ಮಗೌಡ, ಸಿ.ಐ.ಟಿ.ಯು. ಜಿಲ್ಲಾಧ್ಯಕ್ಷ ಧರ್ಮೇಶ್, ಹಿರಿಯ ಸಾಹಿತಿ ಎನ್.ಎಲ್. ಚನ್ನೇಗೌಡ, ಹರೀಶ್ ಇತರರು ಉಪಸ್ಥಿತರಿದ್ದರು.              

ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version