ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಡಿಸಿಸಿ ಬ್ಯಾಂಕ್ ಚುನಾವಣೆ 6 ಕಡೆ ಕೆ ಎನ್ ರಾಜಣ್ಣ ಬೆಂಬಲಿಗರು ಗೆಲುವು

ಡಿಸಿಸಿ ಬ್ಯಾಂಕ್ ಚುನಾವಣೆ 6 ಕಡೆ ಕೆ ಎನ್ ರಾಜಣ್ಣ ಬೆಂಬಲಿಗರು ಗೆಲುವು

ತುಮಕೂರು : ಭಾರೀ ಕುತೂಹಲ ಕೆರಳಿಸಿದ್ದ ತುಮಕೂರು ಡಿಸಿಸಿ (DCC) ಬ್ಯಾಂಕ್ (Bank) ಚುನಾವಣೆಯಲ್ಲಿ (Elections) ಮಾಜಿ ಸಹಕಾರಿ ಸಚಿವ ಕೆ.ಎನ್.ರಾಜಣ್ಣ (KN Rajanna) ಅವರು ಅಧಿಪತ್ಯ ಸಾಧಿಸಿದ್ದಾರೆ. ಇಂದು (ಆ.24) ನಡೆದ 6 ತಾಲೂಕುಗಳ ಚುನಾವಣೆಯಲ್ಲಿ ಎಲ್ಲಾ 6 ಕಡೆ ಕೆ ಎನ್ ರಾಜಣ್ಣ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ರಾಜಣ್ಣ ಮತ್ತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಲಿದ್ದಾರೆ. ರಾಜಣ್ಣ ಬರೋಬ್ಬರಿ ಐದು ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಇದೀಗ 6ನೇ ಬಾರಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಇದರೊಂದಿಗೆ ಸತತ 25 ವರ್ಷಗಳಿಂದ ಡಿಸಿಸಿ ಬ್ಯಾಂಕ್​ನಲ್ಲಿ ಹೊಂದಿದ್ದ ಹಿಡಿತವನ್ನು ರಾಜಣ್ಣ ಮುಂದುವರೆಸಿಕೊಂಡು ಬಂದಂತಾಗಿದೆ. ‘ಎ’ ವರ್ಗ ತುಮಕೂರು ತಾಲೂಕಿನಿಂದ ಏಕೈಕ ಅಭ್ಯರ್ಥಿಯಾಗಿ ಕಣದಲ್ಲಿದ್ದ ಮಾಜಿ ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದರು. ಮತ್ತೊಮ್ಮೆ ಡಿಸಿಸಿ ಬ್ಯಾಂಕ್‌ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಅವರು ಸತತ 6 ಬಾರಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗ್ತಿರೋ ದಾಖಲೆ ಹೊಂದಿದ್ದಾರೆ.

8 ನಿರ್ದೇಶಕರು ಅವಿರೋಧ ಆಯ್ಕೆ
‘ಎ’ ವರ್ಗದಿಂದ ತುಮಕೂರು ತಾಲೂಕಿನಿಂದ ರಾಜಣ್ಣ, ಮಧುಗಿರಿ ತಾಲೂಕಿನಿಂದ ಜಿ.ಜಿ. ರಾಜಣ್ಣ, ಕೊರಟಗೆರೆಯಿಂದ ಎಸ್‌. ಹನುಮಾನ್‌ ಹಾಗೂ ತುರುವೇಕೆರೆಯಿಂದ ಎಂ. ಸಿದ್ದಲಿಂಗಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ‘ಬಿ’ ವರ್ಗದಿಂದ 10 ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘಗಳ ಪ್ರತಿನಿಧಿಯಾಗಿ ರಾಜಣ್ಣ ಪುತ್ರ ರಾಜೇಂದ್ರ, ‘ಸಿ’ ವರ್ಗದಿಂದ ಪಟ್ಟಣ ಸಹಕಾರ ಸಂಘಗಳ ಪ್ರತಿನಿಧಿ ಎಸ್‌.ಲಕ್ಷ್ಮೇನಾರಾಯಣ್‌, ‘ಡಿ’ ವರ್ಗದಿಂದ ಹಾಲು ಉತ್ಪಾದಕರ ಸಂಘಗಳ ಕ್ಷೇತ್ರದಿಂದ ಮಧುಗಿರಿಯ ಬಿ. ನಾಗೇಶ್‌ ಬಾಬು ಹಾಗೂ ಡಿ-1 ವರ್ಗದ ಮಹಿಳಾ ಸಂಘಗಳ ಪ್ರತಿನಿಧಿಯಾಗಿ ಮಾಲತಿ ಅವಿರೋಧ ಆಯ್ಕೆಯಾಗಿದ್ದಾರೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು