ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕನ್ನಡ ಸಾಹಿತ್ಯಕ್ಕೆ 1500 ವರ್ಷಗಳ ಇತಿಹಾಸವಿದೆ ಬೂಕರ್ ಪ್ರಶಸ್ತಿ ವಿಜೇತೆ – ದೀಪಾ ಬಸ್ತಿ

ಕನ್ನಡ ಸಾಹಿತ್ಯಕ್ಕೆ 1500 ವರ್ಷಗಳ ಇತಿಹಾಸವಿದೆ ಬೂಕರ್ ಪ್ರಶಸ್ತಿ ವಿಜೇತೆ – ದೀಪಾ ಬಸ್ತಿ

ಹಾಸನ: ಕನ್ನಡ ಸಾಹಿತ್ಯಕ್ಕೆ 1500 ವರ್ಷಗಳ ಇತಿಹಾಸವಿದೆ ನಮ್ಮ ನಂತರವೂ ಕನ್ನಡ ಉಳಿದುಕೊಳ್ಳುತ್ತದೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಬಸ್ತಿ ಹೇಳಿದರು.

ಅರಕಲಗೂಡು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದಿರುವುದು ನಮ್ಮ ರಾಜ್ಯಕ್ಕೆ, ದೇಶಕ್ಕೆ ಹೆಮ್ಮೆಯ ವಿಷಯ ವೈಯುಕ್ತಿಕವಾಗಿಯೂ ಹೆಮ್ಮೆಯ ವಿಷಯ. ಇದು ಮೊದಲಬಾರಿಗೆ ಮೂಲ ಕನ್ನಡ ಕೃತಿಗೆ ಬಂದಿರುವ ಪ್ರಶಸ್ತಿ. ಭಾರತದ ಮೊದಲ ಅನುವಾದಕಿಗೆ ಅಂದರೆ ನನಗೆ ಬಂದಿರುವ ಪ್ರಶಸ್ತಿ. ಎಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದರು.

ಮೈಸೂರು ದಸರಾ ಉದ್ಘಾಟನೆ ದೀಪಾ ಬಸ್ತಿ ಕಡಗಣನೆ ಮಾಡಿದ್ದಾರೆ ಎಂಬ ಬಿಜೆಪಿ-ಶಾಸಕರ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ ರಾಜಕೀಯ ಹೇಳಿಕೆಗಳಿಗೆ ನಾನು ಕಮೆಂಟ್ ಮಾಡಲ್ಲ. ರಾಜ್ಯ ಸರ್ಕಾರ ನಿರ್ಧಾರ ತಗೊಂಡಿದ್ದಾರೆ ಅದರ ಬಗ್ಗೆ ನೋ ಕಮೆಂಟ್ಸ್ ಎಂದರು.

ಭಾನುಮುಷ್ತಾಕ್ ಅವರಿಂದ ದಸರಾ ಉದ್ಘಾಟನೆಗೆ ವಿರೋಧ ವಿಚಾರವಾಗಿ ಬೇರೊಂದು ವೈಯುಕ್ತಿಕ ದೃಷ್ಟಿಯಲ್ಲಿ ಚರ್ಚೆ ಮಾಡುವ ಆಸಕ್ತಿ ನನಗೆ ಯಾವತ್ತು ಇಲ್ಲ. ಅಂತಹ ವಿಷಯಕ್ಕೆ ನಾನು ಬರಲ್ಲ. ನಾನು ಸಾಹಿತ್ಯದಲ್ಲಿ ಮಾಡಿರುವಂತಹ ಕೆಲಸಗಳು, ಸಾಹಿತ್ಯದಲ್ಲಿ ಮಾಡಬೇಕಿರುವ ಕೆಲಸಗಳು ಕೆಲಸ ನನಗೆ ಮುಖ್ಯ ಎಂದರು.

ನಮ್ಮಿಂದ ಕನ್ನಡ ಅಲ್ಲ, ನಾವಿರುವುದು ಕನ್ನಡಕ್ಕೋಸ್ಕರ. ನಾನು ಕೆಲಸ ಮಾಡುವುದು ಕನ್ನಡಕ್ಕೋಸ್ಕರ. ನನಗೆ ಅದರ ಮೇಲೆ ಜಾಸ್ತಿ ಗಮನ ಸೆಳೆಯಲು ನನ್ನ ಶ್ರಮ, ಶಕ್ತಿ ಅದಕ್ಕೆ ಮೀಸಲಿಡುತ್ತೇನೆ. ವೈಯುಕ್ತಿಕ ಟೀಕೆಗಳ ಬಗ್ಗೆ ಮಾತನಾಡಲು ನನಗೆ ಆಸಕ್ತಿ ಇಲ್ಲ.

ಸಾಹಿತ್ಯ ದೃಷ್ಟಿಯಲ್ಲಿ ಮೊದಲಬಾರಿಗೆ ಕನ್ನಡ ಭಾಷೆಗೆ ಬೂಕರ್ ಪ್ರಶಸ್ತಿ ಬಂದಿದೆ.

ಮೊದಲು ಹಿಂದಿಯ ಗೀತಾಂಜಲಿ ಶ್ರೀ ಅವರಿಗೆ ಬಂದಿತ್ತು, ಅದನ್ನು ಅನುವಾದ ಮಾಡಿದವರು ಅಮೆರಿಕಾದ ಡೇಸಿ ರಾಕ್ ಎನ್ನುವವರು. ಇದು ಎರಡನೇ ಸಲ ಇಂಡಿಯಾ ಸಾಹಿತ್ಯ ಕೃತಿಗೆ ಬೂಕರ್ ಪ್ರಶಸ್ತಿ ಬರುತ್ತಿದೆ. ನಮ್ಮಲ್ಲಿ ಕನ್ನಡ ಮಾತ್ರವಲ್ಲ ಭಾರತದ ಭಾಷೆಗಳ ಒಳ್ಳೆಯ ಕೃತಿಗಳು ಸಾವಿರಾರು ಇವೆ.

ಅದರ ಮಧ್ಯೆ ಸುಮ್ಮನೆ ಬೇರೆ ಚರ್ಚೆಗೆ ಹೋಗದೆ ಸಾಹಿತ್ಯವನ್ನು ಮುಂದಿಟ್ಟುಕೊಂಡು ಅದರಲ್ಲಿ ಏನು ಮಾಡಬಹುದು ಎನ್ನುವುದು ನನಗೆ ಮುಖ್ಯ. ಇವತ್ತು ಮೊದಲಬಾರಿಗೆ ಅರಕಲಗೂಡು ದಸರಾಗೆ ಬರ್ತಿದ್ದೀನಿ. ನನಗೆ ವೈಯುಕ್ತಿಕವಾಗಿ ತುಂಬಾ ದೊಡ್ಡ ಹೆಮ್ಮೆ, ತುಂಬಾ ಖುಷಿ ಆಗಿದೆ ಎಂದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು