ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಖ್ಯಾತ ಸುಗಮ ಸಂಗೀತ ಗಾಯಕರಾದ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ.

P

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಖ್ಯಾತ ಸುಗಮ ಸಂಗೀತ ಗಾಯಕರಾದ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ.

ಖ್ಯಾತ ಸುಗಮ ಸಂಗೀತ ಗಾಯಕರಾದ ಶಿವಮೊಗ್ಗ ಸುಬ್ಬಣ್ಣ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಹಲವು ದಿನಗಳ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ 83 ವರ್ಷದ ಸುಬ್ಬಣ್ಣರವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು.

1938ರ ಡಿಸೆಂಬರ್ 14ರಂದು ಶಿವಮೊಗ್ಗದ ಹೊಸನಗರದಲ್ಲಿ ಶಿವಮೊಗ್ಗ ಸುಬ್ಬಣ್ಣ ಜನಿಸಿದರು. ಅವರ ಮೂಲ ಹೆಸರು ಜಿ. ಸುಬ್ರಮಣ್ಯ. ಹೊಸನಗರದ ಪ್ರಖ್ಯಾತ ಸಂಗೀತ ವಿದ್ವಾಂಸರ ಕುಟುಂಬದಲ್ಲಿ ಸುಬ್ಬಣ್ಣರ ಜನನವಾಯಿತು. ತಂದೆ ಗಣೇಶರಾಯರು, ತಾಯಿ ರಂಗನಾಯಕಿ. ತಾತ ಶಾಮಣ್ಣ ಸಂಗೀತದಲ್ಲಿ ಘನ ವಿದ್ವಾಂಸರು. ಇವರ ಮನೆತನದ ಮೂಲದಿಂದಲೇ ಸಂಗೀತದ ಸ್ಪರ್ಶ ಇದ್ದ ಪರಿಣಾಮ ಕರ್ನಾಟಕ ಶಾಸ್ತ್ರೀಯ ಸಂಗೀತ ಇವರಿಗೆ ಚೆನ್ನಾಗಿ ಒಲಿದಿತ್ತು.

‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಮನೆ ಮಾತಾದರು. ‘ಕಾಡು ಕುದುರೆ’ ಸಿನೆಮಾದ ‘ಕಾಡು ಕುದುರೆ ಓಡಿ ಬಂದಿತ್ತಾ’ ಹಾಡಿಗೆ ರಾಷ್ಟ ಪ್ರಶಸ್ತಿ ಲಭಿಸಿದೆ.

ಬಿ.ಕಾಂ ಮತ್ತು ಎಲ್‌ಎಲ್‌ಬಿ ಪದವೀಧರಾದ ಶಿವಮೊಗ್ಗ ಸುಬ್ಬಣ್ಣ 1982ರಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಬಂದು ನೆಲೆಸಿದರು. ಶಿವಮೊಗ್ಗ ಸುಬ್ಬಣ್ಣ ಆಕಾಶವಾಣಿ ಮತ್ತು ದೂರದರ್ಶನದ ಹಿರಿಯ ಗಾಯಕರಾಗಿದ್ದರು. ಚಲನಚಿತ್ರ, ನೃತ್ಯ ಅಕಾಡೆಮಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ಶಿವಮೊಗ್ಗ ಸುಬ್ಬಣ್ಣ ನಿಭಾಯಿಸಿ ಹೆಸರಾಗಿದ್ದಾರೆ.

P

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version