ಕುಮಾರಸ್ವಾಮಿ ನಮಗೇನು ದೊಡ್ಡವರಲ್ಲ, ತಪ್ಪು ಮಾಡಿದರೆ ಶಿಕ್ಷೆಯಾಗಲಿ, ತನಿಖೆ ನಡೆಯಬೇಕು- ಡಿಸಿ ಲತಾಕುಮಾರಿ
ಲಿಂಕ್ ನಕಲಿಸಲಾಗಿದೆ ✓
ಹಾಸನ: ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಕೇಳಿಬಂದಿರುವ ಲಂಚದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆ ನಡೆಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರಿಗೆ ಮನವಿ ಸಲ್ಲಿಸಲು ಮುಂದಾದರು.
ಜಿಲ್ಲಾಧಿಕಾರಿಗಳ ಮೇಲೆ ನೇರ ಆರೋಪ ಕೇಳಿಬಂದಿದ್ದು, ಅವರ ಪಿಎಗೆ ಸಂಬಂಧಿಸಿದ ವಾಟ್ಸ್ಆ್ಯಪ್ ಚಾಟ್ಗಳು ಬಹಿರಂಗವಾಗಿವೆ ಎನ್ನಲಾದ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೂ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುತ್ತಿರುವುದಾಗಿ ಕಾರ್ಯಕರ್ತರು ತಿಳಿಸಿದರು.
ಕುಮಾರಸ್ವಾಮಿ ತಪ್ಪು ಮಾಡಿದರೂ ಶಿಕ್ಷೆಯಾಗಲಿ, ಡಿಸಿ ತಪ್ಪು ಮಾಡಿದರೂ ಶಿಕ್ಷೆಯಾಗಲಿ’
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನೂ ಪ್ರಸ್ತಾಪಿಸಿದ ಜಿಲ್ಲಾಧಿಕಾರಿ, “ಕುಮಾರಸ್ವಾಮಿ ನಮಗೇನು ದೊಡ್ಡವರಲ್ಲ. ಅವರ ಮೇಲೂ ತನಿಖೆಯಾಗಲಿ. ಕುಮಾರಸ್ವಾಮಿ ತಪ್ಪು ಮಾಡಿದರೆ ಕಾನೂನಿನ ಪ್ರಕಾರ ಅವರಿಗೂ ಶಿಕ್ಷೆಯಾಗಬೇಕು. ಜಿಲ್ಲಾಧಿಕಾರಿ ತಪ್ಪು ಮಾಡಿದರೂ ಅವರಿಗೂ ಶಿಕ್ಷೆಯಾಗಬೇಕು” ಎಂದು ಹೇಳಿದರು.
ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಎದುರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಸಿಬ್ಬಂದಿ ರಜೆ ಮೇಲೆ ತೆರಳುವಂತೆ ಮನವಿ
ಇದೇ ವೇಳೆ, ಪ್ರಕರಣದ ಕುರಿತು ಪಾರದರ್ಶಕ ತನಿಖೆ ನಡೆಯಬೇಕು ಎಂಬ ಬೇಡಿಕೆಯೊಂದಿಗೆ ಸಂಬಂಧಪಟ್ಟ ಸಿಬ್ಬಂದಿ ರಜೆ ಮೇಲೆ ಮನೆಗೆ ತೆರಳುವಂತೆ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ಮನವಿ ಸಲ್ಲಿಸಲು ಮುಂದಾದರು.
ಒಟ್ಟಿನಲ್ಲಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಕೇಳಿಬಂದಿರುವ ಲಂಚದ ಆರೋಪ ಪ್ರಕರಣ ಇದೀಗ ಹಾಸನದಲ್ಲಿ ರಾಜಕೀಯ ಮತ್ತು ಆಡಳಿತಾತ್ಮಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪಾರದರ್ಶಕ ತನಿಖೆಗೆ ಒತ್ತಾಯ ಕೇಳಿಬಂದಿದೆ
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ