ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ, ಪಂಚರ್ ದಂಧೆ ಬೇಧಿಸಿದ – ಬೆಂಗಳೂರು ಪೊಲೀಸರು

ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ, ಪಂಚರ್ ದಂಧೆ ಬೇಧಿಸಿದ – ಬೆಂಗಳೂರು ಪೊಲೀಸರು

ಬೆಂಗಳೂರು : ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲೇ ಎಲ್ಲೆಂದರಲ್ಲಿ ಬೇಕೆಂದೇ ಕೆಜಿಗಟ್ಟಲ್ಲೇ ಮೊಳೆಗಳನ್ನು ಚೆಲ್ಲಿ ಬೈಕ್ ಮತ್ತು ಕಾರುಗಳನ್ನು ಪಂಚರ್ ಮಾಡುತ್ತಿದ್ದ ದಂಧೆಯನ್ನು ಪೊಲೀಸರು ಬೇಧಿಸಿದ್ದು,ಗುರುವಾರ ಇಬ್ಬರು ಖದೀಮರನ್ನು ಬಂಧಿಸಿದ್ದಾರೆ.ಜಾಲಹಳ್ಳಿ ಠಾಣೆ ಪೊಲೀಸರು, ಜಾಲಹಳ್ಳಿಯ ಎಂಇಎಸ್(MES) ರಿಂಗ್ ರಸ್ತೆ ಬದಿಯಲ್ಲಿ ಪಂಚರ್ ಶಾಪ್ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ತಮ್ಮ ಅಂಗಡಿಗೆ ವ್ಯಾಪಾರ ಹೆಚ್ಚಿಸಿಕೊಳ್ಳುವ ದುರಾಸೆಯಿಂದ, ಇವರು ಬೈಕ್‌ನಲ್ಲಿ ಬಂದು ರಸ್ತೆಯುದ್ದಕ್ಕೂ ಕೆಜಿಗಟ್ಟಲೆ ಮೊಳೆಗಳನ್ನು ಚೆಲ್ಲಿ ಹೋಗುತ್ತಿದ್ದರು. ಸವಾರರು ಪಂಚರ್ ಆದ ವಾಹನಗಳನ್ನು ತಳ್ಳಿಕೊಂಡು ಬಂದಾಗ ರಸ್ತೆ ಬದಿಯಲ್ಲೇ ಪ್ರತ್ಯಕ್ಷರಾಗಿ ಪಂಚರ್ ಹಾಕಿಕೊಡುವ ನಾಟಕವಾಡುತ್ತಿದ್ದರು.

ತಮ್ಮ ಬ್ಯೂಸಿನೆಸ್‌ಗಾಗಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಕಿಡಿಗೇಡಿಗಳು, ಬೈಕ್‌ನಲ್ಲಿ ಹೋಗುತ್ತಾ ಮೊಳೆಗಳನ್ನು ರಸ್ತೆಯ ಬದಿ ಚೆಲ್ಲುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸತತವಾಗಿ ವಾಹನಗಳು ಪಂಚರ್ ಆಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಾಗೃತರಾದ ಬೆಂಗಳೂರು ಟ್ರಾಫಿಕ್ ಪೊಲೀಸರು, ಆ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದರು. ಈ ವೇಳೆ ರಸ್ತೆಯಲ್ಲಿ ಅಪಾರ ಪ್ರಮಾಣದ ಮೊಳೆಗಳು ಪತ್ತೆಯಾಗಿದ್ದವು. ತಕ್ಷಣವೇ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ, ಆರೋಪಿಗಳು ಬೈಕ್‌ನಲ್ಲಿ ಬಂದು ರಸ್ತೆಗೆ ಮೊಳೆ ಚೆಲ್ಲುವ ದೃಶ್ಯಗಳು ಸ್ಪಷ್ಟವಾಗಿ ಸೆರೆಯಾಗಿದ್ದವು. ಸಿಸಿಟಿವಿ ವೀಡಿಯೋ ಸಾಕ್ಷ್ಯಾಧಾರಗಳ ಬೆನ್ನತ್ತಿದ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಬಂಧಿತರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ದಂಧೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.

ವಿಷಯಗಳು: #karnataka #news #peepal
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version