ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ. ಜಾತಿ/ಪ. ಪಂಗಡಗಳ ಮೀಸಲಾತಿ 6% ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ

PPeepal Media

Peepal Media • ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ಪ. ಜಾತಿ/ಪ. ಪಂಗಡಗಳ ಮೀಸಲಾತಿ 6% ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಿರುವ ಶೇಕಡಾ 18 ರಿಂದ ಶೇಕಡಾ 24 ರ ವರೆಗೆ ಮೀಸಲಾತಿ  ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಶಿಫಾರಸ್ಸು ನೀಡಿದ್ದ ನ್ಯಾ.ನಾಗಮೋಹನ್‌ದಾಸ್‌ ಸಮಿತಿಯ ಶಿಫಾರಸ್ಸನ್ನು ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಇಂದು ಸುಗ್ರೀವಾಜ್ಞೆ (ಆಧ್ಯಾದೇಶ) ಹೊರಡಿಸಿದೆ.

ಇನ್ನು ಮುಂದೆ ರಾಜ್ಯದ ಪರಿಶಿಷ್ಟ ಜಾತಿಗಳಿಗೆ (SC) ಇದುವರೆಗಿದ್ದ ಶೇ.15 ಮೀಸಲಾತಿಯ ಬದಲಾಗಿ ಶೇ 17 ಹಾಗೂ ಪರಿಶಿಷ್ಟ ಪಂಗಡಗಳಿಗೆ (ST) ಇದುವರೆಗಿದ್ದ ಶೇ ರ ಬದಲಾಗಿ ಶೇ 7 ಮೀಸಲಾತಿ ಜಾರಿಯಾಗಲಿದೆ ಎಂದು ಸುಗ್ರೀವಾಜ್ಞೆಯಲ್ಲಿ ತಿಳಿಸಲಾಗಿದೆ.

ಇಂದು (23.10.2022) ಈ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿ (ಗೆಜೆಟ್)‌ ಈ ಸಂಬಂಧ ವಿಶೇಷ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದನ್ನು ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಆಧ್ಯಾದೇಶ 2022 ಎಂದು ಕರೆದಿದ್ದು ಇದಕ್ಕೆ ಅಕ್ಟೋಬರ್‌ 23ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದೆ.

ನ್ಯಾ.ನಾಗಮೋಹನದಾಸ್‌ ಆಯೋಗದ ವರದಿಯ ಅನುಷ್ಠಾನವನ್ನು ಅವಲೋಕಿಸಲು ನ್ಯಾ.ಸುಭಾಷ್‌ ಅಡಿ ಮತ್ತು ಇತರರ ಅಧ್ಯಕ್ಷತೆಯಲ್ಲಿ ಮತ್ತೊಂದು ಸಮಿತಿಯನ್ನು ನೇಮಿಸಲಾಗಿತ್ತು. ಇದು 07.10.2022ರಂದು ತನ್ನ ವರದಿ ಸಲ್ಲಿಸಿ ಅದೂ ಸಹ ನ್ಯಾ.ನಾಗಮೋಹನದಾಸ್‌ ಆಯೋಗದ ವರದಿಯನ್ನು ಅನುಮೋದಿಸಿತ್ತು.

ಇದೀಗ ಸುಗ್ರೀವಾಜ್ಞೆಯ ತರುವಾಯ ಅಧಿಸೂಚನೆಯನ್ನು ಕಾರ್ಯಗತಗೊಳಿಸುವ ಉದ್ದೇಶಗಳಿಗಾಗಿ ನಿಯಮಗಳನ್ನು ರಚಿಸಬೇಕಿರುತ್ತದೆ. ತರುವಾಯದಲ್ಲಿ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕಿರುತ್ತದೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು