ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೈಂಗಿಕ ಕಿರುಕುಳದ ಆರೋಪ: ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ಅಮಾನತು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಲೈಂಗಿಕ ಕಿರುಕುಳದ ಆರೋಪ: ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ಅಮಾನತು

ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ವಿರುದ್ಧ ಹಲವಾರು ಮಹಿಳೆಯರು ಲೈಂಗಿಕ ಕಿರುಕುಳ ಆರೋಪಗಳನ್ನು ಹೊರಿಸಿದ ನಂತರ ಕಾಂಗ್ರೆಸ್ ಸೋಮವಾರ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಅಮಾನತುಗೊಳಿಸಿದೆ. ಪಕ್ಷದ ಒಳಗೆ ಮತ್ತು ಹೊರಗೆ ಹೆಚ್ಚುತ್ತಿರುವ ಒತ್ತಡದ ಹಿನ್ನೆಲೆಯಲ್ಲಿ ಅವರು ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಕೆಲವೇ ದಿನಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕಳೆದ ವಾರ ಮಲಯಾಳಂ ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್, ಪ್ರಮುಖ ರಾಜಕೀಯ ಪಕ್ಷದ ಯುವ ನಾಯಕನೊಬ್ಬ ತನಗೆ ಪದೇ ಪದೇ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿದ್ದಾರೆ ಮತ್ತು ಹೋಟೆಲ್‌ಗೆ ಆಹ್ವಾನಿಸಿದ್ದಾರೆ ಎಂದು ಆರೋಪಿಸಿದಾಗ ವಿವಾದ ಆರಂಭವಾಯಿತು.

ಇದರ ಬೆನ್ನಲ್ಲೇ ಬರಹಗಾರ್ತಿ ಹನಿ ಭಾಸ್ಕರನ್ ಅವರು ರಾಹುಲ್ ಮಾಮ್‌ಕೂಟತಿಲ್ ಅವರನ್ನು ಸಾರ್ವಜನಿಕವಾಗಿ ಹೆಸರಿಸಿ, ಅವರು ನಿರಂತರವಾಗಿ ತನಗೂ ಅಸಭ್ಯ ಸಂದೇಶ ಕಳುಹಿಸುತ್ತಿದ್ದಾರೆ ಮತ್ತು ನಂತರ ತಮ್ಮ ಸಂಭಾಷಣೆಗಳನ್ನು ತಪ್ಪಾಗಿ ನಿರೂಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಯುವ ಕಾಂಗ್ರೆಸ್‌ನಲ್ಲಿ ಅವರ ವಿರುದ್ಧ ಈ ಹಿಂದೆ ಹಲವಾರು ದೂರುಗಳು ಬಂದಿವೆ ಆದರೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದರು.

ಅವಂತಿಕಾ ಎಂಬ ಟ್ರಾನ್ಸ್‌ಜೆಂಡರ್ ಮಹಿಳೆ ಕೂಡ ಮಾಮ್‌ಕೂಟತಿಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ನನ್ನ ಮೇಲೆ ಅತ್ಯಾಚಾರ ಮಾಡಬೇಕೆಂದು ಹೇಳಿದ್ದರಿಂದ ಆತ ಲೈಂಗಿಕವಾಗಿ ಹತಾಶೆಗೊಂಡಿದ್ದಾನೆ ಎಂದು ನಾನು ಭಾವಿಸುತ್ತೇನೆ ಎಂದು ರಾಹುಲ್ ಮಾಮ್‌ಕೂಟತಿಲ್ ವಿರುದ್ಧ ಮಾತನಾಡಿದ್ದಾರೆ. ನಾವು ಬೆಂಗಳೂರು ಅಥವಾ ಹೈದರಾಬಾದ್‌ಗೆ ಹೋೋಣ ಎಂದು ರಾಹುಲ್ ನನಗೆ ಒತ್ತಾಯಿಸಿದ್ದಾರೆ” ಎಂದು ಅವರು ಹೇಳಿದರು.

ನಂತರ, ಮಮ್‌ಕೂಟತಿಲ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು, ಇದು ಅವರ ವೈಯಕ್ತಿಕ ನಿರ್ಧಾರ ಹಾಗೂ ಈ ನಿರ್ಧಾರದ ಹಿಂದೆ ಯಾವುದೇ ಒತ್ತಡ ಇಲ್ಲ ಎಂದು ಹೇಳಿದರು.

ಸಧ್ಯ ಹೆಚ್ಚಿದ ಒತ್ತಡದ ಕಾರಣಕ್ಕೆ ಕಾಂಗ್ರೆಸ್ ಸೋಮವಾರ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಅಮಾನತುಗೊಳಿಸಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು