ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜನಪ್ರೀಯ ಸೆಲೆಬ್ರಿಟಿ ಖೇಬಿ ಲೇಮ್ ಅವರ ಬಂಧಿಸಿ, ನಂತರ ಇಟಲಿಗೆ ಹಸ್ತಾಂತರ

P

Peepal Media Desk • ಬ್ರೇಕಿಂಗ್ ಸುದ್ದಿ, ವಿದೇಶ

• 1 ನಿಮಿಷದ ಓದು

ಜನಪ್ರೀಯ ಸೆಲೆಬ್ರಿಟಿ ಖೇಬಿ ಲೇಮ್ ಅವರ ಬಂಧಿಸಿ, ನಂತರ ಇಟಲಿಗೆ ಹಸ್ತಾಂತರ

ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಖೇಬಿ ಲೇಮ್ ಅವರನ್ನು ಅಮೇರಿಕಾ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಈಗ ಅಮೇರಿಕಾದಿಂದ ಅವರ ಸ್ವದೇಶ ಇಟಲಿಗೆ ಹಿಂದಿರುಗಿಸಿದ್ದಾರೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ವಲಸೆ ನೀತಿ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ನಡೆದಿದೆ.

ಮೂಲತಃ ಆಫ್ರಿಕಾದ ಸೆನೆಗಲ್‌ನಲ್ಲಿ ಜನಿಸಿದ ಖೇಬಿ ಲೇಮ್, ಕಾಲಾಂತರದಲ್ಲಿ ಪೋಷಕರೊಂದಿಗೆ ಚಿಕ್ಕ ವಯಸ್ಸಿನಲ್ಲೇ ಇಟಲಿಗೆ ಬಂದು ನೆಲೆಸಿದರು. ನಂತರ ಇಟಲಿಯ ಪೌರತ್ವವನ್ನೂ ಪಡೆದರು. ಕೋವಿಡ್‌ ಸಮಯದಲ್ಲಿ ತಮ್ಮ ಆಂಗಿಕ ಅಭಿನಯದ ಮೂಲಕವೇ ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯತೆ ಪಡೆದು, ವಿವಿಧ ಸಾಮಾಜಿಕ ಮಾಧ್ಯಮಗಳೆಲ್ಲವುಗಳಿಂದ 300 ಮಿಲಿಯನ್ ಗಿಂತಲೂ ಹೆಚ್ಚು ಮಂದಿ ಫಾಲೋವರ್ ಗಳನ್ನು ಹೊಂದಿದ್ದಾರೆ.

ಕಳೆದ ತಿಂಗಳು ನ್ಯೂಯಾರ್ಕ್‌ನಲ್ಲಿ ನಡೆದ ‘ಮೆಟ್ ಗಾಲಾ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಖೇಬಿ ಲೇಮ್ ಅವರಿಗೆ ಈಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ನೀತಿಯ ಬಿಸಿ ತಟ್ಟಿದೆ. ಹೀಗಾಗಿ ಅಮೇರಿಕಾದ ಕಸ್ಟಮ್ಸ್ ಅಧಿಕಾರಿಗಳು ಅವರನ್ನು ಕೆಲ ದಿನಗಳ ಹಿಂದೆ ಬಂಧಿಸಿ ಈಗ ಸ್ವದೇಶ ಇಟಲಿಗೆ ಹಸ್ತಾಂತರಿಸಿದ್ದಾರೆ.

ಖೇಬಿ ಲೇಮ್ ತಮ್ಮ ಅಪಾರ ಜನಪ್ರಿಯತೆಯ ಕಾರಣಕ್ಕಾಗಿ ಹಲವು ಸಂಘ ಸಂಸ್ಥೆಗಳ ರಾಯಭಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2022ರಲ್ಲಿ ‘ಹ್ಯೂಗೋ ಬಾಸ್’ ಬ್ರ್ಯಾಂಡ್‌ ಜೊತೆ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಮಾಡಿದ್ದ ಖಾಬಿ, ಯುನಿಸೆಫ್‌ನ ಸೌಹಾರ್ದ ರಾಯಭಾರಿಯಾಗಿ ನೇಮಕಗೊಂಡಿದ್ದರು.

‘ವೀಸಾ ಅವಧಿ ಮುಗಿದ ನಂತರವೂ ಅಕ್ರಮವಾಗಿ ಉಳಿದುಕೊಂಡ ಆರೋಪದ ಮೇಲೆ ಖಾಬಿ ಅವರನ್ನು ಶುಕ್ರವಾರ ವಲಸೆ ಅಧಿಕಾರಿಗಳು ಬಂಧಿಸಿದ್ದರು. ಗಡೀಪಾರು ಆದೇಶವಿಲ್ಲದೇ ದೇಶ ತೊರೆಯಲು ಅವರಿಗೆ ಅನುಮತಿಸಲಾಗಿದೆ’ ಎಂದು ಅಮೆರಿಕದ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version