ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೆಪಿಎಸ್‌ಸಿ ಅಕ್ರಮ : ಅಭ್ಯರ್ಥಿಗಳ ಪರ ನಿಂತ – ಕಾಕ್ರೋಚ್ ಜನತಾ ಪಾರ್ಟಿ

ಕೆಪಿಎಸ್‌ಸಿ ಅಕ್ರಮ : ಅಭ್ಯರ್ಥಿಗಳ ಪರ ನಿಂತ – ಕಾಕ್ರೋಚ್ ಜನತಾ ಪಾರ್ಟಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ (CJP) ಕಳವಳ ವ್ಯಕ್ತಪಡಿಸಿದ್ದು, ಸಮಸ್ಯೆಯಿಂದ ಸಂಕಷ್ಟಕ್ಕೊಳಗಾದ ಅಭ್ಯರ್ಥಿಗಳ ಪರವಾಗಿ ನಿಲ್ಲುವುದಾಗಿ ತಿಳಿಸಿದೆ.ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ CJP ಸಹ ಸಂಚಾಲಕ ಆಶುತೋಷ್‌ ರಂಕಾ, ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಭ್ಯರ್ಥಿಗಳು ತಮ್ಮನ್ನು ಸಂಪರ್ಕಿಸಿದ್ದಾರೆ. ದೇಶದಾದ್ಯಂತ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಹಿಂದೆ ಸಂಘಟಿತ ಮಾಫಿಯಾ ಇರಬಹುದು ಎಂದು ಅವರು ಆರೋಪಿಸಿದರು. ಯಾವುದೇ ರೀತಿಯ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂಬುದು CJPಯ ನಿಲುವು. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದು, ವಿದ್ಯಾರ್ಥಿ ಸಂಘಟನೆಗಳೊಂದಿಗೂ ಚರ್ಚೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಈ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಗುವುದು ಎಂದು ರಂಕಾ ಹೇಳಿದರು.

ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಪರೀಕ್ಷಾ ದಾಖಲೆಗಳು, OMR ಶೀಟ್‌ಗಳ ನಿರ್ವಹಣೆ ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಸೇರಿದಂತೆ ವಿವಿಧ ಆಯಾಮಗಳ ಬಗ್ಗೆ ತನಿಖೆ ನಡೆಯುತ್ತಿದೆ. CJP ತಂಡ ಬೆಂಗಳೂರಿನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ನಡೆಸುತ್ತಿರುವ ‘ಸ್ಕೂಲ್ ಥಿಕ್ ಕರೋ’ ಅಭಿಯಾನದಲ್ಲೂ ಶಿಕ್ಷಕರ ಸಮಸ್ಯೆ ಪ್ರಸ್ತಾಪಿಸಿದೆ. ಕಳೆದ ಮೂರು ದಿನಗಳಲ್ಲಿ ಬೆಂಗಳೂರಿನ ನಾಲ್ಕು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಲಾಗುತ್ತಿದೆ. ತಮ್ಮ ಭೇಟಿ ವೇಳೆ ಶೇ.50ಕ್ಕೂ ಹೆಚ್ಚು ಶಿಕ್ಷಕರು ವಿಶೇಷ ತೀವ್ರ ಪರಿಷ್ಕರಣೆ (SIR) ಕರ್ತವ್ಯದಲ್ಲಿ ತೊಡಗಿರುವುದು ಪ್ರಮುಖ ಸಮಸ್ಯೆಯಾಗಿ ಕಂಡುಬಂದಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರನ್ನು SIR ಕರ್ತವ್ಯಕ್ಕೆ ನಿಯೋಜಿಸಿರುವುದರಿಂದ ನಿಯಮಿತ ತರಗತಿಗಳನ್ನು ನಡೆಸಲು ಕಡಿಮೆ ಸಂಖ್ಯೆಯ ಶಿಕ್ಷಕರು ಮಾತ್ರ ಲಭ್ಯವಿರುವ ಪರಿಸ್ಥಿತಿ ಇದೆ ಎಂದು CJP ಆರೋಪಿಸಿದೆ.

ಶಿಕ್ಷಕರನ್ನು ವಿವಿಧ ಬೋಧನೇತರ ಆಡಳಿತಾತ್ಮಕ ಕೆಲಸಗಳಿಗೆ ನಿಯೋಜಿಸುವುದರಿಂದ ಶೈಕ್ಷಣಿಕ ವರ್ಷದ ಸುಮಾರು ಐದು ತಿಂಗಳಷ್ಟು ಅವಧಿ ಬೋಧನೆಯ ಹೊರತಾದ ಕೆಲಸಗಳಿಗೆ ವ್ಯಯವಾಗುತ್ತಿದೆ. ಚುನಾವಣಾ ಆಯೋಗ ಮತ್ತು ಸರ್ಕಾರವು ಆಡಳಿತಾತ್ಮಕ ಕಾರ್ಯಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಶಿಕ್ಷಕರನ್ನು ತರಗತಿಗಳಿಂದ ದೂರ ಇಡದಂತೆ ಕ್ರಮ ಕೈಗೊಳ್ಳಬೇಕು. ತರಗತಿಯಲ್ಲಿ ಶಿಕ್ಷಕರು ಕಳೆಯುವ ಪ್ರತಿಯೊಂದು ಗಂಟೆಯೂ ಮಹತ್ವದ್ದಾಗಿದೆ. ಆಡಳಿತಾತ್ಮಕ ಕೆಲಸಗಳನ್ನು ಪರ್ಯಾಯ ವ್ಯವಸ್ಥೆಗಳ ಮೂಲಕ ನಿರ್ವಹಿಸಬಹುದು. ಆದರೆ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಶಿಕ್ಷಕರ ಸ್ಥಾನವನ್ನು ಸುಲಭವಾಗಿ ತುಂಬಲು ಸಾಧ್ಯವಿಲ್ಲ ಎಂದು ರಂಕಾ ಹೇಳಿದ್ದಾರೆ. ಶಾಲೆಗಳಲ್ಲಿನ ಶೌಚಾಲಯಗಳ ಸ್ವಚ್ಛತೆ, ನಿರ್ವಹಣೆ ಹಾಗೂ ಹದಗೆಡುತ್ತಿರುವ ಮೂಲಸೌಕರ್ಯಗಳ ಬಗ್ಗೆಯೂ CJP ತಂಡ ಕಳವಳ ವ್ಯಕ್ತಪಡಿಸಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು