ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ವಾಪಸ್‌ ಬಂದ್ರೆ ಕೊಲ್ತೀವಿ: ಶೇಖ್ ಹಸೀನಾರನ್ನು ಎಚ್ಚರಿಸಿದ ಬಾಂಗ್ಲಾ ದೇಶದ ಮುಖ್ಯ ಅಭಿಯೋಜಕ2004ರಲ್ಲಿ ಸೋನಿಯಾ ಗಾಂಧಿ ಪ್ರಧಾನಿ ಹುದ್ದೆ ನಿರಾಕರಿಸಿದ್ದೇಕೆ?; ಸೋನಿಯಾ ಗಾಂಧಿ ಆತ್ಮಕಥನದಲ್ಲಿ ಮಹತ್ವದ ವಿಚಾರ ಬಹಿರಂಗಕರ್ನಾಟಕ ಉರ್ದು ಅಕಾಡೆಮಿಗೆ ಹೆಚ್ಚಿನ ಅನುದಾನ, ಅಲ್ಪಸಂಖ್ಯಾತರ ಸಮಸ್ಯೆಗಳ ಚರ್ಚೆಗೆ ಪ್ರತ್ಯೇಕ ಸಭೆ: ಡಿ.ಕೆ. ಶಿವಕುಮಾರ್ ಭರವಸೆಜಿಟಿ ದೇವೇಗೌಡ ಜೆಡಿಎಸ್‌ನಲ್ಲಿ ಮುಂದುವರಿಯೋದು ಡೌಟ್! ಬಿಜೆಪಿ, ಕಾಂಗ್ರೆಸ್ ಆಫರ್ ಗುಟ್ಟು ರಟ್ಟುಚುನಾವಣಾ ನೀತಿ ಸಂಹಿತೆ: ಮರುನೇಮಕಗೊಂಡ ನಿವೃತ್ತ ಸರ್ಕಾರಿ ಅಧಿಕಾರಿಗಳಿಗೂ ರಾಜಕೀಯ ಚಟುವಟಿಕೆ ನಿಷೇಧ; ಚುನಾವಣಾ ಆಯೋಗದ ಸೂಚನೆಕರ್ನಾಟಕದ 64 ಕ್ಷೇತ್ರಗಳಲ್ಲಿ 8.80 ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರ ಹೆಸರು ಅಳಿಸಲಾಗಿದೆ: ಮುಸ್ಲಿಂ ಒಕ್ಕೂಟ ಆರೋಪಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೇಜಸ್ವಿ ಸೂರ್ಯ ತಿರುಗೇಟು; ಮೂರು ದಿನಗಳಲ್ಲಿ ಸಾಕ್ಷ್ಯ ನೀಡುವಂತೆ ಸವಾಲುಭಾವಪುಂಜ – 3 : ಅಡುಗೆಮನೆ ಅಂದು ಇಂದುಬೆಂಗಳೂರು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ವಿಜಯನಗರ ನಿಲ್ದಾಣದಲ್ಲಿ ಹಳಿಗೆ ಹಾರಿದ ಪ್ರಯಾಣಿಕನಾಟಕಕ್ಕೂ ಬೇಕಾ ಪೋಲೀಸ್ ಕಣ್ಗಾವಲು?ರಾಮಾಯಣ ಮತ್ತು ಕರುನಾಡಿನ ಭೌಗೋಳಿಕ ನಂಟುಕಲಬುರಗಿ ಸಮೀಪ ಶರಣರ ವಚನ ಪರಂಪರೆಗೆ ಹೊಸ ಸ್ಪರ್ಶ; ವಚನ ಮಂಟಪ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆರಾಜ್ಯ ಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ: 35 ತಹಶೀಲ್ದಾರ್‌ಗಳಿಗೆ ಹೊಸ ಜವಾಬ್ದಾರಿಏಳು ಮಂದಿಯ ಭೀಕರ ಹತ್ಯೆ ಪ್ರಕರಣ ಶಿರಾಡಿಘಾಟ್ ಕಂದಕದಲ್ಲಿ – ಬೆಚ್ಚಿ ಬೀಳಿಸುವ ಸಂಗತಿE20 ಪೆಟ್ರೋಲ್ ವಿವಾದಕ್ಕೆ ಮತ್ತೊಂದು ತಿರುವು: 20% ಎಥನಾಲ್ ಎಂದ BPCL ಪೋಸ್ಟ್‌ನಲ್ಲಿ ಕಂಡಿದ್ದು 33%; ತಕ್ಷಣವೇ ಟ್ವಿಟ್ ಡಿಲೀಟ್ಟರ್ಕಿಯ ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 16 ಕಾರ್ಮಿಕರು ಸಾವು, ಹಲವರಿಗೆ ಗಾಯಐಫೋನ್ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ದುರಂತ; ವಿಷಕಾರಿ ಅನಿಲ ಸೇವಿಸಿ ಮೂವರು ಕಾರ್ಮಿಕರು ಸಾವು!ಹಾಸನ DC ಹುದ್ದೆಯಲ್ಲಿ ಮುಂದುವರಿಯಲು ₹75 ಲಕ್ಷ ಲಂಚ – ತನಿಖೆಗೆ HDK ಒತ್ತಾಯದೀಪಾವಳಿ ಪಟಾಕಿ ಹಾವಳಿ; ದೆಹಲಿ ವಾಯುಮಾಲಿನ್ಯದ ನಂತರ ಬೆಂಗಳೂರಿನ ಗಾಳಿ ಕಲುಷಿತ!ಮಾಲಿನ್ಯದಲ್ಲಿ ಶೇ.25ರಷ್ಟು ಏರಿಕೆLPG ಕೆ.ಜಿಗೆ 11 ರೂ ಹೆಚ್ಚಳ ಆಟೋ ಚಾಲಕರಿಗೆ – ಗಾಯದ ಮೇಲೆ ಬರೆ

ಬರ ಪರಿಹಾರ 2,500 ರೂ.ನಿಂದ 5,000 ರೂ.ಗೆ ಹೆಚ್ಚಳ – ಡಿ.ಕೆ. ಶಿವಕುಮಾರ್

ಬರ ಪರಿಹಾರ 2,500 ರೂ.ನಿಂದ 5,000 ರೂ.ಗೆ ಹೆಚ್ಚಳ – ಡಿ.ಕೆ. ಶಿವಕುಮಾರ್

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ರೈತರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಹಿ ಸುದ್ದಿ ನೀಡಿದ್ದಾರೆ. ಈ ಹಿಂದೆ ಘೋಷಿಸಲಾಗಿದ್ದ 2,500 ರೂ. ಬರ ಪರಿಹಾರವನ್ನು ಒಟ್ಟು 5,000 ರೂ.ಗೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಲಕ್ಷಾಂತರ ರೈತರಿಗೆ ದೀಪಾವಳಿ ಉಡುಗೊರೆ ನೀಡಿದಂತಾಗಿದೆ.

ಯಾದಗಿರಿ ಜಿಲ್ಲೆಯ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಬರ ಪರಿಹಾರದ ಹಣ ಜಮೆ ಮಾಡುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಚಾಲನೆ ನೀಡಿದರು. ಬಟನ್ ಒತ್ತುವ ಮೂಲಕ ರೈತರ ಖಾತೆಗಳಿಗೆ ಮೊದಲ ಕಂತಿನ ಹಣ ವರ್ಗಾವಣೆಗೆ ಚಾಲನೆ ನೀಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾವು ಈಗಾಗಲೇ ಭರವಸೆ ನೀಡಿದಂತೆ 1,250 ಕೋಟಿ ರೂ. ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡುತ್ತಿದ್ದೇವೆ. ಮೊದಲ ಹಂತದಲ್ಲಿ ಪ್ರತಿ ರೈತರಿಗೆ 2,500 ರೂ. ನೀಡಲಾಗುತ್ತಿದೆ. ದೀಪಾವಳಿ ಹಬ್ಬ ಮುಗಿದ ಬಳಿಕ ಹೆಚ್ಚುವರಿಯಾಗಿ ಇನ್ನೂ 2,500 ರೂ. ಬಿಡುಗಡೆ ಮಾಡಲಾಗುವುದು. ಈ ಮೂಲಕ ಪ್ರತಿ ರೈತರಿಗೆ ಒಟ್ಟು 5,000 ರೂ. ಬರ ಪರಿಹಾರ ಸಿಗಲಿದೆ” ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಪರಮೇಶ್ವರ್, ವಿಧಾನಸಭೆಯಲ್ಲಿ ಪ್ರತಿ ಎಕರೆಗೆ ಪರಿಹಾರ ನೀಡುವುದಾಗಿ ಹೇಳಿರಲಿಲ್ಲ. ಪ್ರತಿ ರೈತರಿಗೆ ಪರಿಹಾರ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಸುಮಾರು 57 ಲಕ್ಷ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಮೊದಲ ಕಂತಿನಲ್ಲಿ 2,500 ರೂ. ಇನ್‌ಪುಟ್ ಸಬ್ಸಿಡಿ ಬಿಡುಗಡೆ ಮಾಡಲಾಗುತ್ತಿದ್ದು, ಕೆಲ ದಿನಗಳ ಬಳಿಕ ಎರಡನೇ ಕಂತಿನಲ್ಲಿ ಮತ್ತೆ 2,500 ರೂ. ನೀಡಲಾಗುವುದು ಎಂದು ಹೇಳಿದರು.

ಎರಡು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವ ರೈತರಿಗೂ ಗರಿಷ್ಠ 5,000 ರೂ. ಮಾತ್ರ ಪರಿಹಾರ ದೊರೆಯಲಿದೆ. ಪರಿಹಾರವನ್ನು ಪ್ರತಿ ಎಕರೆಗೆ ಲೆಕ್ಕ ಹಾಕದೆ, ಪ್ರತಿ ರೈತರಿಗೆ ನೀಡಲಾಗುತ್ತಿದೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಒಟ್ಟಾರೆ, ರಾಜ್ಯದ ರೈತರಿಗೆ ಎರಡು ಕಂತುಗಳಲ್ಲಿ ತಲಾ 2,500 ರೂ.ನಂತೆ ಒಟ್ಟು 5,000 ರೂ. ಬರ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು